ಕೆಮ್ಮಣ್ಣು :ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನ
Kemmannu News Network, 15-12-2018 19:41:25
ಹಾಲಾಡಿ :ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನ
ಉಡುಪಿ, ಡಿಸೆಂಬರ್ 14 (ಕರ್ನಾಟಕ ವಾರ್ತೆ) : ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹಾಲಾಡಿ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕ ಸ್ಥಾನವನ್ನು ಗೌರವ ಸಂಭಾವನೆ ಆಧಾರದ ಮೇಲೆ ನೇಮಕಾತಿ ಮಾಡಲು ಬ್ಯಾಕ್ ಲಾಗ್ ಹುದ್ದೆಯಾದ ಪರಿಶಿಷ್ಟ ಜಾತಿ-ಅಂಗವಿಕಲ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸದರಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ-ಅಂಗವಿಕಲ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ, ಬ್ಯಾಕ್ಲಾಗ್ ಹುದ್ದೆಯಡಿ ಪರಿಶಿಷ್ಟ ಜಾತಿ ಇತರೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು ಹಾಗೂ ಅದೇ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಇತರೆ ದೃಢೀಕೃತ ದಾಖಲೆಗಳನ್ನು ಪಂಚಾಯತಿಗೆ ಸಲ್ಲಿಸಲು ಡಿಸೆಂಬರ್ 28 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಾಲಾಡಿ ಗ್ರಾಮ ಪಂಚಾಯತ್ ಅಥವಾ ಜಿಲ್ಲಾ ಕೇಂದ್ರ ಗ್ರಂಥಾಲಯ, ಉಡುಪಿ (ದೂರವಾಣಿ ಸಂಖ್ಯೆ:0820-2523438) ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಮ್ಮಣ್ಣು :ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನ
ಉಡುಪಿ, ಡಿಸೆಂಬರ್ 14 (ಕರ್ನಾಟಕ ವಾರ್ತೆ) : ಉಡುಪಿ ಜಿಲ್ಲೆ ಉಡುಪಿ ತಾಲೂಕಿನ ಕೆಮ್ಮಣ್ಣು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕ ಸ್ಥಾನವನ್ನು ಗೌರವ ಸಂಭಾವನೆ ಆಧಾರದ ಮೇಲೆ ನೇಮಕಾತಿ ಮಾಡಲು ಬ್ಯಾಕ್ ಲಾಗ್ ಹುದ್ದೆಯಾದ 2ಎ-ಅಂಗವಿಕಲ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸದರಿ ಗ್ರಾಮದಲ್ಲಿ 2ಎ-ಅಂಗವಿಕಲ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ, ಬ್ಯಾಕ್ಲಾಗ್ ಹುದ್ದೆಯಡಿ 2ಎ ಇತರೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು ಹಾಗೂ ಅದೇ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಇತರೆ ದೃಢೀಕೃತ ದಾಖಲೆಗಳನ್ನು ಪಂಚಾಯತಿಗೆ ಸಲ್ಲಿಸಲು ಡಿಸೆಂಬರ್ 28 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಕೆಮ್ಮಣ್ಣು ಗ್ರಾಮ ಪಂಚಾಯತ್ ಅಥವಾ ಜಿಲ್ಲಾ ಕೇಂದ್ರ ಗ್ರಂಥಾಲಯ, ಉಡುಪಿ (ದೂರವಾಣಿ ಸಂಖ್ಯೆ:0820-2523438) ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಬಾಲ ಭವನದಲ್ಲಿ ವಾರಾಂತ್ಯದ ಕಾರ್ಯಕ್ರಮ
ಉಡುಪಿ, ಡಿಸೆಂಬರ್ 14 (ಕರ್ನಾಟಕ ವಾರ್ತೆ) : ಜಿಲ್ಲಾ ಬಾಲಭವನ ಬನ್ನಂಜೆ, ಉಡುಪಿ ಇಲ್ಲಿ ಡಿಸೆಂಬರ್ 15 ರಿಂದ ಪ್ರತೀ ಶನಿವಾರ ಸಂಜೆ ಮತ್ತು ಭಾನುವಾರ ಬೆಳಗ್ಗೆ ಮತ್ತು ಸಂಜೆ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ಮಕ್ಕಳಿಗೆ ಚಿತ್ರಕಲೆ, ಕರಕುಶಲ, ರಂಗಚಟುವಟಿಕೆ, ಸಮೂಹ ನೃತ್ಯ, ಸಂಗೀತ, ಯೋಗ ಚಟುವಟಿಕೆಗಳನ್ನು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ, ಸೌಲಭ್ಯ ವಂಚಿತ ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, 6 ರಿಂದ 16 ವರ್ಷದೊಳಗಿನ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574978 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಉಡುಪಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇವರಾಜ ಅರಸು ನಿಗಮ : ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ
ಉಡುಪಿ, ಡಿಸೆಂಬರ್ 14 (ಕರ್ನಾಟಕ ವಾರ್ತೆ) : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ 2018-19ನೇ ಸಾಲಿಗೆ ಹಿಂದುಳಿದ ವರ್ಗಗಳ ನಿರುದ್ಯೋಗಿ ಪದವಿಧರರಿಗೆ ಸ್ವಯಂ ಉದ್ಯೋಗ ಸಾಲ ಸೌಲಭ್ಯವನ್ನು ವಾರ್ಷಿಕ ಶೇ.6ರ ಬಡ್ಡಿದರದಲ್ಲಿ ಗರಿಷ್ಠ 10.00 ಲಕ್ಷ ರೂ.ಗಳ ವರೆಗೆ ಸಾಲ ಒದಗಿಸಲಾಗುತ್ತಿದೆ. ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸೌಲಭ್ಯ ಪಡೆಯಲು ಹೊಂದಿರಬೇಕಾದ ಆರ್ಹತೆಗಳು. ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು (ವಿಶ್ವಕರ್ಮ ಅದರ ಉಪ ಸಮುದಾಯಗಳನ್ನು ಮತ್ತು ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ), ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 40,000 ರೂ. ಗಳು, ಪಟ್ಟಣ ಪ್ರದೇಶದವರಿಗೆ 55,000 ರೂ. ಗಳ ಒಳಗಿರಬೇಕು, ಅರ್ಜಿದಾರರು ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿಧರರಾಗಿದ್ದು, ನಿರುದ್ಯೋಗಿಗಳಾಗಿರಬೇಕು, ಅರ್ಜಿದಾರರು ಆಧಾರ್ ಸಂಖ್ಯೆ ಹೊಂದಿರಬೇಕು, ಅರ್ಜಿದಾರರು
ಐ.ಎಫ್.ಸಿ. ಕೋಡ್ ಹೊಂದಿರುವ ರಾಷ್ಟ್ರೀಕೃತ/ಗ್ರಾಮೀಣ ಬ್ಯಾಂಕ್ ಖಾತೆಗಳನ್ನು ಹೊಂದಿರಬೇಕು, ಅರ್ಜಿದಾರರ ವಯಸ್ಸು ಕನಿಷ್ಠ 25 ರಿಂದ ಗರಿಷ್ಠ 40 ವರ್ಷಗಳ ಮಿತಿಯಲ್ಲಿರಬೇಕು.
ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗದ ಅಭ್ಯರ್ಥಿಗಳು ಉಡುಪಿ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಛೇರಿ ಅಥವಾ ನಿಗಮದ ವೆಬ್ ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ ಇಲ್ಲಿ ಅರ್ಜಿಗಳನ್ನು ಉಚಿತವಾಗಿ ಪಡೆಯಬಹುದಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ /ದಾಖಲಾತಿಗಳೊಂದಿಗೆ ಡಿಸೆಂಬರ್ 29 ರ ಒಳಗೆ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), “ರಜತಾದ್ರಿ” ಜಿಲ್ಲಾಧಿಕಾರಿಗಳ ಸಂಕೀರ್ಣ, ಮಣಿಪಾಲ ಉಡುಪಿ ಕಛೇರಿಗೆ ಸಲ್ಲಿಸುವುದು
ಒಂದು ಬಾರಿ ನಿಗಮದ ಯಾವುದಾದರು ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್: www.karnataka.gov.in/dbcdc ಮತ್ತು ದೂರವಾಣಿ ಸಂಖ್ಯೆ:0820-2574882 ಅನ್ನು ಸಂಪರ್ಕಿಸುವಂತೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link