Brief Udupi News with Pictures
Kemmannu News Network, 19-07-2018 22:15:13
ಕೋಟ ಹೆಚ್.ಶ್ರೀಧರ ಹಂದೆಯವರಿಗೆ ವನಜ ರಂಗಮನೆ ಪ್ರಶಸ್ತಿ-2018
ಸುಳ್ಯದ ರಂಗಮನೆ ಸಾಂಸ್ಕøತಿಕ ಕಲಾ ಕೇಂದ್ರವು ರಂಗಮನೆ ಸ್ಥಾಪಕಿ, ಕಲಾ ಪೋಷಕಿ ದಿ|ವನಜಾಕ್ಷಿ ಜಯರಾಮ ಇವರ ಸ್ಮರಣಾರ್ಥ ನೀಡುವ 2018ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಯನ್ನು ರಾಷ್ಟ್ರ ಪ್ರಶಸ್ತಿ ಪುರಸ್ಕøತ ಗುರು ಹೆಚ್.ಶ್ರೀಧರ ಹಂದೆ ಕೋಟ ಇವರಿಗೆ ನೀಡಲಾಗುವುದೆಂದು ರಂಗನಿರ್ದೇಶಕ ಜೀವನ್ರಾಂ ಸುಳ್ಯ ತಿಳಿಸಿದ್ದಾರೆ.
ಮಕ್ಕಳ ಯಕ್ಷಗಾನ ಮೇಳವೆಂಬ ಪರಿಕಲ್ಪನೆಯನ್ನು ಮೊಟ್ಟ ಮೊದಲ ಬಾರಿ ಸಾಕಾರಗೊಳಿಸಿದ ಕೀರ್ತಿ ಶ್ರೀಧರ ಹಂದೆಯವರಿಗೆ ಸಲ್ಲುತ್ತದೆ. 40 ವರ್ಷ ಹಿಂದಿ ಉಪನ್ಯಾಸಕರಾಗಿ, ಮುಖ್ಯೋಪಧ್ಯಾಯರಾಗಿ ಸೇವೆ ಸಲ್ಲಿಸಿದ ಇವರು 1991ರಲ್ಲಿ ರಾಷ್ಟ್ರಪತಿ ಶಂಕರ್ ದಯಾಳ್ ಶರ್ಮರವರಿಂದ ಅತ್ಯುತ್ತಮ ಶಿಕ್ಷಕ ರಾಷ್ಟ್ರಪತಿಯನ್ನು ಪಡೆದಿರುತ್ತಾರೆ.
ಸಾಲಿಗ್ರಾಮ ಮಕ್ಕಳ ಮೇಳವನ್ನು ಸ್ಥಾಪಿಸಿ , ಮಕ್ಕಳಿಗೆ ಯಕ್ಷಕಲೆಯನ್ನು ಶಾಸ್ತ್ರೀಯವಾಗಿ ತರಬೇತಿ ನೀಡಿದವರು. ಭಾರತ ಮಾತ್ರವಲ್ಲ ಅಮೇರಿಕಾ, ಬೆಹರೈನ್, ಲಂಡನ್, ಮೆಂಚೆಸ್ಟರ್ ಮುಂತಾದೆಡೆ ಪ್ರದರ್ಶನ ನೀಡುವ ಮೂಲಕ ಯಕ್ಷಗಾನವನ್ನು ವಿಶ್ವವ್ಯಾಪಿಗೊಳಿಸಲು ಶ್ರಮಿಸಿದವರು. ಕಳೆದ 43 ವರ್ಷಗಳಲ್ಲಿ 2000ಕ್ಕೂ ಮಿಕ್ಕಿ ಮಕ್ಕಳ ಯಕ್ಷ ಪ್ರದರ್ಶನ ನೀಡಿದವರು. ಭಾಗವತ, ಗಮಕಿ, ಕವಿ, ನಟ-ನಿರ್ದೆಶಕ, ನಾಟಕಕಾರ, ಸಂಘಟಕನಾಗಿಯೂ ಗುರುತಿಸಿಕೊಂಡಿರುವ ಶ್ರೀ ಹಂದೆಯವರಿಗೆ ಆಗಸ್ಟ್ 12ರಂದು ಸುಳ್ಯ ರಂಗಮನೆಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು.
ಪ್ರಶಸ್ತಿಯು ಶಾಶ್ವತ ಫಲಕ, ಕಲಾತ್ಮಕ ಸ್ಮರಣಿಕೆ, ಶಾಲು, ಫಲಪುಷ್ಪಗಳೊಂದಿಗೆ ರೂ.ಹತ್ತು ಸಾವಿರ ನಗದು ಹೊದಿರುತ್ತದೆ.
ಪರ್ಯಾಯ ಶ್ರೀ ಪಲಿಮಾರು ಮಠ, ಶ್ರೀ ಕೃಷ್ಣ ಮಠ, ಉಡುಪಿಯ ಆಶ್ರಯದಲ್ಲಿ ಇಂದು ರವಿವಾರ, ದಿನಾಂಕ ಜುಲೈ 15 ರಂದು ಮಧ್ಯಾಹ್ನ ರಾಜಾಂಗಣದಲ್ಲಿ ಉಡುಪಿಯ ಹೆಜ್ಜೆ-ಗೆಜ್ಜೆ ಪ್ರತಿಷ್ಠಾನ(ರಿ) ಇದರ ರಜತ ಮಹೋತ್ಸವದ ಅಂಗವಾಗಿ "ಹೆಜ್ಜೆ ಗೆಜ್ಜೆ - ಬೆಳ್ಳಿ ಹೆಜ್ಜೆ" ಕಾರ್ಯಕ್ರಮವನ್ನು ಪರ್ಯಾಯ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಉದ್ಘಾಟನೆ ಮಾಡಿ ಅನುಗ್ರಹ ಸಂದೇಶ ನೀಡಿದರು. ಉಡುಪಿಯ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್, ಹಿರಿಯ ಕಲಾ ವಿಮರ್ಶಕರಾದ ಶ್ರೀ ಎ. ಈಶ್ವರಯ್ಯ, ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನುಗಾರಿಕಾ ಮಾರುಕಟ್ಟೆ ಫೆಡರೇಷನ್ ಅಧ್ಯಕ್ಷರಾದ ಶ್ರೀ ಯಶಪಾಲ್ ಸುವರ್ಣ, ಮಣಿಪಾಲ ಮಾಹೆಯ ನಿವೃತ್ತ ಕುಲಸಚಿವರಾದ ಶ್ರೀ ಟಿ. ರಂಗ ಪೈ, ಮಂಗಳೂರಿನ ಶ್ರೀನಿವಾಸ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಶ್ರೀಮತಿ ವಿಜಯಲಕ್ಷ್ಮಿ ಆರ್. ರಾವ್, ಮಂಗಳೂರಿನ ಎ. ಶ್ಯಾಮ ರಾವ್ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಶ್ರೀಮತಿ ಮಿತ್ರ ಎಸ್. ರಾವ್, ಶ್ರೀ ಪಲಿಮಾರು ಮಠದ ದಿವಾನರಾದ ಶ್ರೀ ವೇದವ್ಯಾಸ ತಂತ್ರಿ ಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ವಿದುಷಿ ಕುಮಾರಿ ದೀಕ್ಷಾ ರಾಮಕೃಷ್ಣ ರವರು ಪ್ರಾರ್ಥನೆ ಸಲ್ಲಿಸಿದರು. ಡಾ|| ಎಸ್ ಎಲ್ ಕಾರ್ಣಿಕ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರನ್ನು ಸ್ವಾಗತಿಸಿದರು. ಹೆಜ್ಜೆ ಗೆಜ್ಜೆ ಪ್ರತಿಷ್ಠಾನ (ರಿ) ಸಂಸ್ಥೆಯ ಮುಖ್ಯಸ್ಥರಾದ ವಿದುಷಿ ಶ್ರೀಮತಿ ಯಶಾ ರಾಮಕೃಷ್ಣ ರವರು ಪ್ರಾಸ್ತಾವಿಕ ಭಾಷಣ ಮಾಡಿದರು ಮತ್ತು ಸಂಸ್ಥೆಯ ಕಿರು ಚಿತ್ರಣ ನೀಡಿದರು. ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ದೀಪ ಬೆಳಗಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಮ್ಮ ಹಿಂದಿನ ಪರ್ಯಾಯದ ಅವಧಿಯಲ್ಲಿ ಆಯೋಜಿಸಿದ್ದ ಹೆಜ್ಜೆ ಗೆಜ್ಜೆ ಸಂಸ್ಥೆಯ ದಶಮಾನೋತ್ಸವ ಕಾರ್ಯಕ್ರಮವನ್ನು ಉಲ್ಲೇಖಿಸಿದ ಪೂಜ್ಯ ಸ್ವಾಮೀಜಿಯವರು, ಈ ಸಲದ ಪರ್ಯಾಯದ ಅವಧಿಯಲ್ಲಿ ಹೆಜ್ಜೆ ಗೆಜ್ಜೆ ಸಂಸ್ಥೆಯ ರಜತ ಮಹೋತ್ಸವ ಸಂದರ್ಭವು ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ನಡೆಯುತ್ತಿರುವುದು ತಮಗೆ ಸಂತಸ ತಂದಿದೆ ಎಂದು ಹೇಳಿದರು. ಕಳೆದ 25 ವರ್ಷಗಳಲ್ಲಿ ದೇಶದಾದ್ಯಂತ ಸಾವಿರಕ್ಕೂ ಅಧಿಕ ನ್ರತ್ಯ ಮತ್ತು ಸಂಗೀತ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಪ್ರದರ್ಶಿಸಿರುವ ಹೆಜ್ಜೆ ಗೆಜ್ಜೆ ಸಂಸ್ಥೆಯು ಮತ್ತಷ್ಟು ಯಶಸ್ಸನ್ನು ಪಡೆಯಲಿ ಎಂದು ಆಶೀರ್ವದಿಸಿದರು.
ಶ್ರೀ ಯಶಪಾಲ್ ಸುವರ್ಣ ರವರು ಮಾತನಾಡಿ, ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಇಂದಿನ ಸಮಾಜಕ್ಕೆ ಅತೀ ಅಗತ್ಯವಾಗಿದ್ದು, ಭಾರತೀಯ ನ್ರತ್ಯ ಪರಂಪರೆಗೆ ವಿಶೇಷ ಕೊಡುಗೆಯನ್ನು ನೀಡುತ್ತಿರುವ ಹೆಜ್ಜೆ ಗೆಜ್ಜೆ ಸಂಸ್ಥೆಯನ್ನು ಮತ್ತಷ್ಟು ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ಅಧ್ಯಕ್ಷೀಯ ಭಾಷಣ ಮಾಡಿದ ಶ್ರೀ ರಘುಪತಿ ಭಟ್ ರವರು ಮಾತನಾಡಿ, ಕಲೆ-ಸಾಹಿತ್ಯ-ಸಂಸ್ಕ್ರತಿಗೆ ಹೆಸರು ವಾಸಿಯಾದ ಉಡುಪಿ ಜಿಲ್ಲೆಯ ಗರಿಮೆಯನ್ನು ಮತ್ತಷ್ಟು ಹೆಚ್ಚಿಸುವಲ್ಲಿ ಸಹಕಾರಿಯಾಗಿರುವ ಹೆಜ್ಜೆ ಗೆಜ್ಜೆ ಸಂಸ್ಥೆಯ ರಜತಮಹೋತ್ಸವ ಸಮಾರಂಭದ ಸರಣಿ ಕಾರ್ಯಕ್ರಮಗಳಿಗೆ ತನ್ನ ಸಂಪೂರ್ಣ ಸಹಕಾರವಿದೆ, ಹಾಗೂ ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಧನಸಹಾಯವನ್ನು ಪಡೆಯುವಲ್ಲಿ ಪ್ರಯತ್ನಿಸುತ್ತೇನೆ ಎಂದು ಹೇಳಿದರು. 2006 ನೇಯ ಇಸವಿಯಲ್ಲಿ, ಯಕ್ಷ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭ ಮಾಡಿದ್ದನ್ನು ಉಲ್ಲೇಖಿಸಿದ ರಘುಪತಿ ಭಟ್ ರವರು, ಭಾರತೀಯ ನ್ರತ್ಯ ಪರಂಪರೆಯನ್ನು ಬೆಳೆಸಿಕೊಂಡು ಹೋಗುವುದು ಎಲ್ಲರ ಕರ್ತವ್ಯ ಎಂದು ಹೇಳಿದರು.
ಶ್ರೀಮತಿ ವಿಜಯಲಕ್ಷ್ಮೀ ಆರ್ ರಾವ್ ರವರು ಹೆಜ್ಜೆ ಗೆಜ್ಜೆ ಸಂಸ್ಥೆಯನ್ನು ಅಭಿನಂದಿಸಿ, ಶುಭವನ್ನು ಹಾರೈಸಿದರು.
ಶ್ರೀಮತಿ ಮಿತ್ರಾ ಎಸ್ ರಾವ್ ರವರು ಮಾತನಾಡಿ, ಇಂದಿನ ಟಿವಿ ಚಾನೆಲ್ ಗಳಲ್ಲಿ ಪ್ರಸಾರವಾಗುತ್ತಿರುವ ಪಾಶ್ಚಿಮಾತ್ಯ ಸಂಸ್ಕೃತಿಯನ್ನು ವೈಭವೀಕರಿಸುವ ರಿಯಾಲಿಟಿ ಶೋ ಗಳ ಹಾವಳಿ ಹೆಚ್ಚುತ್ತಿದ್ದು, ಭಾರತೀಯ ನ್ರತ್ಯ ಮತ್ತು ಸಂಗೀತ ಪರಂಪರೆಯನ್ನು ಬೆಳೆಸಿಕೊಂಡು ಮುಂದಿನ ಪೀಳಿಗೆಗೆ ಕೊಂಡೊಯ್ಯುವಲ್ಲಿ ಹೆಜ್ಜೆ ಗೆಜ್ಜೆ ಯಂತಹ ಸಂಸ್ಥೆಗಳು ಪ್ರಮುಖ ಪಾತ್ರವನ್ನು ವಹಿಸುತ್ತಿವೆ ಎಂದು ಹೇಳಿದರು.
ಶ್ರೀ ಟಿ ರಂಗ ಪೈ ಯವರು ಮಾತನಾಡಿ, ಕಲೆ-ಸಾಹಿತ್ಯ-ಸಂಸ್ಕ್ರತಿ-ಅಭಿನಯಗಳ ಸಮಗ್ರ ಅಳವಡಿಕೆ ಇರುವ ಭರತನಾಟ್ಯವನ್ನು ಮತ್ತಷ್ಟು ಶ್ರೀಮಂತ ಗೊಳಿಸಬೇಕು ಎಂದು ಆಶಿಸಿದರು.
ಶ್ರೀ ಎ ಈಶ್ವರಯ್ಯ ರವರು ಮಾತನಾಡಿ, ಹಿಂದೆ, ಬ್ರಿಟಿಷರ ಕುಮ್ಮಕ್ಕಿನಿಂದ ಭರತನಾಟ್ಯದ ಕೆಲವು ಅಭಿನಯವನ್ನು ಕಡೆಗಣಿಸಲಾಗಿತ್ತು. ಆದರೆ, ಇಂದು, ಇಡೀ ಜಗತ್ತೇ ಭಾರತದ ಸಂಸ್ಕೃತಿ-ಕಲೆ-ಸಾಹಿತ್ಯವನ್ನು ಮುಕ್ತ ಕಂಠದಿಂದ ಶ್ಲಾಘಿಸುತ್ತಿದೆ. ಭಾರತೀಯ ಪರಂಪರೆಯನ್ನು ಮತ್ತಷ್ಟು ಮೇಲೆತ್ತರಕ್ಕೆ ಕೊಂಡೊಯ್ಯುವ ಸಂಕಲ್ಪವನ್ನು ನಾವೆಲ್ಲರೂ ಮಾಡಬೇಕಾಗಿದೆ. ಈ ದಿಶೆಯಲ್ಲಿ, ಉತ್ತಮ ಸಹಯೋಗವನ್ನು ನೀಡುತ್ತಿರುವ ಹೆಜ್ಜೆ ಗೆಜ್ಜೆ ಸಂಸ್ಥೆಗೆ ತನ್ನ ಶುಭಾಶಯಗಳು ಹಾಗೂ ತನ್ನ ಸಂಪೂರ್ಣ ಸಹಕಾರವಿದೆ ಎಂದು ಹೇಳಿದರು.
ಶ್ರೀ ಪಲಿಮಾರು ಮಠದ ದಿವಾನರಾದ ಶ್ರೀ ವೇದವ್ಯಾಸ ತಂತ್ರಿ ಯವರು ಸಂಸ್ಥೆಗೆ ಶುಭವನ್ನು ಕೋರಿದರು.
ಹೆಜ್ಜೆ ಗೆಜ್ಜೆ ಸಂಸ್ಥೆಯ ಉಪಾಧ್ಯಕ್ಷರಾದ ಡಾ|| ರಾಮಕೃಷ್ಣ ಹೆಗಡೆ ಯವರು ವಂದನಾರ್ಪಣೆ ಮಾಡಿದರು.
ಪ್ರೊ. ಶ್ರೀನಾಥ್ ರಾವ್ ಕೆ ಮತ್ತು ಶ್ರೀ ಹೆಚ್ ಎನ್ ವೆಂಕಟೇಶ್ ರವರು ಜಂಟಿಯಾಗಿ ಕಾರ್ಯಕ್ರಮವನ್ನು ನಿರೂಪಿಸಿದರು.
(ವರದಿ: ಶ್ರೀನಾಥ್ ರಾವ್ ಕೆ.)
ಜಿಲ್ಲೆಯಲ್ಲಿ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವರ ಪ್ರವಾಸ
ಉಡುಪಿ ಜುಲೈ 16 (ಕರ್ನಾಟಕ ವಾರ್ತೆ):- ರಾಜ್ಯದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ಅವರು ಜುಲೈ 18 ಮತ್ತು 19 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, 18 ರಂದು ಬೆಳಗ್ಗೆ 10.30 ಕ್ಕೆ ಹೆಜಮಾಡಿ ಕೋಡಿ ಮೀನುಗಾರಿಕಾ ಬಂದರಿಗೆ ಭೇಟಿ ಹಾಗೂ ಸ್ಥಳ ಪರಿಶೀಲನೆ ಮಾಡುವರು, ಮಧ್ಯಾಹ್ನ 12.30 ಕ್ಕೆ ಮಲ್ಪೆ ಮೀನುಗಾರಿಕೆ ಬಂದರಿಗೆ ಭೇಟಿ ನೀಡಿ, ಜನಪ್ರತಿನಿಧಿಗಳು, ಮೀನುಗಾರರ ಸಹಕಾರ ಸಂಘಗಳ ಪ್ರತಿನಿಧಿಗಳು ಹಾಗೂ ಮೀನುಗಾರರೊಂದಿಗೆ ಚರ್ಚೆ ನಡೆಸುವರು. ಸಂಜೆ 4.15 ಕ್ಕೆ ಉಡುಪಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೀನುಗಾರಿಕೆ ಇಲಾಖೆ, ಬಂದರು ಇಲಾಖೆ, ಹಾಗೂ ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳೊಡನೆ ಸಭೆ ನಡೆಸಿ, ನಂತರ ವಾಸ್ತವ್ಯ ಮಾಡುವರು.
ಜುಲೈ 19 ರಂದು ಬೆಳಗ್ಗೆ 10 ಕೋಡಿಕನ್ಯಾನ ಮೀನುಗಾರಿಕೆ ಜಟ್ಟಿಗೆ ಭೇಟಿ ನೀಡಲಿರುವರು. ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಗಂಗೋಳ್ಳಿ ಮೀನುಗಾರಿಕೆ ಬಂದರಿಗೆ ಭೇಟಿ, ಮಧ್ಯಾಹ್ನ 12.30 ಕ್ಕೆ ಮರವಂತೆ ಮೀನುಗಾರಿಕೆ ಬಂದರಿಗೆ ಭೇಟಿ ನೀಡುವರು.
ಹೆಚ್.ಐ.ವಿ ಸೋಂಕಿತರು ಸರಕಾರಿ ಸೌಲಭ್ಯಗಳಿಗೆ ಎಆರ್ಟಿ ಸೆಂಟರ್ ಮೂಲಕ ಅರ್ಜಿ ಸಲ್ಲಿಸಿ- ಜಿಲ್ಲಾಧಿಕಾರಿ
ಉಡುಪಿ, ಜುಲೈ 16 (ಕರ್ನಾಟಕ ವಾರ್ತೆ) : ಹೆಚ್.ಐ.ವಿ ಸೋಂಕಿತರು ಸರ್ಕಾರದ ವಿವಿಧ ಸೌಲಭ್ಯಗಳಿಗಾಗಿ , ವಿವಿಧ ಇಲಾಖೆಗಳಿಗೆ ಪದೇ ಪದೇ ಅಲೆಯುವ ಬದಲು ತಾವು ಚಿಕಿತ್ಸೆ ಒಡೆಯುವ ಎ.ಆರ್.ಟಿ ಸೆಂಟರ್ ಗಳಲ್ಲಿ ಅರ್ಜಿ ಸಲ್ಲಿಸಿದಲ್ಲಿ , ಅವುಗಳನ್ನು ಸಂಬಂದಪಟ್ಟ ಇಲಾಖೆಗಳಿಗೆ ಕಳುಹಿಸಿ, ಸೋಂಕಿತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚಿಸಿದರು.
ಅವರು ಸೋಮವಾರ , ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , ಜಿಲ್ಲೆಯಲ್ಲಿರುವ ಹೆಚ್.ಐ.ವಿ. ಸೋಂಕಿತ ಮತ್ತು ಭಾದಿತರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹೆಚ್.ಎಚ್.ವಿ ಪೀಡಿತರು ಸರಕಾರಿ ಸೌಲಭ್ಯಗಳಿಗೆ ಸರ್ಕಾರಿ ಕಚೇರಿಗಳಿಗೆ ತೆರಳಿದಾಗ ಅವರಿಗೆ ಸೋಂಕು ಇರುವುದು ಬಹಿರಂಗವಾಗುವ ಸಾದ್ಯತೆ ಇದ್ದು ಮತ್ತು ಅನಾರೋಗ್ಯದಿಂದ ಬಳಲುವ ಅವರು ಕಚೇರಿಗೆ ಅಲೆದಾಡುವುದು ತ್ರಾಸದಾಯಕವಾಗಿದ್ದು, ಇದನ್ನು ತಪ್ಪಿಸುವ ಸಲುವಾಗಿ ಅವರು ಚಿಕಿತ್ಸೆಗೆ ಹಾಜರಾಗುವ ಎ.ಆರ್.ಟಿ ಸೆಂಟರ್ ಗಳಲ್ಲಿ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳ ಕಚೇರಿಯಲ್ಲಿ , ತಮಗೆ ಅಗತ್ಯವಿರುವ ಸೌಲಭ್ಯಗಳನ್ನು ಮಂಜೂರು ಕೋರಿ ಅರ್ಜಿ ಸಲ್ಲಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ, ಈ ಅರ್ಜಿಗಳನ್ನು ಸಂಬಂದಪಟ್ಟ ಇಲಾಖೆಗಳಿಗೆ ಕಳುಹಿಸಿ ಅವರಿಗೆ ಸೂಕ್ತ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗೆ ಸೂಚಿಸಿದರು.
ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವತಿಯಿಂದ ಧನಶ್ರೀ ಯೋಜನೆಯಡಿ 2016-17 ರಲ್ಲಿ 26 ಮಂದಿಗೆ ಮತ್ತು 2017-18 ರಲ್ಲಿ ಅರ್ಜಿ ಸಲ್ಲಿಸಿರುವ 38 ಮಂದಿಗೆ ಸಾಲ ಮಂಜೂರು ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ತಿಳಿಸಿದರು, ಹೆಚ್ಚಿನ ಸೋಂಕಿತರು ಅನಾರೋಗ್ಯದ ಕಾರಣದಿಂದ ಸಾಲ ಮರುಪಾವತಿ ಮಾಡಲು ಶಕ್ತರಿಲ್ಲದ ಕಾರಣ, ರೈತರಿಗೆ ಕೃಷಿ ಸಾಲ ಮನ್ನಾ ಮಾಡಿದ ರೀತಿಯಲ್ಲಿ ತಮ್ಮ ಸಾಲವನ್ನೂ ಮನ್ನಾ ಮಾಡುವಂತೆ ಸೋಂಕಿತರು ಜಿಲ್ಲಾಧಿಕಾರಿಗಳನ್ನು ಕೋರಿದರು, ಸಾಲ ಮನ್ನಾ ಮಾಡುವ ಕುರಿತಂತೆ ನಿಗಮಕ್ಕೆ ಪತ್ರ ಬರೆಯುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ವಿಶೇಷ ವರ್ಗ ಯೋಜನೆಯಡಿಯಲ್ಲಿ, ಹೆಚ್ಐವಿ ಸೋಂಕಿತ ಕುಟುಂಬದವರಿಗೆ ಜಿಲ್ಲಾಡಳಿತ ಮತ್ತು ರಾಜೀವ್ಗಾಂಧಿ ಗ್ರಾಮೀಣ ವಸತಿ ನಿಗಮದ ಸಹಯೋಗದಲ್ಲಿ, 2014-15 ರಲ್ಲಿ 36 ಮಂದಿಗೆ 2016-17 ರಲ್ಲಿ 63 ಮಂದಿಗೆ , 2017-18 ರಲ್ಲಿ 33 ಮಂದಿಗೆ ವಸತಿ ಸೌಲಭ್ಯ ನೀಡಲಾಗಿದ್ದು, ಅರ್ಹರಿಗೆ ನಿವೇಶನ ಗುರುತಿಸುವ ಕುರಿತಂತೆ ಹಾಗೂ ಆರ್.ಟಿ.ಸಿ ಗೆ ಸಂಬಂದಪಟ್ಟ ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆಹರಿಸುವಂತೆ ಎಲ್ಲಾ ತಹಸೀಲ್ದಾರ್ ಗಳಿಗೆ ಸೂಚಿಸಿದ ಡಿಸಿ, ಜಿಲ್ಲೆಯಲ್ಲಿ ಪ್ರಸ್ತುತ ನಿವೇಶನ ರಹಿತರು ಮತ್ತು ವಸತಿ ರಹಿತರ ಸಮೀಕ್ಷೆ ನಡೆಯುತ್ತಿದ್ದು, ನಿವೇಶನ ಮತ್ತು ವಸತಿ ರಹಿತ ಎಲ್ಲಾ ಹೆಚ್ಐವಿ ಸೋಂಕಿತರು ಸಂಬಂದಪಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೆಸರು ಸೇರ್ಪಡೆ ಮಾಡುವಂತೆ ತಿಳಿಸಿದರು.
ಉಡುಪಿ ಹಾಗೂ ಕುಂದಾಪುರದ ಎ.ಆರ್.ಟಿ ಸೆಂಟರ್ ಗಳಲ್ಲಿ ಹೆಚ್ಐವಿ ಸೋಂಕಿತರಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಉಚಿತ ಕಾನೂನು ನೆರವು ನೀಡಲಾಗುತ್ತಿದ್ದು, ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಆರೋಗ್ಯ ಕರ್ನಾಟಕ ಯೋಜನೆಯಲ್ಲಿ, ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆ ಪಡೆಯುವ ಕುರಿತಂತೆ ಸೋಂಕಿತರಿಗೆ ವಿವರಿಸಿದ ಜಿಲ್ಲಾಧಿಕಾರಿಗಳು ,ನೊಂದಾಯಿತ ಆಸ್ಪತ್ರೆಗಳ ಪಟ್ಟಿ ಮತ್ತು ವಿವರಗಳನ್ನು ಎಲ್ಲ ಎನ್.ಜಿ.ಓ ಗಳಿಗೆ ಮತ್ತು ಎ.ಆರ್.ಟಿಸೆಂಟರ್ ಗಳ ಮೂಲಕ ವಿತರಿಸುವಂತೆ ಸೂಚಿಸಿದರು.
ಜಿಲ್ಲೆಯ ಖಾಸಗಿ ಬಸ್ ಗಳಲ್ಲಿ ಹೆಚ್.ಐ.ವಿ ಸೋಂಕಿತರಿಗೆ ನೀಡುತ್ತಿರುವ ರಿಯಾಯತಿ ಬಸ್ ಪಾಸ್ನಲ್ಲಿ , ಅವರ ಸೊಂಕಿನ ಕುರಿತು ಗೋಪ್ಯತೆ ಕಾಪಾಡುವಂತೆ ಹಾಗೂ ವಿಶೇಷ ವಿನ್ಯಾಸದ, ಉತ್ತಮ ಗುಣಮಟ್ಟದ ಪಾಸ್ಗಳನ್ನು ವಿತರಿಸಲು ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲಾ ಇಲಾಖೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಡಿ ಗ್ರೂಫ್ ನೌಕರರ ನೇಮಕ ಸಂದರ್ಭದಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರಿಗೆ ಆದ್ಯತೆ ನೀಡುವಂತೆ ಎಲ್ಲಾ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿದ್ದ ಪ್ರತಿಯೊಬ್ಬ ಹೆಚ್.ಐ.ವಿ. ಸೊಂಕಿತರ ಸಮಸ್ಯೆಗಳನ್ನು ವಿವರವಾಗಿ ಆಲಿಸಿದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ , ಸಮಸ್ಯೆಗಳ ವಿವರಗಳನ್ನು ನೀಡಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಹೆಚ್.ಐ.ವಿ ನಿಯಂತ್ರಣದಲ್ಲಿ ತೊಡಗಿರುವ ವಿವಿಧ ಎನ್.ಜಿ.ಓ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಜಿಲ್ಲಾ ಸರಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆಯ್ಕೆ
ಉಡುಪಿ ಜುಲೈ 16 (ಕರ್ನಾಟಕ ವಾರ್ತೆ):- ಆರೋಗ್ಯ ಇಲಾಖೆಯಲ್ಲಿ ಹಿರಿಯ ವೈದ್ಯಕೀಯ ಪ್ರಯೋಗ ಶಾಲಾ ಟೆಕ್ನೋಲೋಜಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಹೆಚ್.ಉದಯಕುಮಾರ್ ಶೆಟ್ಟಿ ಇವರನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ಉಡುಪಿ ಇದರ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಜಿಲ್ಲಾ ಸರಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಹುದ್ದೆಗೆ ಆಯ್ಕೆ
ಉಡುಪಿ ಜುಲೈ 16 (ಕರ್ನಾಟಕ ವಾರ್ತೆ):-ಪಶುಸಂಗೋಪನೆ ಇಲಾಖೆಯಲ್ಲಿ ಜಾನುವಾರು ಅಭಿವೃದ್ದಿ ಅಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬಿ.ರವೀಂದ್ರ ಹೆಬ್ಬಾರ್ ಇವರನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಉಡುಪಿ ಇದರ ಗೌರವಾಧ್ಯಕ್ಷರು ಹುದ್ದೆಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹಿಂ.ವರ್ಗದ ಕಾನೂನು ಪದವೀಧರರಿಗೆ ಶಿಷ್ಯವೇತನ
ಉಡುಪಿ ಜುಲೈ 16 (ಕರ್ನಾಟಕ ವಾರ್ತೆ):- 2018-19 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು ಅರ್ಹ ಮತ್ತು ಆಸಕ್ತ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಕಾನೂನು ಪದವೀಧರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,3ಎ ಮತ್ತು 3ಬಿಗಳಿಗೆ ಸೇರಿದವರಾಗಿರಬೇಕು. ಪ್ರವರ್ಗ 1ಕ್ಕೆ ರೂ.350000/- ಹಾಗೂ ಇತರೆ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿ ಪೋಷಕರ ಕುಟುಂಬದ ವಾರ್ಷಿಕ ಆದಾಯವು ರೂ.250000/- ಗಳ ಮಿತಿಯಲ್ಲಿರಬೇಕು. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಿಂದ ಹಿಂದಿನ ಎರಡು ವರ್ಷಗಳೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹಿಂದುಳಿದ ವರ್ಗಗಳ ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಹಾಗೂ 2ಎ,3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ವಯೋಮಿತಿಯಲ್ಲಿರಬೇಕು. ಅಭ್ಯರ್ಥಿಗಳು ಬಾರ್ ಕೌನ್ಸಿಲ್ನಲ್ಲಿ ತಮ್ಮ ಹೆಸರನ್ನು ನೊಂದಾಯಿಸಿರಬೇಕು.
ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅನುಭವಿ ಹಾಗೂ ನುರಿತ ವಕೀಲರ ಅಧೀüನದಲ್ಲಿ ವಕೀಲಿ ವೃತ್ತಿಯಲ್ಲಿ ತರಬೇತಿ ಕೊಡಿಸಿ ನಾಲ್ಕು ವರ್ಷಗಳವರೆಗೆ ತಿಂಗಳಿಗೆ ರೂ.4000/- ಗಳಂತೆ ಶಿಷ್ಯವೇತನ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉಡುಪಿ ಇಲ್ಲಿಂದ ಪಡೆದು ಭರ್ತಿ ಮಾಡಿ, ಕಾನೂನು ಪದವಿಗೆ ಸಂಬಂಧಿಸಿದ ಎಲ್ಲಾ ಅಂಕಪಟ್ಟಿಗಳ ಧೃಡೀಕೃತ ಪ್ರತಿಗಳು, ಬಾರ್ ಕೌನ್ಸಿಲ್ ನೋಂದಾವಣೆ ಪತ್ರದ ಪ್ರತಿ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ವಿವರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಲಗತ್ತಿಸಿ ಜುಲೈ 31 ರೊಳಗೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ,ರಜತಾದ್ರಿ, ಉಡುಪಿ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2573881/2574881 ಅನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.
ಅಲ್ಪಸಂಖ್ಯಾತ ವರ್ಗದ ಕಾನೂನು ಪದವೀಧರರಿಗೆ ಶಿಷ್ಯವೇತನ
ಉಡುಪಿ ಜುಲೈ 16 (ಕರ್ನಾಟಕ ವಾರ್ತೆ):- 2018-19 ನೇ ಸಾಲಿಗೆ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್,ಜೈನ್,ಬೌದ್ದರು ಮತ್ತು ಸಿಖ್ಖರು) ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು ಅರ್ಹ ಮತ್ತು ಆಸಕ್ತ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಕಾನೂನು ಪದವೀಧರರು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೆಕು. ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ.350000/- ಗಳ ಮಿತಿಯಲ್ಲಿರಬೇಕು. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಿಂದ ಹಿಂದಿನ ಎರಡು ವರ್ಷಗಳೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ವಯಸ್ಸು 30 ವರ್ಷಗಳ ಮಿತಿಯಲ್ಲಿರಬೆಕು. ಅಭ್ಯರ್ಥಿಗಳು ಬಾರ್ ಕೌನ್ಸಿಲ್ನಲ್ಲಿ ತಮ್ಮ ಹೆಸರನ್ನು ನೊಂದಾಯಿಸಿರಬೇಕು.
ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅನುಭವಿ ಹಾಗೂ ನುರಿತ ವಕೀಲರ ಅಧೀüನದಲ್ಲಿ ವಕೀಲಿ ವೃತ್ತಿಯಲ್ಲಿ ತರಬೇತಿ ಕೊಡಿಸಿ ನಾಲ್ಕು ವರ್ಷಗಳವರೆಗೆ ತಿಂಗಳಿಗೆ ರೂ.4000/- ಗಳಂತೆ ಶಿಷ್ಯವೇತನ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಜಿಲ್ಲಾ ಅಧಿಕಾರಿ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಉಡುಪಿ ಇಲ್ಲಿಂದ ಪಡೆದು ಭರ್ತಿ ಮಾಡಿ, ಕಾನೂನು ಪದವಿಗೆ ಸಂಬಂಧಿಸಿದ ಎಲ್ಲಾ ಅಂಕಪಟ್ಟಿಗಳ ಧೃಡೀಕೃತ ಪ್ರತಿಗಳು, ಬಾರ್ ಕೌನ್ಸಿಲ್ ನೋಂದಾವಣೆ ಪತ್ರದ ಪ್ರತಿ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ವಿವರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಲಗತ್ತಿಸಿ ಜುಲೈ 31 ರೊಳಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ರಜತಾದ್ರಿ, ಉಡುಪಿ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574881 ಅನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.
ಹಿರಿಯ ನಾಗರೀಕರಿಗೆ ಪ್ರಶಸ್ತಿ- ಅರ್ಜಿ ಆಹ್ವಾನ
ಉಡುಪಿ ಜುಲೈ 16 (ಕರ್ನಾಟಕ ವಾರ್ತೆ):- ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯ ಮಟ್ಟದಲ್ಲಿ ನಡೆಯುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಂದು ರಾಜ್ಯ ಪ್ರಶಸ್ತಿಗಾಗಿ ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ/ಸಾಹಿತ್ಯ/ಕಲೆ/ಕಾನೂನು/ಪ್ರತಿಭೆ-ಕ್ರೀಡೆ/ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಸಾಂಸ್ಥಿಕ ಪ್ರಶಸ್ತಿ, ಒಟ್ಟು 7 ಪ್ರಶಸ್ತಿಗಳನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತಿ ಉಳ್ಳವರು ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿಯವರ ಕಛೇರಿ, ‘ಸಿ’ ಬ್ಲಾಕ್, ತಳಮಹಡಿ, ಜಿಲ್ಲಾಧಿಕಾರಿ ಕಛೇರಿ, ರಜತಾದ್ರಿ, ಮಣಿಪಾಲ ಉಡುಪಿ ಇಲ್ಲಿಂದ ಅರ್ಜಿ ಪಡೆದು ನಮೂನೆಯಲ್ಲಿನ ಪ್ರತಿಯೊಂದು ಕಾಲಂನ್ನು ಸಹ ಪೂರ್ಣ ಮಾಹಿತಿಯೊಂದಿಗೆ ಕನ್ನಡ ಭಾಷೆಯಲ್ಲಿ ಮಾತ್ರ ಭರ್ತಿ ಮಾಡಿ ವಿವರಗಳೊಂದಿಗೆ ಹಾಗೂ ಅಗತ್ಯ ದಾಖಲೆಗಳೊಂದಿಗೆ ಜುಲೈ 31 ಒಳಗೆ ಕಛೇರಿಗೆ ತಲುಪಿಸಬೇಕು. ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0820-2574810/811ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link