Brief Udupi News with Pictures / ಮೀನಿನಲ್ಲಿ ಫಾರ್ಮಾಲಿನ್ ಪತ್ತೆ ಆಗಿಲ್ಲ
Kemmannu News Network, 04-08-2018 18:46:56
Brief Udupi News with Pictures
ಮೀನಿನಲ್ಲಿ ಫಾರ್ಮಾಲಿನ್ ಪತ್ತೆ ಆಗಿಲ್ಲ
ಉಡುಪಿ, ಏಪ್ರಿಲ್ 4 (ಕರ್ನಾಟಕ ವಾರ್ತೆ) : ಜಿಲ್ಲೆಯ ಮಲ್ಪೆ ಬಂದರು ಮತ್ತು ಉಡುಪಿ ಮಹಿಳಾ ಮೀನು ಮಾರುಕಟ್ಟೆಯಲ್ಲಿ ಮತ್ತು ಕುಂದಾಪುರದ ಮೀನು ಮಾರುಕಟ್ಟೆಯಲ್ಲಿ ಸಂಗ್ರಹಿಸಿದ ಮೀನುಗಳ ಮಾದರಿ (ಸ್ಯಾಂಪಲ್ )ಗಳನ್ನು ಪರಿಶೀಲನೆಗೆ ಒಳಪಡಿಸಿದ್ದು, ಇವುಗಳಲ್ಲಿ ಯಾವುದೇ ಫಾರ್ಮಾಲಿನ್ ಅಂಶ ಪತ್ತೆ ಆಗಿಲ್ಲ ಎಂದು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳು ಮತ್ತು ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ , ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಆಹಾರ ಸುರಕ್ಷತಾ ಸಲಹಾ ಸಮಿತಿ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿಗಳ ಆದೇಶದಂತೆ, ಜಿಲ್ಲೆಯ ಮೀನುಗಳಲ್ಲಿ ರಾಸಾಯನಿಕ ಬಳಕೆ ಮಾಡುವ ಬಗ್ಗೆ ಪರಿಶೀಲಿಸಲು, ಮಲ್ಪೆ ಬಂದರಿನಿಂದ ಹೊರ ಹೋಗುವ ಮೀನು ಲಾರಿಗಳನ್ನು ಮತ್ತು ಮಲ್ಪೆಗೆ ಆಗಮಿಸುವ ಹೊರ ರಾಜ್ಯದ ಮೀನುಗಾರಿಕಾ ಲಾರಿಗಳನ್ನು ಪರಿಶೀಲಿಸಲಾಗಿ, ಅವುಗಳಲ್ಲಿ ಯಾವುದೇ ಫಾರ್ಮಾಲಿನ್ ಪತ್ತೆಯಾಗಿಲ್ಲ ಅಲ್ಲದೇ ಉಡುಪಿಯ ಮಹಿಳಾ ಮೀನು ಮಾರುಕಟ್ಟೆ ಮತ್ತು ಕುಂದಾಪುರದ ಮೀನು ಮಾರುಕಟ್ಟೆಗಳಲ್ಲಿ ಸಹ ಪರೀಕ್ಷೆ ನಡೆಸಿದ್ದು, ಯಾವುದೇ ರಾಸಾಯನಿಕ ಪತ್ತೆಯಾಗಿಲ್ಲ, ಪರಿಶೀಲನೆಗೆ ತೆಗೆದುಕೊಂಡ ಒಟ್ಟು 15 ಮೀನು ಮಾದರಿಗಳನ್ನು, ಮೈಸೂರಿನ ಎನ್.ಎ.ಬಿ.ಎಲ್ (ನ್ಯಾಷನಲ್ ಅಕ್ರಿಡರೇಟೆಡ್ ಬೋರ್ಡ್ ಫಾರ್ ಲ್ಯಾಬೋರೇಟರಿ )ಗೆ ಪರಿಶೀಲನೆಗೆ ಕಳುಹಿಸಿದ್ದು, ಅಲ್ಲಿಂದ ಬಂದ ವರದಿಯಂತೆ, ಜಿಲ್ಲೆಯ ಮೀನುಗಳಲ್ಲಿ ಯಾವುದೇ ರಾಸಾಯನಿಕ ಬಳಕೆ ಆಗಿಲ್ಲ ಆದ್ದರಿಂದ ಮೀನು ಸೇವನೆ ಕುರಿತಂತೆ ಜನತೆ ಆತಂಕ ಪಡುವ ಅವಶ್ಯತೆಯಿಲ್ಲ ಎಂದು ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರು ತಯಾರಿಕಾ ಘಟಕಗಳಿಗೆ ಮತ್ತು ಆಹಾರ ತಯಾರಿಕಾ ಕೇಂದ್ರಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ ಹಾಗೂ ಆರೋಗ್ಯ ಇಲಾಖೆ ಮತ್ತು ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ: ನಾಮ ನಿರ್ದೇಶನ ಸಲ್ಲಿಸುವ ಬಗ್ಗೆ
ಉಡುಪಿ, ಆಗಸ್ಟ್ 4 (ಕರ್ನಾಟಕ ವಾರ್ತೆ):- ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಸಮಯಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ "ಹೊಯ್ಸಳ" ಮತ್ತು ಬಾಲಕಿಯರಿಗೆ "ಕೆಳದಿ ಚೆನ್ನಮ್ಮ" ಪ್ರಶಸ್ತಿಯನ್ನು, ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ. ಪ್ರಕರಣವು ಆಗಸ್ಟ 2017 ರಿಂದ ಜುಲೈ 2018ರೊಳಗೆ ನಡೆದಿರಬೇಕು. ಆಗಸ್ಟ್ 1, 2000 ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.
ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ಹತ್ತು ಸಾವಿರ ರೂ.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುತ್ತದೆ.
2018 ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ, ಇವರಿಂದ ಪಡೆದು ಭರ್ತಿಮಾಡಿದ ಅರ್ಜಿಗಳನ್ನು ಸಂಬಂಧ ಪಟ್ಟ ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ, ಉಡುಪಿ ಜಿಲ್ಲೆ ಇವರಿಗೆ ಆಗಸ್ಟ್ 31 ರ ಒಳಗೆ ಸಲ್ಲಿಸತಕ್ಕದ್ದು. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ, ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸತಕ್ಕದ್ದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಣೆಗಳಿಗಾಗಿ, ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ- 0820-2574978 ನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.
ಮಹರ್ಷಿ ವಾಲ್ಮೀಕಿ ಪ.ಪಂ.ಗಳ ಅಭಿವೃದ್ಧಿ ನಿಗಮ :ಕೊಳವೆ ಬಾವಿ ಪಡೆಯಲು ಅರ್ಜಿ ಆಹ್ವಾನ
ಉಡುಪಿ, ಆಗಸ್ಟ್ 4 (ಕರ್ನಾಟಕ ವಾರ್ತೆ):- 2018-19 ನೇ ಸಾಲಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯಡಿ ತೆರೆದ ಬಾವಿ ಅಥವಾ ಕೊಳವೆ ಬಾವಿಯನ್ನು ಪಡೆಯಲು ಕನಿಷ್ಠ 1 ಎಕರೆ ಜಮೀನಿರುವ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಣ್ಣ ರೈತರಿಗೆ ಅವಕಾಶವಿದೆ. ಅರ್ಜಿದಾರರು ಮತ್ತು ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ / ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು ಹಾಗೂ ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು. ಅರ್ಜಿದಾರರು 18 ರಿಂದ 60 ವರ್ಷದೊಳಗಿನವರಾಗಿದ್ದು, ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ 1 ಲಕ್ಷದ 50 ಸಾವಿರ ರೂ, ನಗರ ಪ್ರದೇಶದವರಿಗೆ 2 ಲಕ್ಷ ರೂ.ಗಳ ಮಿತಿಯೊಳಗಿರಬೇಕು.
ಅರ್ಜಿಯನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ಇವರಿಂದ ಅರ್ಜಿಯನ್ನು ಉಚಿತವಾಗಿ ಪಡೆಯಬಹುದಾಗಿದೆ.
ಅರ್ಹ ಅರ್ಜಿದಾರರು ಅರ್ಜಿಯೊಂದಿಗೆ ಪಾಸ್ ಪೋರ್ಟ್ ಸೈಜಿನ ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಆರ್.ಟಿ.ಸಿ, ತಹಶೀಲ್ದಾರರಿಂದ ಪಡೆದ ಸಣ್ಣ ರೈತರ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ, ಆಗಸ್ಟ್ 31 ರೊಳಗೆ ಮುದ್ದಾಂ ಅಥವಾ ಅಂಚೆಯ ಮೂಲಕ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಉಡುಪಿ ಇವರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.
ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ : ಸ್ವಚ್ಛತಾ ರಥಕ್ಕೆ ಚಾಲನೆ
ಏಪ್ರಿಲ್ 4 (ಕರ್ನಾಟಕ ವಾರ್ತೆ) :-ನೈರ್ಮಲ್ಯ ಹಾಗೂ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ-2018 ರ ಬಗ್ಗೆ ಜಿಲ್ಲೆಯ ವಿವಿಧ ಭಾಗಗಳಿಗೆ ತೆರಳಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಸಲುವಾಗಿ ವಿಶೇಷವಾಗಿ ಸಿದ್ದಪಡಿಸಲಾದ ಸ್ವಚ್ಛತಾ ರಥಕ್ಕೆ ಆಗಸ್ಟ್ 4 ರಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಅಲೆವೂರು ಗ್ರಾಮ ಪಂಚಾಯತ್ ನಲ್ಲಿ ಚಾಲನೆ ನೀಡಿದರು.
ಅಲೆವೂರು ಗ್ರಾಮ ಪಂಚಾಯತ್ ನ ಅಧ್ಯಕ್ಷರು ಗಿಡ ನೆಟ್ಟು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣದ ಮಾಹಿತಿ ಕರಪತ್ರವನ್ನು ಬಿಡುಗಡೆಗೊಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್ ಅವರು ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ-2018 ಇದರ ಬಗ್ಗೆ ಮಾಹಿತಿ ನೀಡಿದರು.
ಶನಿವಾರ ಅಲೆವೂರು ಗ್ರಾಮ ಪಂಚಾಯತ್ ನಿಂದ ಹೊರಡುವ ರಥವು ಮುಂದಿನ ಮೂರು ದಿನಗಳ ಕಾಲ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಗೆ ತೆರಳಿ ಸಾರ್ವಜನಿಕರಿಗೆ ಮಾಹಿತಿ ನೀಡಲಿದೆ.
ಕಾರ್ಯಕ್ರಮದಲ್ಲಿ ಉಡುಪಿ ತಾಲೂಕು ಪಂಚಾಯತ್ ಸದಸ್ಯೆ ಬೇಬಿ ರಾಜೇಶ್, ಅಲೆವೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಯಲಕ್ಷ್ಮೀ ಹಂಸರಾಜ್, ಹಾಗೂ ಗ್ರಾಮ ಪಂಚಾಯತ್ ನ ಸದಸ್ಯರುಗಳು ಉಪಸ್ಥಿತರಿದ್ದರು.
ಶೈಕ್ಷಣಿಕÀ ಸಾಲಿನ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಏಪ್ರಿಲ್ 4 (ಕರ್ನಾಟಕ ವಾರ್ತೆ) :- ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಮಣಿಪಾಲ, ಉಡುಪಿ(ಐ.ಟಿ.ಐ.) ಈ ಸಂಸ್ಥೆಯಲ್ಲಿ 2018 ನೇ ಸಾಲಿನ ಪ್ರವೇಶಕ್ಕಾಗಿ ವಿವಿಧ ವೃತ್ತಿಗಳಲ್ಲಿ ಕೆಲವು ಸ್ಥಾನಗಳು ಖಾಲಿ ಉಳಿದಿದ್ದು, ಅವುಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲು ಪ್ರವೇಶ ಬಯಸುವ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸಂಸ್ಥೆಗೆ ಖುದ್ದಾಗಿ ಹಾಜರಾಗಿ ನಿಗದಿತ ನಮೂನೆಯ ಅರ್ಜಿ ಪಡೆದು, ದಾಖಲಾತಿಗಳೊಂದಿಗೆ ಆಗಸ್ಟ್ 6 ರಿಂದ ಆಗಸ್ಟ್ 13 ರವರೆಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಉಡುಪಿ ಇಲ್ಲಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 0820-2986145 ನ್ನು ಸಂಪರ್ಕಿಸುವಂತೆ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link