Brief Udupi Karkala News with pictures
Kemmannu News Network, 05-09-2018 14:47:45
ಜನರಿಗೆ ಸರ್ಕಾರದ ಯೋಜನೆ ತಿಳಿಸಿ
ದಿನಾಂಕ 11-8-2018ರಂದು ಪೂರ್ವಾಹ್ನ 10.30ಕ್ಕೆ ಸರಿಯಾಗಿ ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ರಾಜ್ ಸಂಘಟನೆಯ ಕಾರ್ಯಕಾರಿಣಿ ಸಭೆಯು ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ವಂದೇ ಮಾತರಂ ನೊಂದಿಗೆ ಆರಂಭವಾದ ಸಭೆಯಲ್ಲಿ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಹಾಗೂ ಸಂಘಟನೆಯ ಗೌರವ ಸಲಹೆಗಾರರೂ ಆಗಿರುವ ಶ್ರೀಮತಿ ವೆರೋನಿಕಾ ಕರ್ನೇಲಿಯೋರವರು ಸಭೆಯನ್ನು ಉದ್ದೇಶಿಸಿ ಮಾತನಾಡಿ ಹಸಿವು ಮುಕ್ತ ಕರ್ನಾಟಕಕ್ಕಾಗಿ ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ, ತಳ ಸಮುದಾಯಗಳ ಅಭ್ಯುದಯ, ಸಮೃದ್ಧ ಕೃಷಿ, ಆರೋಗ್ಯ ಕರ್ನಾಟಕ, ಬಾಪೂಜಿ ಸೇವಾಕೇಂದ್ರ, ಮನಸ್ವಿನಿ, ಮೈತ್ರಿ ಮೊದಲಾದ ಹಲವಾರು ಜನಪರ ಯೋಜನೆಗಳನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದೆ. ಅವುಗಳ ಕುರಿತು ಗ್ರಾಮೀಣ ಮಟ್ಟದಲ್ಲಿ ಜಾಗೃತಿ ಮೂಡಿಸುವುದು ಶ್ರೀ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಆರಂಭವಾದ ರಾಜೀವ್ ಗಾಂಧಿ ಪಂಚಾಯತ್ ರಾಜ್ಯ ಸಂಘಟನೆಯ ಉದ್ದೇಶ ಎಂದರು.
ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕಿ ರೋಶನಿ ಒಲಿವರ್ರವರು ಮಾತನಾಡಿ ರಾಜ್ಯ ಸರಕಾರ ವಿವಿಧ ಇಲಾಖೆಗಳ ಮೂಲಕ ಜನರಿಗೆ ಅನೇಕ ಸೌಲಭ್ಯಗಳಠಿನ್ನು ನೀಡುತ್ತಿದ್ದು ಅವುಗಳ ಬಳಕೆ ಮಾಡಿಕೊಂಡು ಆರ್ಥಿಕ ಅಭಿವೃದ್ಧಿ ಸಾಧಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಘಟನೆಯ ಉಸ್ತುವಾರಿ ಡಾ| ಸುನಿತಾ ಶೆಟ್ಟಿ, ಜಿಲ್ಲಾ ಸಹ ಸಂಯೋಜಕಿ ಮೇರಿ ಡಿ’ಸೋಜಾ, ವಾಣಿ ಶೆಟಿ, ಬ್ಲಾಕ್ ಸಂಯೋಜಕರಾದ ಸೂರ್ಯ ಸಾಲಿಯಾನ್, ಸತೀಶ್ ಜಪ್ತಿ, ವೈ.ಬಿ. ರಾಘವೇಂದ್ರ, ದಿನೇಶ್ ಕೋಟ್ಯಾನ್, ಭಾನು ಭಾಸ್ಕರ್, ಶಂಕರ ನಾಯಕ್, ದೇವೇಂದ್ರ ಕೋಟ, ರಫೀಕ್ ಕೋಟ, ಕಲ್ಪನ, ಪದ್ಮಾವತಿ, ಮೀನಾಕ್ಷಿ, ಅಮೃತ ಮೊದಲಾದವರು ಉಪಸ್ಥಿತರಿದ್ದರು. ರಾಷ್ಟ್ರಗೀತೆಯೊಂದಿಗೆ ಸಭೆ ಮುಕ್ತಾಯಗೊಂಡಿತು.
ದಿನಾಂಕ 20.08.2018ರಂದು ಬೆಳಿಗ್ಗೆ 10.30ಕ್ಕೆ ಸರಿಯಾಗಿ ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ರಾಜ್ ಸಂಘಟನೆ ವತಿಯಿಂದ ಕಾರ್ಕಳ ಈದು ಗ್ರಾಮದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶ್ರಮದಲ್ಲಿ ಬಡ ವಿದ್ಯಾರ್ಥಿಗಳೊಂದಿಗೆ ಮಾಜಿ ಪ್ರಧಾನಿ ದಿ| ರಾಜೀವ್ ಗಾಂಧಿಯವರ 74ನೇ ಮತ್ತು ಮಾಜಿ ಮುಖ್ಯಮಂತ್ರಿ ದಿ| ದೇವರಾಜ ಅರಸು ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ವಂದೆ ಮಾತರಂನೊಂದಿಗೆ ಸಭೆ ಪ್ರಾರಂಭವಾಯಿತು. ಸಭೆಯಲ್ಲಿ ಮೊದಲಿಗೆ ನಮ್ಮನ್ನು ಅಗಲಿದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಮೌನ ಪ್ರಾರ್ಥನೆಯೊಂದಿಗೆ ಗೌರವ ಸಲ್ಲಿಸಲಾಯಿತು. ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕಿ ರೋಶನಿ ಒಲಿವರ್ ಪ್ರಸ್ತಾವಿಕ ನುಡಿಗಳೊಂದಿಗೆ ಎಲ್ಲರನ್ನು ಸ್ವಾಗತಿಸಿದರು. ಹಾಗೆಯೇ ವೇದಿಕೆಯಲ್ಲಿದ್ದ ಗಣ್ಯರೊಂದಿಗೆ ದೀಪಬೆಳಗಿಸಿ ಮಾಜಿ ಪ್ರಧಾನಿ ದಿ| ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸುರವರ ಭಾವಚಿತ್ರಕ್ಕೆ ಪುಷ್ಪ ನಮನಗೈಯಲಾಯಿತು.
ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡಿ ರಾಜೀವ್ ಗಾಂಧಿಯವರ ತತ್ವ ಆದರ್ಶಗಳನ್ನು ಹಾಗೂ ಅವರ ಚಿಂತನೆಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ವಿದ್ಯಾರ್ಥಿಗಳು ಮಾಜಿ ಪ್ರಧಾನಿ ದಿ| ರಾಜೀವ್ ಗಾಂಧಿಯವರಿಗೆ ಸಲ್ಲಿಸಬಹುದಾಗಿದೆ ಎಂದರು.
ಹಾಗೆಯೇ ಮುಖ್ಯ ಅತಿಥಿಗಳಾಗಿರುವ ಸನ್ಮಾನ್ಯ ಶ್ರೀ ಗೊಪಾಲ ಭಂಡಾರಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡಿ ದಿ| ರಾಜೀವ್ ಗಾಂಧಿಯವರು ಅಧಿಕಾರ ವಿಕೇಂದ್ರೀಕರಣಕ್ಕೆ ಹೊಸ ಸ್ವರೂಪ ನೀಡಿ ಪಂಚಾಯತ್ರಾಜ್ ವ್ಯವಸ್ಥೆಗೆ ಸ್ವತಂತ್ರ ಅಧಿಕಾರದೊಂದಿಗೆ ಮೇಲ್ಸ್ಥರದ ಜನಪ್ರತಿನಿಧಿಗಳಿಗೆ ಹಸ್ತಕ್ಷೇಪ ನಡೆಸದಂತೆ ಕಾನೂನು ರೂಪಿಸಿ ಪಂಚಾಯತ್ರಾಜ್ ಕಾಯ್ದೆಗೆ ಅಮೂಲಾಗ್ರ ತಿದ್ದುಪಡಿ ತಂದು ಮೀಸಲಾತಿ ಜಾರಿಗೆ ತಂದಿರುವುದಲ್ಲದೆ ಸಮಾಜದಲ್ಲಿ ತುಳಿತಕ್ಕೊಳಪಟ್ಟ ಕಟ್ಟಕಡೆಯ ಜನಾಂಗದ ಮಹಿಳೆಯರು, ಅಲ್ಪಸಂಖ್ಯಾತರು, ದಲಿತರಿಗೆ ರಾಜಕೀಯ ಶಕ್ತಿ ನೀಡಿ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿ ಸಹಿತ ಅಧ್ಯಕ್ಷರಾಗುವ ಅವಕಾಶ ನೀಡಿ ಭಾರತದಲ್ಲಿ ದಿಟ್ಟತನದಿಂದ ಪಂಚಾಯತ್ರಾಜ್ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿದ್ದ ನಾಯಕರಾಗಿದ್ದರು ಎಂದರು.
ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ರಾಜ್ ಸಂಘಟನೆಯಿಂದ ಆಶ್ರಮಕ್ಕೆ ರೂ. 10,000 ಧನಸಹಾಯ ನೀಡಲಾಯಿತು ಹಾಗೂ ಬಡ ವಿದ್ಯಾರ್ಥಿಗಳಿಗೆ ಜಾಮೆಟ್ರಿ ಬಾಕ್ಸ್ ವಿತರಿಸಲಾಯಿತು.
ಸಂಘಟನೆಯ ಉಸ್ತುವಾರಿ ಡಾ| ಸುನಿತಾ ಶೆಟ್ಟಿ, ಜಿಲ್ಲಾ ಸಹ ಸಂಯೋಜಕಿ ಮೇರಿ ಡಿ’ಸೋಜಾ, ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಮಾಲಿನಿ ರೈ, ಈದು ಗ್ರಾಮ ಸಮಿತಿ ಅಧ್ಯಕ್ಷ ವಿಜಯ ಕುಮಾರ್, ಎ.ಪಿ.ಎಂ.ಸಿ. ಸದಸ್ಯ ನಾರಾಯಣ ಸುವರ್ಣ, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ವಾಗ್ಲೆ, ಬ್ಲಾಕ್ ಸಂಯೋಜಕರಾದ ಸತೀಶ್ ಜಪ್ತಿ, ಸೂರಿ ಸಾಲ್ಯಾನ್, ಸೋಮನಾಥ ಬಿ.ಕೆ., ದಿನೇಶ್ ಕೋಟ್ಯಾನ್, ಜ್ಯೋತಿ ಮೆನನ್, ಪ್ರಮೀಳ ಜತ್ತನ್ನ, ಜೆರಾಲ್ಡ್ ಕ್ರಾಸ್ತ, ಶಂಕರ ನಾಯಕ್, ಅಮೃತ, ಚಂದ್ರವತಿ, ಯಶೋಧ ಶೆಟ್ಟಿ ಮತ್ತು ವಿದ್ಯಾರ್ಥಿಗಳು, ಕಾಂಗ್ರೆಸ್ ಮುಖಂಡರುಗಳು, ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ರಾಷ್ಟ್ರಗೀತೆಯೊಂದಿಗೆ ಸಭೆಯನ್ನು ಮುಗಿಸಿ ಸಿಹಿತಿಂಡಿ ವಿತರಿಸಲಾಯಿತು. ವೈ.ಬಿ. ರಾಘವೇಂದ್ರರವರು ಕಾರ್ಯಕ್ರಮ ನಿರೂಪಿಸಿದರು. ಭಾನು ಭಾಸ್ಕರ್ರವರು ವಂದನಾರ್ಪಣೆಗೈದರು.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link