Richard Dsouza
Kemmannu News Network, 30-08-2018 20:50:06


Write Comment     |     E-Mail To a Friend     |     Facebook     |     Twitter     |     Print


ನಗರ ಸ್ಥಳಿಯ ಸಂಸ್ಥೆ  ಚುನಾವಣೆ: ಮತದಾರರ ವಿವರ

ಉಡುಪಿ, ಆಗಸ್ಟ್ 30 (ಕರ್ನಾಟಕ ವಾರ್ತೆ) : ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ 2018 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಮತದಾರರ ಹಾಗೂ ಮತಗಟ್ಟೆಯ ವಿವರ:
    ಉಡುಪಿ ನಗರ ಸಭೆಯ 35 ವಾರ್ಡುಗಳಲ್ಲಿ 98 ಮತಗಟ್ಟೆಗಳಿದ್ದು, 97561 ಮತದಾರಿದ್ದು, . ಇದರಲ್ಲಿ 47538 ಪುರುಷರು, 50022 ಮಹಿಳೆಯರು ಹಾಗೂ ಒಬ್ಬ ಇತರರು ಇದ್ದಾರೆ.
     ಕುಂದಾಪುರ ಪುರಸಭೆಯ 23 ವಾರ್ಡುಗಳಲ್ಲಿ 23 ಮತಗಟ್ಟೆಗಳಿದ್ದು, 11292 ಪುರುಷರು, 12010 ಮಹಿಳೆಯರು ಸೇರಿ ಒಟ್ಟು 23302 ಮತದಾರರು ಇದ್ದಾರೆ.
     ಕಾರ್ಕಳ ಪುರಸಭೆಯ 23 ವಾರ್ಡುಗಳಲ್ಲಿ, 23 ಮತಗಟ್ಟೆಗಳಿದ್ದು, 9879 ಮಂದಿ ಪುರುಷರು, 10725 ಮಂದಿ ಮಹಿಳೆಯರು ಸೇರಿ ಒಟ್ಟು 20604 ಮಂದಿ ಮತದಾರರಿದ್ದಾರೆ.
     ಸಾಲಿಗ್ರಾಮ ಪಟ್ಟಣ ಪಂಚಾಯತ್‍ನ 16 ವಾರ್ಡುಗಳಲ್ಲಿ, 16 ಮತಗಟ್ಟೆಗಳಿದ್ದು, 6213 ಮಂದಿ ಪುರುಷರು, 6748 ಮಂದಿ ಮಹಿಳೆಯರು ಸೇರಿ ಒಟ್ಟು 12961 ಮತದಾರರಿದ್ದಾರೆ.
     ಚುನಾವಣೆಗೆ ಬಳಸಲಾಗುವ ಇವಿಎಂಗಳ ಸಂಖ್ಯೆ: ಉಡುಪಿ ನಗರಸಭೆಗೆ 98, ಕುಂದಾಪುರ ಪುರಸಭೆಗೆ 23, ಕಾರ್ಕಳ ಪುರಸಭೆಗೆ 23 ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್‍ಗೆ 16.
    ಚುನಾವಣೆಗೆ ನೇಮಕ ಮಾಡಲಾದ ಮತಗಟ್ಟೆ ಮಟ್ಟದ ಅಧಿಕಾರಿಗಳ ವಿವರ: ಉಡುಪಿ ನಗರಸಭೆಗೆ 98, ಕುಂದಾಪುರ ಪುರಸಭೆಗೆ 23, ಕಾರ್ಕಳ ಪುರಸಭೆಗೆ 23 ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್‍ಗೆ 16.

ಒಟ್ಟು 48 ಮೀಸಲು ಸಿಬ್ಬಂದಿ ನಿಯೋಜಿಸಲಾಗಿದೆ.
      ನಗರ ಸ್ಥಳೀಯ ಸಂಸ್ಥೆಗಳ  ಚುನಾವಣೆಗೆ ಅಳಿಸಲಾಗದ ಶಾಹಿಯನ್ನು ಮತದಾರರ ಎಡಗೈ ಉಂಗುರದ ಬೆರಳಿಗೆ ಹಾಕಲು ರಾಜ್ಯ ಚುನಾವಣಾ ಆಯೋಗವು ನಿರ್ದೇಶಿಸಿರುತ್ತದೆ.
        ಮತದಾನ ದಿನ : ಸಾರ್ವತ್ರಿಕ ರಜೆ:- ಆಗಸ್ಟ್ 31 ರಂದು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ( ಅನುದಾನಿತ ಶಿಕ್ಷಣ ಸಂಸ್ಥೆ ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
     ಮತಗಟ್ಟೆಯಲ್ಲಿ ಮತ ಚಲಾಯಿಸಲು ಭಾರತ ಚುನಾವಣಾ ಆಯೋಗ ನೀಡಿರುವ ಭಾವಚಿತ್ರದ ಗುರುತಿನ ಚೀಟಿ ಅಥವಾ ರಾಜ್ಯ ಚುನಾವಣಾ ಆಯೋಗವು ಆದೇಶಿಸಿರುವ ಈ ಕೆಳಕಂಡ 22 ದಾಖಲೆಗಳ ಪೈಕಿ  ಯಾವುದಾದರೂ ಒಂದನ್ನು ಹಾಜರುಪಡಿಸಿ  ಮತ  ಚಲಾಯಿಸಬಹುದಾಗಿದೆ.:
ಪಾಸ್‍ಪೋರ್ಟ್
ಡ್ರೈವಿಂಗ್ ಲೈಸೆನ್ಸ್
ಆದಾಯ ತೆರಿಗೆ ಗುರುತಿನ ಚೀಟಿ
ಕೇಂದ್ರ/ರಾಜ್ಯ ಸರ್ಕಾರ ಹಾಗೂ ಸಾರ್ವಜನಿಕ ಉದ್ದಿಮೆಗಳು ಅಥವಾ ಖಾಸಗಿ ಔದ್ಯೋಗಿಕ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ನೀಡಿದ ಭಾವಚಿತ್ರವಿರುವ ಗುರುತಿನ ಚೀಟಿ
ಸಾರ್ವಜನಿಕ ವಲಯದ ಬ್ಯಾಂಕ್/ ಕಿಸಾನ್ ಮತ್ತು ಅಂಚೆ ಕಚೇರಿ  ನೀಡಿರುವ ಭಾವಚಿತ್ರವಿರುವ ಪಾಸ್‍ಪುಸ್ತಕ
ಮಾನ್ಯತೆ ಪಡೆದ ನೋಂದಾಯಿತ ವಿದ್ಯಾ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ನೀಡಿರುವ ಗುರುತಿನ ಚೀಟಿ
ಭಾವಚಿತ್ರವಿರುವ ನೋಂದಾಯಿತ ಡೀಡ್‍ಗಳು/ ಪಟ್ಟಾಗಳು ಮುಂತಾದ ಆಸ್ತಿ ದಾಖಲೆಗಳು
ಭಾವಚಿತ್ರವಿರುವ ಪಡಿತರ ಚೀಟಿ
ಎಸ್.ಸಿ/ಎಸ್.ಟಿ/ಒ.ಬಿ.ಸಿ ಭಾವಚಿತ್ರವಿರುವ ಪ್ರಮಾಣ ಪತ್ರಗಳು
ಭಾವಚಿತ್ರವಿರುವ ಪಿಂಚಣಿ ಪಾವತಿ ಆದೇಶಗಳು ಅಥವಾ ಮಾಜಿ ಯೋಧರ ಪಿಂಚಣಿ ಪುಸ್ತಕ/ ಪಿಂಚಣಿ ಸಂದಾಯ ಆದೇಶಗಳಂತಹ ಪಿಂಚಣಿ ದಾಖಲೆಗಳು,ವೃದ್ಧಾಪ್ಯ ವೇತನ ಆದೇಶಗಳು, ವಿಧವಾ ವೇತನ ಆದೇಶಗಳು.
ಭಾವಚಿತ್ರವಿರುವ ಸ್ವಾತಂತ್ರ್ಯ ಯೋಧರ ಗುರುತಿನ ಚೀಟಿ
ಭಾವಚಿತ್ರವಿರುವ ಶಸ್ತ್ರ ಪರವಾನಗಿ
ಅಂಗವಿಕಲರಿಗೆ ನೀಡಿರುವ ಭಾವಚಿತ್ರವಿರುವ ಗುರುತಿನ ಚೀಟಿ
ಮಾಜಿ ಯೋಧರ ಭಾವಚಿತ್ರವಿರುವ ಸಿ.ಎಸ್.ಡಿ ಕ್ಯಾಂಟೀನ್ ಕಾರ್ಡ್
ಸಂಧ್ಯಾಸುರಕ್ಷಾ ಯೋಜನೆಯ ಭಾವಚಿತ್ರವಿರುವ ಗುರುತಿನ ಚೀಟಿ
ಓಖಇಉ ಯೋಜನೆಯ ಅಡಿಯಲ್ಲಿ  ನೀಡಿರುವ ಭಾವಚಿತ್ರವಿರುವ ಗುರುತಿನ ಚೀಟಿ
ಭಾವಚಿತ್ರವಿರುವ ಯಶಸ್ವಿನಿ ಕಾರ್ಡ್
ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿಗಳು ಇತ್ಯಾದಿ ಸ್ಥಳೀಯ ಸಂಸ್ಥೆಗಳು ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ
ಸರ್ಕಾರಿ ಇಲಾಖೆ ನೀಡಿರುವ ಭಾವಚಿತ್ರವಿರುವ ಹಿರಿಯ ನಾಗರಿಕರ ಗುರುತಿನ ಚೀಟಿ
ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ನೀಡಿರುವ ಕುಟುಂಬ ಸದಸ್ಯರ ಹೆಸರು ಮತ್ತು ವಯಸ್ಸು ಹಾಗೂ ಕುಟುಂಬದ ಯಜಮಾನನೊಂದಿಗೆ ಹೊಂದಿರುವ ಸಂಬಂಧ ಒಳಗೊಂಡಿರುವ ಭಾವಚಿತ್ರ ಇರುವ ತಾತ್ಕಾಲಿಕ / ಮೂಲ ಪಡಿತರ ಚೀಟಿ
ಭಾವಚಿತ್ರವಿರುವ ಆರೋಗ್ಯ ವಿಮಾ ಯೋಜನೆ ಸ್ಮಾರ್ಟ್ ಕಾರ್ಡುಗಳು
ಆಧಾರ್ ಕಾರ್ಡ್.

ಚುನಾವಣಾ ಕಾರ್ಯಕ್ಕಾಗಿ ಪೊಲೀಸ್ ಇಲಾಖೆಯಿಂದ ನಿಯೋಜಿಸಿದ ಅಧಿಕಾರಿ/ ಸಿಬ್ಬಂದಿಗಳ ವಿವರ :
  ಉಡುಪಿ ನಗರಸಭೆ ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್‍ಗೆ ಆSP 1, PI/ಅPI 4, PSI 10, ಂSI 11, ಊಅ/Wಊಅ 79, Pಅ/WPಅ 150 ,ಊಉ 65, ಏSಖP 2, ಆಂಖ 4, ಕುಂದಾಪುರ ಪುರಸಭೆಗೆ ಆSP 1, PI/ಅPI 1, PSI 6, ಂSI 4, ಊಅ/Wಊಅ 21, Pಅ/WPಅ 43 ,ಊಉ 23, ಏSಖP 1, ಆಂಖ 1, ಕಾರ್ಕಳ ಪುರಸಭೆಗೆ ಆSP 1, PI/ಅPI 1, PSI 2, ಂSI 4, ಊಅ/Wಊಅ 8, Pಅ/WPಅ 35 ,ಊಉ 23, ಏSಖP 1, ಆಂಖ 1,

ಮತ ಚಲಾಯಿಸಿದ ನಂತರ ಮತಯಂತ್ರವನ್ನು ಭದ್ರವಾಗಿರಿಸಲು ವ್ಯವಸ್ಥೆ ಮಾಡಿರುವ ಭದ್ರತಾ ಕೊಠಡಿಗಳು:
ಉಡುಪಿ ನಗರಸಭೆಯ ಮತಯಂತ್ರವನ್ನು ಟಿ.ಎ.ಪೈ.ಮಾಧ್ಯಮ ಶಾಲೆ, ಕುಂಜಿಬೆಟ್ಟುವಿನಲ್ಲಿ, ಕುಂದಾಪುರ ಪುರಸಭೆಯ ಮತಯಂತ್ರವನ್ನು ತಾಲೂಕು ಕಚೇರಿ, ಮಿನಿ ವಿಧಾನ ಸೌಧ, ಕುಂದಾಪುರದಲ್ಲಿ, ಕಾರ್ಕಳ ಪುರಸಭೆಯ ಮತಯಂತ್ರವನ್ನು ತಾಲೂಕು ಕಚೇರಿ ಮಿನಿ ವಿಧಾನ ಸೌಧದಲ್ಲಿ, ಸಾಲಿಗ್ರಾಮ ಪಟ್ಟಣ ಪಂಚಾಯತ್‍ನ ಮತಯಂತ್ರವನ್ನು ಟಿ.ಎ.ಪೈ. ಆಂಗ್ಲ ಮಾಧ್ಯಮ ಶಾಲೆ, ಕುಂಜಿಬೆಟ್ಟುವಿನಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗುರ್ಮೆ ಸೇತುವೆ : ವಾಹನ ಸಂಚಾರ ನಿಷೇಧ
   ಉಡುಪಿ, ಆಗಸ್ಟ್ 30 (ಕರ್ನಾಟಕ ವಾರ್ತೆ) :ಕಾಪು ತಾಲೂಕು ಕಳತ್ತೂರು ಗ್ರಾಮದ ಗುರ್ಮೆ ಎಂಬಲ್ಲಿ ನಿರ್ಮಾಣವಾದ ಸೇತುವೆಯು ಭಾರಿ ಮಳೆಗೆ ಹಾನಿಗೊಳಗಾಗಿದ್ದು, ಕುಸಿಯುವ ಭೀತಿಯಲ್ಲಿರುತ್ತದೆ.ಈ ರಸ್ತೆಯಲ್ಲಿ ದಿನಾಲೂ ನೂರಾರು ವಾಹನಗಳು ಓಡಾಡುತ್ತಿದ್ದು, ಕಾಪು ಕಡೆಗೆ ಹೋಗುವ ಶಾಲಾ ವಾಹನಗಳು ಈ ಸೇತುವೆಯ ಮೇಲೆ ಹಾದುಹೊಗುವುದರಿಂದ ಮುಂಜಾಗೃತ ಕ್ರಮವಾಗಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕಳತ್ತೂರು ಗ್ರಾಮದ ಗುರ್ಮೆ ಎಂಬಲ್ಲಿ ಇರುವ ಸೇತುವೆಯಲ್ಲಿ ಮುಂದಿನ ಆದೇಶದ ವರೆಗೆ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಆದೇಶ ಹೊರಡಿಸಿರುತ್ತಾರೆ.
ಭಟ್ರತೋಟ ಸೇತುವೆ: ವಾಹನ ಸಂಚಾರ ನಿಷೇಧ
  ಉಡುಪಿ, ಆಗಸ್ಟ್ 30 (ಕರ್ನಾಟಕ ವಾರ್ತೆ) :ಕಾಪು ತಾಲೂಕು ಉಳಿಯಾರಗೋಳಿ ಗ್ರಾಮದ ಭಟ್ರತೋಟ ಎಂಬಲ್ಲಿ ಇರುವ ಸೇತುವೆಯು ಜುಲೈ 6 ಮತ್ತು 7 ರಂದು ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸೇತುವೆ ಶಿಥಿಲಗೊಂಡು ಅಪಾಯದ ಸ್ಥಿತಿ ತಲುಪಿದ್ದು ಸಾರ್ವಜನಿಕರು ಬಳಸಿದ್ದಲ್ಲಿ ಕುಸಿದು ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಮುಂದಿನ ಆದೇಶದವರೆಗೆ ಉಳಿಯಾರಗೋಳಿ ಗ್ರಾಮದ ಭಟ್ರತೋಟ ಎಂಬಲ್ಲಿ ಇರುವ ಸೇತುವೆಯಲ್ಲಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಆದೇಶ ಹೊರಡಿಸಿರುತ್ತಾರೆ.

ಶ್ರೀಕೃಷ್ಣ ಜಯಂತಿ ಆಚರಣೆ

ಉಡುಪಿ, ಆಗಸ್ಟ್ 30 (ಕರ್ನಾಟಕ ವಾರ್ತೆ) : ಸೆಪ್ಟಂಬರ್ 1 ರಂದು ಬೆಳಗ್ಗೆ 11 ಕ್ಕೆ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಉಡುಪಿ ಇಲ್ಲಿ ಶ್ರೀಕೃಷ್ಣ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರಕಟಣೆ ತಿಳಿಸಿದೆ.

ರಾಷ್ಟ್ರೀಯ ಯುವ ಪ್ರಶಸ್ತಿ: ಅರ್ಜಿ ಆಹ್ವಾನ
ಉಡುಪಿ, ಆಗಸ್ಟ್ 30 (ಕರ್ನಾಟಕ ವಾರ್ತೆ) : ರಾಷ್ಟ್ರೀಯ ಅಭಿವೃದ್ಧಿ ಮತ್ತು ಸಮಾಜ ಸೇವಾ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ, 15 ರಿಂದ 29 ವರ್ಷದ ವಯೋಮಿತಿಯ ಯುವಕ ಅಥವಾ ಯುವತಿಯರನ್ನು ಒಳಗೊಂಡ,ಯುವಕ, ಯುವತಿ ಮತ್ತು ಸಂಘಗಳಿಗೆ 2016-17 ಹಾಗೂ ಕಳೆದ ಮೂರು ವರ್ಷಗಳ ಸಾಧನೆಯನ್ನು ಆಧರಿಸಿ ವೈಯಕ್ತಕ ಹಾಗೂ ಸಾಂಘಿಕ ರಾಷ್ಟ್ರೀಯ ಯುವ ಪ್ರಶಸ್ತಿ ನೀಡಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟಂಬರ್ 5.
ಆಸಕ್ತ ಯುವಕ ಯುವತಿ ಸಂಘದ ಸದಸ್ಯರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ದೂರವಾಣಿ ಸಂಖ್ಯೆ; 0820-2521324 ಅನ್ನು ಸಂಪರ್ಕಿಸುವಂತೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.
ಏಕಲವ್ಯ/ ಜೀವಮಾನ ಸಾಧನೆ ಹಾಗೂ ಕ್ರೀಡಾ ರತ್ನ ಪ್ರಸಸ್ತಿಗೆ ಅರ್ಜಿ ಆಹ್ವಾನ
ಉಡುಪಿ, ಆಗಸ್ಟ್ 30 (ಕರ್ನಾಟಕ ವಾರ್ತೆ) : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರತಿ ವರ್ಷ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಕರ್ನಾಟಕದಿಂದ ಆಯ್ಕೆಯಾಗಿ ಉನ್ನತ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಪ್ರತೀವರ್ಷ ಏಕಲವ್ಯ ಪ್ರಶಸ್ತಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟುವಾಗಿ / ತರಬೇತುದಾರರಾಗಿ ನಿರಂತರ ಸೇವೆ ಸಲ್ಲಿಸಿ ಜೀವನ ಪರ್ಯಂತ ಸಾಧನೆ ಮಾಡಿದಂತಹ ಹಿರಿಯ ತರಬೇತುದಾರರಿಗೆ ಕ್ರೀಡಾ ಕ್ಷೇತ್ರದಲ್ಲಿ ಜೀವನ ಪರ್ಯಂತ ಸಾಧನೆ ಪ್ರಶಸ್ತಿ ಮತ್ತು ಗ್ರಾಮೀಣ ಕ್ರೀಡೆಗಳಲ್ಲಿ ವಿಶೇಷ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ,
ಕರ್ನಾಟಕ ಸರ್ಕಾರದ ವತಿಯಿಂದ ಏಕಲವ್ಯ ಪ್ರಶಸ್ತಿ ಹಾಗೂ ಹಿರಿಯ ಕ್ರೀಡಾಪಟು/ ತರಬೇತುದಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಮತ್ತು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಗುವುದು. ಅರ್ಹ ಕ್ರೀಡಾಪಟುಗಳು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಪ್ರಸ್ತಾವನೆಗಳನ್ನು ಸೆಪ್ಟಂಬರ್ 14 ರ ಒಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಈ ಕಚೇರಿಗೆ ಸಲ್ಲಿಸುವುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ.ರೋಶನ್ ಕುಮಾರ್, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ; 0820-2521324 , 9480886467 ಅನ್ನು ಸಂಪರ್ಕಿಸುವಂತೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.
 
ಹಿಂದುಳಿದ ವರ್ಗ; ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
    ಉಡುಪಿ, ಆಗಸ್ಟ್ 30 (ಕರ್ನಾಟಕ ವಾರ್ತೆ) :2018-19 ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಒಂದರಿಂದ 10 ನೇ ತರಗತಿಯವರೆಗೆ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
    ಕೇಂದ್ರ ಪುರಸ್ಕøತ ವಿದ್ಯಾರ್ಥಿ ವೇತನವು 1 ರಿಂದ 10 ನೇ ತರಗತಿಯ ಬಾಲಕ/ ಬಾಲಕಿಯರಿಗೆ 10 ತಿಂಗಳಿಗೆ 1000 ರೂ. ಹಾಗೂ ಅಡ್‍ಹಾಕ್ ಗ್ರಾಂಟ್ 500 ರೂ., ಒಟ್ಟು 1500 ರೂ. ರಾಜ್ಯ ವಿದ್ಯಾರ್ಥಿ ವೇತನವು 1 ರಿಂದ 5 ನೇ ತರಗತಿಯ ಬಾಲಕ/ ಬಾಲಕಿಯರಿಗೆ ಹತ್ತು ತಿಂಗಳಿಗೆ 250 ರೂ. ಅಡ್‍ಹಾಕ್ ಗ್ರಾಂಟ್ 500 ರೂ., ಒಟ್ಟು 750 ರೂ. 6 ರಿಂದ 8 ನೇ ತರಗತಿಯ ಬಾಲಕ/ ಬಾಲಕಿಯರಿಗೆ ಹತ್ತು ತಿಂಗಳಿಗೆ 400 ರೂ., ಅಡ್‍ಹಾಕ್ ಗ್ರಾಂಟ್ 500 ರೂ. ಒಟ್ಟು 900 ರೂ. ಹಾಗೂ 9 ರಿಂದ 10 ನೇ ತರಗತಿಯ ಬಾಲಕ / ಬಾಲಕಿಯರಿಗೆ ಹತ್ತು ತಿಂಗಳಿಗೆ 500 ರೂ. ಅಡ್‍ಹಾಕ್ ಗ್ರಾಂಟ್ 500 ರೂ., ಒಟ್ಟು 1000 ರೂ.
    ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು: ಕೇಂದ್ರ ಪುರಸ್ಕøತ  ವಿದ್ಯಾರ್ಥಿ ವೇತನಕ್ಕೆ ಎಲ್ಲಾ ಪ್ರವರ್ಗದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ., ರಾಜ್ಯ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಪ್ರವರ್ಗ-1 ರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 1 ಲಕ್ಷ ರೂ. ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 44500 ರೂ.
    ಫಲನುಭವಿಗಳು ರಾಜ್ಯ ಸರ್ಕಾರವು ಅಧಿಸೂಚಿಸಿರುವ ಪ್ರವರ್ಗ-1, 2ಎ, 3ಎ ಮತ್ತು 3 ಬಿ ಹಾಗೂ ಕೇಂದ್ರ ಸರ್ಕಾರವು ಅಧಿಸೂಚಿಸಿರುವ ಸರ್ಕಾರವು ಅಧಿಸೂಚಿಸಿರುವ ಇತರೆ ಹಿಂದುಳಿದ ವರ್ಗಗಳಿಗೆ ಸೇರಿರಬೇಕು.
     (ಪ್ರವರ್ಗ-1, 2ಎ, 3 ಬಿ ಗಳಲ್ಲಿ ಬರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ಸೌಲಭ್ಯಕ್ಕೆ ಅರ್ಹರಾಗುವುದಿಲ್ಲ). ಕೇಂದ್ರ ಪುರಸ್ಕøತ ಅನುದಾನವನ್ನು ಅತ್ಯಂತ ಕಡಿಮೆ ಆದಾಯ ಮತ್ತು ಮೆರಿಟ್ ಇರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರು ಮಾಡಲಾಗುವುದು. ಇನ್ನುಳಿದ ವಿದ್ಯಾರ್ಥಿಗಳಿಗೆ ಆದಾಯ ಮತ್ತು ಮೆರಿಟ್ ಆದಾಯದ ಮೇಲೆ ರಾಜ್ಯ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುವುದು.
    1 ರಿಂದ 10 ನೇ ತರಗತಿಯವರೆಗೆ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಅರ್ಜಿಯನ್ನು ತಿತಿತಿ.ssಠಿ.ಞಚಿಡಿಟಿಚಿಣಚಿಞಚಿ.gov.iಟಿ ಗೆ ಸೆಪ್ಟಂಬರ್ 30 ರ ಒಳಗೆ ಸಲ್ಲಿಸಬೇಕು.
   ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು: ಶಾಲೆಯಲ್ಲಿ ಪ್ರವೇಶ ಪಡೆದಿರುವ ಬಗ್ಗೆ ಸ್ಯಾಟ್ಸ್- ಐಡಿ, ವಿದ್ಯಾರ್ಥಿಯ ಆಧಾರ್ ಸಂಖ್ಯೆ, ಪೋಷಕರ ಆಧಾರ್ ಸಂಖ್ಯೆ, ಆದಾಯ ಪ್ರಮಾಣ ಪತ್ರದ ಆರ್.ಡಿ.ಸಂಖ್ಯೆ, ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ಪಡೆದಿದ್ದಲ್ಲಿ ವಿದ್ಯಾರ್ಥಿನಿಲಯ ಪ್ರವೇಶ ಸಂಖ್ಯೆ,ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿ ವೇತನ ಪಡೆದಿದ್ದಲ್ಲಿ ಹಿಂದಿನ ಸಾಲಿನ ಅರ್ಜಿ ಸಂಖ್ಯೆ, ಆಧಾರ್ ಸಂಖ್ಯೆ ಇಲ್ಲದಿದ್ದಲ್ಲಿ  ಆಧಾರ್ ನೋಂದಣಿ ಮಾಡಿಸಿದ ಇ.ಐ.ಡಿ ಸಂಖ್ಯೆ, ಬ್ಯಾಂಕ್ ಖಾತೆ  ಸಂಖ್ಯೆ. ಐ.ಎಫ್.ಎಸ್.ಸಿ ಸಂಖ್ಯೆ, ಬ್ಯಾಂಕಿನ ವಿಳಾಸ, ಪೋಷಕರ ಆಧಾರ್ ನಂಬರ್ ಗೆ ಲಿಂಕ್ ಮಾಡಿರುವ ಮೊಬೈಲ್ ನಂ ಹಾಗೂ ಭೌತಿಕ ಅನುಮತಿ ಪತ್ರ.
    ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ / ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ/ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಅನ್ನು ಸಂಪರ್ಕಿಸುವಂತೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.

ಸಂಪೂರ್ಣ ಪ್ಲಾಸ್ಟಿಕ್ ನಿಷೇಧ: ಗ್ರಾಮ ಸಭೆ ಹಾಗೂ ಜಾಥಾ ಕಾರ್ಯಕ್ರಮ

    ಉಡುಪಿ, ಆಗಸ್ಟ್ 30 (ಕರ್ನಾಟಕ ವಾರ್ತೆ) : ಆಗಸ್ಟ್ 22  ರಂದು ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಸಕ ವಿ.ಸುನಿಲ್ ಕುಮಾರ್, ಇವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷರು/ಉಪಾಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರ ಉಪಸ್ಥಿತಿಯಲ್ಲಿ ನಡೆದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ/ಎಲ್ಲಾ ಸಿಬ್ಬಂದಿಗಳ ಸಭೆಯಲ್ಲಿ ನೀಡಲಾದ ನಿರ್ದೇಶನದಂತೆ     ಕಾರ್ಕಳ ಕ್ಷೇತ್ರದ  ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧದ ಕುರಿತು ವಾಣಿಜ್ಯ ಉದ್ಯಮಿಗಳ, ಹೋಟೆಲ್/ಅಂಗಡಿ ಮಾಲಿಕರ, ಕಲ್ಯಾಣ ಮಂಟಪಗಳ ಮಾಲಿಕರ ಹಾಗೂ ಗ್ರಾಮಸ್ಥರನ್ನೊಳಗೊಂಡ ವಿಶೇಷ ಸಭೆಯನ್ನು ಕರೆದು ಕಾರ್ಕಳ ತಾಲೂಕಿನಾದ್ಯಂತ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಹಾಗೂ ಅದಕ್ಕೆ ಪೂರಕವಾಗಿ ಪರ್ಯಾಯ ಕ್ರಮಗಳ ಬಗ್ಗೆ ಮತ್ತು ಪ್ಲಾಸ್ಟಿಕ್ ನಿಷೇಧವನ್ನು ಉಲ್ಲಂಘಿಸಿದವರ ವಿರುದ್ದ ಕೈಗೊಳ್ಳಬಹುದಾದ ಶಿಸ್ತು ಕ್ರಮಗಳ ಬಗ್ಗೆ  ವಿಶೇಷ ಗ್ರಾಮ ಸಭೆಯನ್ನು ಸೆಪ್ಟಂಬರ್ 1 ರಂದು ಏರ್ಪಡಿಸಲಾಗಿರುತ್ತದೆ. ಹಾಗೂ ಪ್ಲಾಸ್ಟಿಕ್ ನಿಷೇಧದ ಕುರಿತು ಸೆಪ್ಟಂಬರ್ 6 ರಂದು ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಶೇಷ ಜಾಥ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ.
   
    ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ಲಾಸ್ಟಿಕ್ ಮುಕ್ತ  ಸ್ವಚ್ಛ ಕಾರ್ಕಳದ ಕನಸನ್ನು ನನಸಾಗಿಸಲು ಸಹಕಾರ ನೀಡುವಂತೆ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತ್ ಕಾರ್ಕಳ ಇವರ ಪ್ರಕಟಣೆ ತಿಳಿಸಿದೆ.       

ಶ್ರೇಷ್ಠ ಪುಸ್ತಕ ಪ್ರಶಸ್ತಿ: ಲೇಖಕರಿಂದ ಅರ್ಜಿ ಆಹ್ವಾನ
    ಉಡುಪಿ, ಆಗಸ್ಟ್ 30 (ಕರ್ನಾಟಕ ವಾರ್ತೆ) : 2018-19 ನೇ ಸಾಲಿನ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸಿರುವ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ.
   ಪುಸ್ತಕಗಳ ಸಂಖ್ಯೆಗನುಗುಣವಾಗಿ ಪ್ರತಿ ವಿಷಯಕ್ಕೆ ಗರಿಷ್ಟ 2 ಪ್ರಶಸ್ತಿಗಳನ್ನು ನೀಡಲಾಗುವುದು. ಆಯ್ಕೆಯಾದ ಲೇಖಕರಿಗೆ 25000 ರೂ.ಗಳ ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಸನ್ಮಾನಿಸಲಾಗುವುದು. 
   ಜನವರಿ 2017 ರಿಂದ ಡಿಸೆಂಬರ್ 2018 ರೊಳಗೆ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡದಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಪ್ರಶಸ್ತಿಗೆ ಸಲ್ಲಿಸಬಹುದಾಗಿದೆ.
   ಲೇಖಕರು ನಿಗದಿತ ನಮೂನೆಯ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಜನವರಿ 5, 2019 ರ ಒಳಗೆ ಸದಸ್ಯ ಕಾರ್ಯದರ್ಶಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ವಿಜ್ಞಾನ ಭವನ, ಬೆಂಗಳೂರು ಇಲ್ಲಿಗೆ ಕಳುಹಿಸಬೇಕು.
    ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್‍ಸೈಟ್ ತಿತಿತಿ.ಞsಣಚಿಛಿಚಿಜemಥಿ.iಟಿ  ಅನ್ನು ಸಂಪರ್ಕಿಸುವಂತೆ ಸದಸ್ಯ ಕಾರ್ಯದರ್ಶಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಇವರ ಪ್ರಕಟಣೆ ತಿಳಿಸಿದೆ.
She-ಃox ಇ-ಪೋರ್ಟಲ್ ವ್ಯವಸ್ಥೆ ಬಗ್ಗೆ
     ಉಡುಪಿ, ಆಗಸ್ಟ್ 30 (ಕರ್ನಾಟಕ ವಾರ್ತೆ) :ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ( ತಡೆಗಟ್ಟುವಿಕೆ, ನಿಷೇಧಿಸುವಿಕೆ ಮತ್ತು ನಿವಾರಿಸುವಿಕೆ), ಅಧಿನಿಯಮ 2013 ಕ್ಕೆ ಸಂಬಂಧಪಟ್ಟಂತೆ She-ಃox    ಇ-ಪೋರ್ಟಲ್ ವ್ಯವಸ್ಥೆಯಲ್ಲಿ ಲೈಂಗಿಕ ಕಿರುಕುಳದ ಅರ್ಜಿಯನ್ನು ತಿತಿತಿ.ತಿಛಿಜ.shebox.ಟಿiಛಿ.iಟಿ ನಲ್ಲಿ ಸಲ್ಲಿಸಬಹುದಾಗಿದೆ.
   ಈ ನಿಯಮದನ್ವಯ ಸರ್ಕಾರಿ/ ಖಾಸಗಿ ಕಛೇರಿಗಳಲ್ಲಿ 10 ಮತ್ತು 10 ಕ್ಕಿಂತ ಹೆಚ್ಚು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದರೆ, ಅಂತಹ ಕಛೇರಿಗಳಲ್ಲಿ ಆಂತರಿಕ ದೂರು ಸಮಿತಿ ರಚಿಸುವುದು ಹಾಗೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಳೀಯ ದೂರು ಸಮಿತಿಗಳನ್ನು ರಚಿಸುವುದು ಕಡ್ಡಾಯವಾಗಿರುತ್ತದೆ.
   ಈ ನಿಯಮದಡಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಅಥವಾ ಅಪರ ಜಿಲ್ಲಾಧಿಕಾರಿಗಳು ಹಾಗೂ ತಾಲೂಕು ಮಟ್ಟದಲ್ಲಿ ತಹಶೀಲ್ದಾರರನ್ನು ನೋಡೆಲ್ ಅಧಿಕಾರಿಗಳನ್ನಾಗಿ ನೇಮಿಸಿದ್ದು, ಈ ಅಧಿಕಾರಿಗಳು ತಮ್ಮಲ್ಲಿ She-ಃox ನಲ್ಲಿ ಸ್ವೀಕೃತವಾಗುವ ಲೈಂಗಿಕ ಕಿರುಕುಳದ ಅರ್ಜಿಗಳನ್ನು ವೀಕ್ಷಿಸಿ ಸಂಬಂಧಿಸಿದ ಇಲಾಖೆ ಅಥವಾ ಸಂಸ್ಥೆಗೆ ವಿಚಾರಣೆಗಾಗಿ ಕಳುಹಿಸುವುದು ಹಾಗೂ She-ಃox ಇ-ಪೋರ್ಟಲ್ ವ್ಯವಸ್ಥೆಯಲ್ಲಿ ಅಪ್‍ಡೇಟ್ ಮಾಡಲಾಗುತ್ತದೆ.ನೋಡೆಲ್ ಅಧಿಕಾರಿಗಳು ದೂರಿನ ಅರ್ಜಿ ಕುರಿತು ನಡೆದ ವಿಚಾರಣೆ ಹಾಗೂ ಪರಿಹಾರ ಬಗ್ಗೆ ಗಮನಿಸಬಹುದಾಗಿದೆ.
  ಈ ಪೋರ್ಟಲ್ ಮುಲಕ ಲೈಂಗಿಕ ಕಿರುಕುಳಕ್ಕೊಳಗಾದ ಮಹಿಳಾ ಸಿಬ್ಬಂದಿಗೆ ಏಕಗವಾಕ್ಷಿ ಸೇವೆ ದೊರಕುವುದೆಂದು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.

ಮಂಜುನಾಥ ಉದ್ಯಾವರ ನಿರಂತರ ಚಲನಶೀಲರಾಗಿದ್ದರು -  ಪ್ರೊ. ಎಂ. ಪ್ರಸಾದ್ ರಾವ್

ಉದ್ಯಾವರ: ಮಂಜುನಾಥ ಉದ್ಯಾವರ ಸಮಾಜಮುಖ ಕೆಲಸ ಕಾರ್ಯಗಳಲ್ಲಿ ಭಾಗವಹಿಸುತ್ತಾ ನಿರಂತರ ಚಲನಶೀಲರಾಗಿದ್ದರು. ಹಾಗಾಗಿ ಅವರಿಗೆ ಜನಸೇವೆಗೈಯುವಲ್ಲಿ ವಿಶೇಷ ಶಕ್ತಿ ಪ್ರಾಪ್ತವಾಗುತ್ತಿತ್ತು. ಅವರು ವರ್ತಮಾನಕ್ಕೆ ಸ್ಪಂದಿಸುತ್ತಿದ್ದರು ಆ ಕಾರಣದಿಂದ ಅವರು ಅಳಿದರೂ ಅವರು ಇಂದು ನಮ್ಮ ಮಧ್ಯೆ ಬದುಕಿದ್ದಾರೆ. ಅವರು ಅಣುವಿನಂತಿದ್ದರು ಹಾಗಾಗಿ ಚೈತನ್ಯಶೀಲರಾಗಿದ್ದರು ಅಣು ಕಣ್ಣಿಗೆ ಕಾಣೋದಿಲ್ಲ ಆದರೆ ಅದರ ಪ್ರಭಾವಕ್ಕೆ ಒಳಗಾದವರಿಗೆ ಅನುಭವಕ್ಕೆ ಬರುತ್ತದೆ. ಮಂಜುನಾಥ ಉದ್ಯಾವರ ಕೂಡಾ ತಮ್ಮ ತೆಕ್ಕೆಗೆ ಬಂದವರನ್ನು ಎಂದೂ ಬಿಟ್ಟು ಕೊಡುತ್ತಿರಲಿಲ್ಲ. ಉದ್ಯಾವರ ಗ್ರಾಮದ ಅಭಿವೃದ್ದಿಯಲ್ಲಿ ಮಹತ್ತರ ಪಾತ್ರ ವಹಿಸಿದ ಮಂಜಣ್ಣ ಉದ್ಯಾವರವನ್ನು ಕಟ್ಟುವ ಕೆಲಸ ಮಾಡಿದ್ದು ಅವರ ಗತಿಶೀಲತೆ ಎಂದು ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಪ್ರೊ. ಎಂ. ಪ್ರಸಾದ್ ರಾವ್ ಅವರು ಸೇವಾ ಮತ್ತು ಸಾಂಸ್ಕøತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಹಿಂದೂ ಶಾಲಾ ಶತಮಾನೋತ್ತರ ಸುವರ್ಣ ಸಂಭ್ರಮ ಸಭಾ ಭವನದಲ್ಲಿ ಜರಗಿದ ಉದ್ಯಾವರದ ಅಭಿವೃದ್ಧಿಯ ಹರಿಕಾರರಾದ ಮಂಜುನಾಥ ಉದ್ಯಾವರರವರ ಆರನೇ ಸಂಸ್ಮರಣಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ಅವರು ಮುಂದುವರಿಯುತ್ತಾ ಮಂಜಣ್ಣ ಜನಪ್ರತಿನಿಧಿಗಳು ಮತ್ತು ಜನಸಾಮಾನ್ಯರ ನಡುವಿನ ಕೊಂಡಿಯಾಗಿ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದರು. ಯಾವ ಸಾಮಾನ್ಯನೂ ಕೂಡ ಅವರಲ್ಲಿ ನಿರಾಂತಕವಾಗಿ ಮಾತನಾಡಬಹುದಿತ್ತು. ಈ ಕಾಲದಲ್ಲಿ ದುರ್ಲಭವಾದ ಭೌದ್ಧಿಕ ವಿಚಾರ ಚರ್ಚೆಗೆ ತನ್ನನ್ನು ತಾನು ತೆರೆದುಕೊಳ್ಳುತ್ತಿದ್ದರು. ತನ್ನದೇ ಸರಿ ಎನ್ನುವ ವಾದ ಅವರಲ್ಲಿ ಎಂದೂ ಇರಲಿಲ್ಲ ಸರಿ ಎಂದು ಕಂಡದ್ದನ್ನು ಒಪ್ಪಿಕೊಳ್ಳುತ್ತಿದ್ದರು. ನಿರಂತರ ರಾಜಕೀಯ ಮತ್ತು ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡ ಅವರು ತನ್ನ ಒತ್ತಡವನ್ನು ನಿವಾರಿಸಿ ಕೊಳ್ಳುವುದಕ್ಕೆ ಯಕ್ಷಗಾನವನ್ನು ನೆಚ್ಚಿಕೊಂಡಿದ್ದರು. ಮಂಜಣ್ಣ ಎಂದು ಕೂಡಾ ಮರೆಯಲಿಕ್ಕೆ ಆಗದ ಸರಳ ಸಜ್ಜನಿಕೆಯ ಮಾನವತಾವಾದಿ ಎಂದರು.

ಅಧ್ಯಕ್ಷತೆಯನ್ನು ವಹಿಸಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ಜನಾರ್ದನ ತೋನ್ಸೆಯವರು ಮಾತನಾಡುತ್ತಾ 32 ವರ್ಷ ದೀರ್ಘಕಾಲ ರಾಷ್ಟ್ರ ನಾಯಕರಾದ ಶ್ರೀ ಓಸ್ಕರ್ ಫೆರ್ನಾಂಡಿಸ್‍ರವರ ಆಪ್ತ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಮಂಜಣ್ಣ ಅವರ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿಕೊಂಡಿದ್ದಾರೆ. ಇದನ್ನು ಓಸ್ಕರ್ ಫೆರ್ನಾಂಡಿಸ್‍ರವರು ಒಂದು ಸಭೆಯಲ್ಲಿ ಹೇಳಿದ್ದರು.. ಎದುರಿಗೆ ಸೌಮ್ಯವಾದಿಯಾಗಿ ಕಂಡರೂ ಕೂಡಾ ಬಡ ಜನರ ಸಮಸ್ಯೆ ಪರಿಹಾರ ಮಾಡುವ ಹಂತದಲ್ಲಿ ಎಷ್ಟೇ ದೊಡ್ಡ ವ್ಯಕ್ತಿಗಳಾಗಿದ್ದರೂ ಅವರನ್ನು ಎದುರು ಹಾಕಿಕೊಳ್ಳಲು ಅವರು ಹಿಂಜರಿಯುತ್ತಿರಲಿಲ್ಲ.. ಎಂದೂ ತಾನು ನಂಬಿದ ಪ್ರಾಮಾಣಿಕತೆ, ನೇರವಂತಿಕೆಯನ್ನು ಬಿಟ್ಟು ಕೊಡುತ್ತಿರಲಿಲ್ಲ. ನಿರಂತರವಾಗಿ ರಾಜಕೀಯದ ಪ್ರಭಾವಿ ಸ್ಥಾನದಲ್ಲಿದ್ದರೂ ಕೂಡಾ ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತಕ್ಕೆ ಬಲಿಯಾಗದೆ ಬದುಕಿದ್ದ ಮಂಜುನಾಥ ಉದ್ಯಾವರ ಮುಂದಿನ ಪೀಳಿಗೆಗೆ ಒಂದು ಆದರ್ಶ ಮಾದರಿ ಅವರನ್ನು ನೆನಪಿಸುವ ಮೂಲಕ ಸಂಸ್ಥೆ ಉತ್ತಮ ಕೆಲಸ ಮಾಡುತ್ತಿದೆ ಎಂದರು.

ಮತ್ತೋರ್ವ ಅತಿಥಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ದಿವಾಕರ ಕುಂದರ್‍ರವರು ಮಾತನಾಡುತ್ತಾ ಮಂಜಣ್ಣ ಇಲ್ಲದ ಉದ್ಯಾವರವನ್ನು ಊಹಿಸುತ್ತಿರುವುದು ತುಂಬಾ ಕಷ್ಟ ಅವರ ಕಾಲದಲ್ಲಿ ಉದ್ಯಾವರ ಅಭಿವೃದ್ಧಿ ಕೆಲಸ ತೀವ್ರ ರೀತಿಯಲ್ಲಿ ಜರಗಿದೆ. ನಿಜಾರ್ಥದಲ್ಲಿ ಅವರೊಬ್ಬ “ ಉದ್ಯಾವರದ ಅಭಿವೃದ್ಧಿ ಹರಿಕಾರ” ತಾನು ಒಪ್ಪಿಕೊಂಡ ಸಿದ್ಧಾಂತಕ್ಕೆ ನಿಷ್ಠರಾದ ಅವರು ಎಂದೂ ರಾಜಿ ಮಾಡಿ ಕೊಳ್ಳುತ್ತಿರಲಿಲ್ಲ.  ತಾನು ಪ್ರತಿನಿಧಿಸುವ ಪಕ್ಷದ ಸಂಘಟನೆಯನ್ನು ಅತ್ಯಂತ ಅಧ್ಬುತವಾಗಿ ಮಾಡುತ್ತಾ ಮಂಜಣ್ಣ ಯುವಕರನ್ನು ಶಿಸ್ತು ಬದ್ಧವಾಗಿ ಸಂಘಟನೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು ಮತ್ತು ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಪ್ರೇರೇಪಿಸುತ್ತಿದ್ದರು. ಅವರ ಈ ಕೆಲಸವನ್ನು ನಾವು ಮುಂದುವರಿಸಿ ಒಗ್ಗಟ್ಟನಿಂದ ಸಂಘಟನೆಯನ್ನು ಕಟ್ಟಿದರೆ ಅದೇ ಮಂಜಣ್ಣನಿಗೆ ಕೊಡುವ ಗೌರವ ಎಂದರು.

ವೇದಿಕೆಯಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಗಂಧಿ ಶೇಖರ್, ಸಂಸ್ಥೆಯ ನಿರ್ದೇಶಕರಾದ ಶ್ರೀ ಅಬ್ದುಲ್ ಜಲೀಲ್ ಸಾಹೇಬ್, ಕೋಶಾಧಿಕಾರಿ ಶ್ರೀ ಅನ್ಸರ್ ಸತ್ತಾರ್ ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಅನೂಪ್ ಕುಮಾರ್ ರವರು ಸ್ವಾಗತಿಸಿದರು. ನಿರ್ದೇಶಕ ಶ್ರೀ ಉದ್ಯಾವರ ನಾಗೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಶ್ರೀ ಗಿರೀಶ್ ಗುಡ್ಡೆಯಂಗಡಿ ವಂದಿಸಿದರು. ಹಿರಿಯ ಸದಸ್ಯ ಶ್ರೀ ರಮೇಶ್ ಕುಮಾರ್ ಉದ್ಯಾವರ ಕಾರ್ಯಕ್ರಮ ನಿರ್ವಹಿಸಿದರು.

ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಕೇಂದ್ರ ಇಂದ್ರಾಳಿ ಕಲಾವಿದರಿಂದ ಶ್ರೀ ಬನ್ನಂಜೆ ಸಂಜೀವ ಸುವರ್ಣ ಇವರ ನಿರ್ದೇಶನದಲ್ಲಿ “ ಜಟಾಯು ಮೋಕ್ಷ” ಯಕ್ಷ ನಾಟಕ ಜರಗಿತು.

 

Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




52nd UAE National Day 2023 - Abu Dhabi Fireworks.
View More

Maundy Thursday 2024 | LIVE From St. Theresa’s Church, Kemmannu | Udupi |Maundy Thursday 2024 | LIVE From St. Theresa’s Church, Kemmannu | Udupi |
2 BHK Flat for sale on the 6th floor of Eden Heritage, Santhekatte, Kallianpur, Udupi2 BHK Flat for sale on the 6th floor of Eden Heritage,  Santhekatte, Kallianpur, Udupi.
Kemmennu for sale 1 BHK 628 sqft, Air Conditioned flatKemmennu for sale 1 BHK 628 sqft, Air Conditioned  flat
Symphony98 Releases Soul-Stirring Rendition of Lenten Hymn "Khursa Thain"Symphony98 Releases Soul-Stirring Rendition of Lenten Hymn
Palm Sunday 2024 at St. Theresa’s Church, Kemmannu | LIVEPalm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From KemmannuFinal Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu ChannelCarmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu ChannelFinal Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From KemmannuValentine’s Day Special❤️||Multi-lingual Covers || Symphony98 From Kemmannu
Final Journey of Lionel John Lewis (74 years) | LIVE from Milagres Cathedral | Kallianpur | UdupiFinal Journey of Lionel John Lewis (74 years) | LIVE from Milagres Cathedral | Kallianpur | Udupi
Rozaricho Gaanch December 2023 issue, Mount Rosary Church Santhekatte Kallianpur, UdupiRozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of UdupiAn Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special IssueDiocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | UdupiFinal Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | UdupiEarth Angels Anniversary | Comedy Show 2024 | Live From St. Theresa’s Church | Kemmannu | Udupi
Vespers 2024 | St. Theresa’s Church, KemmannuVespers 2024 | St. Theresa’s Church, Kemmannu
Annual Church Feast 2024 | St. Theresa’s Church, KemmannuAnnual Church Feast 2024 | St. Theresa’s Church, Kemmannu
Confraternity Sunday | St. Theresa’s Church, KemmannuConfraternity Sunday | St. Theresa’s Church, Kemmannu
Kemmannu Cricket Match 2024 | LIVE from KemmannuKemmannu Cricket Match 2024 | LIVE from Kemmannu
CHRISTMAS MASS-2023 | St. Theresa’s Church | Live from Kemmannu | UdupiCHRISTMAS MASS-2023 | St. Theresa’s Church | Live from Kemmannu | Udupi
Annual Day 2023 | Carmel English School, Live From KemmannuAnnual Day 2023 | Carmel English School, Live From Kemmannu
Naturya - Taste of Namma Udupi - Order NOWNaturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.New Management takes over Bannur Mutton, Santhekatte, Kallianpur. Visit us and feel the difference.
Easter 2023 - Milrachi Lara From Milagres Cathedral, Kallianpur, UdupiEaster 2023 - Milrachi Lara From Milagres Cathedral, Kallianpur, Udupi
Focus Studio, Near Hotel Kidiyoor, UdupiFocus Studio, Near Hotel Kidiyoor, Udupi