ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ
Kemmannu News Network, 05-10-2023 15:50:50
ಉಡುಪಿ, ಅಕ್ಟೋಬರ್ 05 : ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್ಗಳು ನಿರಂತರವಾಗಿ ಅಪಘಾತಗಳಿಗೆ ತುತ್ತಾಗಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳು ಹೆಚ್ಚಾಗಿದ್ದು, ಇಂತಹ ಕಾರ್ಮಿಕರು ಅಪಘಾತಕ್ಕಿಡಾಗಿ ಮರಣಕ್ಕೆ ತುತ್ತಾಗುವ, ಶಾಶ್ವತ ದುರ್ಬಲತೆ ಅಥವಾ ತಾತ್ಕಾಲಿಕ ದುರ್ಬಲತೆ ಹೊಂದಿದ ಸಂದರ್ಭದಲ್ಲಿ, ಅವರ ದುಡಿಮೆಯನ್ನೇ ಅವಲಂಬಿಸಿರುವ ಅವರ ಕುಟುಂಬವು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತದೆ. ಅಪಘಾತದಿಂದಾಗಿ ಸಂಕಷ್ಟಕ್ಕೆ ಸಿಲುಕುವ ಚಾಲಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ನೆರವು ನೀಡಲು ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, ಈ ಯೋಜನೆಯಡಿ ಚಾಲಕರೊಂದಿಗೆ ನಿರ್ವಾಹಕರು ಹಾಗೂ ಕ್ಲೀನರ್ಗಳಿಗೂ ಸಹ ಅಪಘಾತ ವಿಮಾ ಸೌಲಭ್ಯವನ್ನು ವಿಸ್ತರಿಸಲು ಪರಿಷ್ಕೃತ ಕರ್ನಾಟಕ ರಾಜ್ಯ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯನ್ನು ಜಾರಿಗೆ ತಂದಿರುತ್ತದೆ.
ಸಾರಿಗೆ ಇಲಾಖೆಯಿಂದ ರಾಜ್ಯದಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ವಾಹನ ಚಾಲನಾ ಪರವಾನಗಿ ಪಡೆದ ಚಾಲಕರು ತಕ್ಷಣದಿಂದ ಫಲಾನುಭವಿಯೆಂದು ಪರಿಗಣಿಸುತ್ತಿದ್ದು, ನಿರ್ವಾಹಕರು ಹಾಗೂ ಕ್ಲೀನರ್ಗಳು ಯೋಜನೆಯಡಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಹಾಗೂ ನೋಂದಣಾಧಿಕಾರಿಗಳನ್ನು ಸಂಪರ್ಕಿಸಿ, ಇತ್ತೀಚಿನ ಎರಡು ಭಾವಚಿತ್ರ ಮತ್ತು ಸ್ಟಾಂಪ್ ಸ್ಶೆಜ್ ಒಂದು ಭಾವಚಿತ್ರ, ವಿಳಾಸದ ಪುರಾವೆ (ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ), ವಯಸ್ಸಿನ ದೃಢೀಕರಣ ಪತ್ರ (ಆಧಾರ ಕಾರ್ಡ್/ಎಸ್.ಎಸ್.ಎಲ್.ಸಿ ಅಂಕಪಟ್ಟಿ/ಪಾನ್ ಕಾರ್ಡ್/ನೋಂದಾಯಿತ ಎಂ.ಬಿ.ಬಿ.ಎಸ್ ವೈದ್ಯರಿಂದ ವಯ್ಯಸಿನ ಪ್ರಮಾಣ ಪತ್ರ/ ಶಾಲಾ ದಾಖಲೆ/ ಡಿ.ಎಲ್/ಪಾಸ್ಪೋರ್ಟ್), ಬ್ಯಾಂಕ್ ಖಾತೆ ಪ್ರತಿ. ನಿಗಧಿಪಡಿಸಿದ ಉದ್ಯೋಗ ಪ್ರಮಾಣ ಪತ್ರ, ಕರ್ತವ್ಯ ನಿರ್ವಹಿಸುತ್ತಿರುವ ಸಂಸ್ಥೆ/ಮಾಲೀಕರಿಂದ ಗುರುತಿನ ಚೀಟಿ (ಲಭ್ಯವಿದ್ದಲ್ಲಿ)ಯನ್ನು ನೀಡಿ ನೋಂದಾಯಿಸಿಕೊಳ್ಳಬಹುದಾಗಿದೆ.
ಅರ್ಜಿದಾರರು ರಾಜ್ಯದ ನಿವಾಸಿಯಾಗಿದ್ದು, 20 ರಿಂದ 70 ವರ್ಷದೊಳಗಿನವರಾಗಿರಬೇಕು. ನಿರ್ವಾಹಕರಿಗೆ ಸಂಬಂಧಿಸಿದಂತೆ ಮೋಟಾರ್ ವಾಹನಗಳ ಕರ್ನಾಟಕ ನಿಯಮಗಳು 1989ರ ಅಡಿಯಲ್ಲಿ ರಾಜ್ಯದಲ್ಲಿ ನೀಡಲಾಗಿರುವ ಊರ್ಜಿತ ನಿರ್ವಾಹಕರ ಪರವಾನಗಿಯನ್ನು ಸಾರಿಗೆ ಇಲಾಖೆಯಿಂದ ಪಡೆದಿರಬೇಕು. ವಾಣಿಜ್ಯ ಸಾರಿಗೆ ವಾಹನ ಸಂಸ್ಥೆಯಲ್ಲಿ 12 ತಿಂಗಳಲ್ಲಿ 90 ದಿನಗಳಿಗೆ ಕಡಿಮೆ ಇಲ್ಲದಂತೆ ಕಾರ್ಯನಿರ್ವಹಿಸಿರಬೇಕು, ಒಮ್ಮೆ ನೋಂದಾಣಿಯಾದ ನಂತರ ನೀಡಲಾದ ಗುರುತಿನ ಚೀಟಿಯು 3 ವರ್ಷಗಳವರೆಗೆ ಅಸ್ಥಿತ್ವದಲ್ಲಿರುತ್ತದೆ. ನಂತರ ನವೀಕರಣಕ್ಕೆ ನಿಗಧಿಪಡಿಸಿದ ದಾಖಲೆಗಳನ್ನು ನೋಂದಣಾಧಿಕಾರಿಗಳ ಕಛೇರಿಗೆ ಸಲ್ಲಿಸಿ ನವೀಕರಿಸಿಕೊಳ್ಳಬಹುದಾಗಿದೆ.
ನಿರ್ವಾಹಕರು/ಕ್ಲೀನರ್ಗಳು ನೋಂದಣಿಯಾದ ನಂತರ ವೃತ್ತಿಯನ್ನು ಬದಲಾಯಿಸಿದಲ್ಲಿ ಫಲಾನುಭವಿಯಾಗಿ ಮುಂದುವರೆಯಲು ಅನರ್ಹರಾಗುತ್ತಾರೆ. ಫಲಾನುಭವಿಯು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆ 2008ರ ಅನುಸೂಚಿ 2ರಲ್ಲಿ ತಿಳಿಸಿರುವ ಕಾಯ್ದೆಗೆ ಒಳಪಟ್ಟಿರಬಾರದು ಮತ್ತು ಸದರಿ ಕಾಯ್ದೆಗೆ ಒಳಪಟ್ಟಿರುವುದಿಲ್ಲ ಎಂದು ಸ್ವಯಂ ಘೋಷಣೆಗೆ ಒಪ್ಪಿ ಸಹಿ ಮಾಡಬೇಕು.
ಈ ಯೋಜನೆಯು ಕರ್ನಾಟಕ ರಾಜ್ಯದ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್ಗಳಿಗೆ ಅನ್ವಯಿಸಲಿದ್ದು, ಯೋಜನೆಯ ಸೌಲಭ್ಯಗಳು ಕರ್ತವ್ಯದಲ್ಲಿರುವಾಗ ಹಾಗೂ ಇಲ್ಲದಿರುವಾಗಲೂ ಸಹ ಲಭ್ಯವಾಗುತ್ತವೆ.
ಯೋಜನೆಯಡಿ ದೊರಕುವ ಅಪಘಾತ ಸೌಲಭ್ಯಗಳು:-
ಅಪಘಾತದಿಂದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್ಗಳು ಮರಣ ಹೊಂದಿದಲ್ಲಿ, ಅವರ ನಾಮನಿರ್ದೇಶಿತರಿಗೆ 5 ಲಕ್ಷ ರೂ. ಪರಿಹಾರ ಹಾಗೂ ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಾಗ, ಫಲಾನುಭವಿಗೆ ದುರ್ಬಲತೆಯ ಪ್ರಮಾಣಕ್ಕನುಗುಣವಾಗಿ 2 ಲಕ್ಷ ರೂ. ವರೆಗೆ ಪರಿಹಾರ ನೀಡಲಾಗುವುದು.
ಅಪಘಾತಕೊಳ್ಳಗಾಗಿ ಆಸ್ಪತ್ರೆಯಲ್ಲಿ 15 ದಿನಗಳಿಗಿಂತ ಕಡಿಮೆ ಅವಧಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ, ಗರಿಷ್ಠ 50,000 ರೂ. ರವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ, ಇವುಗಳಲ್ಲಿ ಯಾವುದು ಕಡಿಮೆಯೊ ಅದನ್ನು ಹಾಗೂ 15 ದಿನಗಳಿಗಿಂತ ಹೆಚ್ಚು ದಿನ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ, ಗರಿಷ್ಠ 1 ಲಕ್ಷ ರೂ. ವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ ಇವುಗಳಲ್ಲಿ ಯಾವುದು ಕಡಿಮೆಯೊ ಅದನ್ನು ಮರುಪಾವತಿ ಪಡೆಯಬಹುದಾಗಿದೆ.
ಶೈಕ್ಷಣಿಕ ಧನ ಸಹಾಯ: 2018-19 ನೇ ಸಾಲಿನಿಂದ ಅಪಘಾತದ ಕಾರಣ ನಿಧನರಾದ ಅಥವಾ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ ಫಲಾನುಭವಿಗಳ ಇಬ್ಬರು ಮಕ್ಕಳಿಗೆ ಪದವಿಪೂರ್ವ ವ್ಯಾಸಂಗದವರೆಗೆ ವಾರ್ಷಿಕ 10,000 ರೂ.ಗಳ ಶೈಕ್ಷಣಿಕ ಸಹಾಯಧನ ನೀಡಲಾಗುತ್ತಿದ್ದು, ಶೈಕ್ಷಣಿಕ ಸಹಾಯಧನ ಕ್ಕಾಗಿ ನಿಗದಿತ ನಮೂನೆಯಲ್ಲಿ ಮೃತರಾದ/ಸಂಪೂರ್ಣ ಅಂಗ ದುರ್ಬಲತೆ ಉಂಟಾದ ಚಾಲಕರ ಇಬ್ಬರು ಮಕ್ಕಳು ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮಂಡಳಿಗೆ ನೇರವಾಗಿ ಅಥವಾ ತಾಲೂಕು/ಜಿಲ್ಲಾ ಮಟ್ಟದ ಕಾರ್ಮಿಕ ಇಲಾಖಾ ಕಚೇರಿಯಲ್ಲಿ ಸಲ್ಲಿಸಿದ್ದಲ್ಲಿ, ಅದನ್ನು ಪರಿಶೀಲಿಸಿ ನೇರವಾಗಿ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡಲಾಗುವುದು.
ಈ ಯೋಜನೆಯಡಿ ನಿರ್ವಾಹಕರು ಮತ್ತು ಕ್ಲೀನರ್ಗಳು ಷರತ್ತುಗಳನ್ವಯ ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ಅಧಿಕಾರಿಯವರ ಕಛೇರಿ, ರಜತಾದ್ರಿ ಎ-ಬ್ಲಾಕ್, 1ನೇ ಮಹಡಿ, ಇಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. ಆಕಸ್ಮಿಕ ಅಪಘಾತಕ್ಕೀಡಾದ ಸಂದರ್ಭದಲ್ಲಿ ಈ ಯೋಜನೆಯಡಿ ದೊರೆಯುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Final Journey of Emilian Bridget D’Souza (80 years) | LIVE from Kemmannu | Udupi |
2 BHK Flat for sale on the 6th floor of Eden Heritage, Santhekatte, Kallianpur, Udupi
Agricultural Land at Alevoor and Malpe (UDUPI) for Sale - Contact Direct to 9008199430.
Final Journey of Judith Lewis (91 years) | LIVE From Kallianpur
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link