Brief Udupi News with pictures
Kemmannu News Network, 26-11-2018 22:44:35
ಮಕ್ಕಳ ಪ್ರತಿಭೆಯನ್ನು ಪೋಷಕರು ಪ್ರೋತ್ಸಾಹಿಸಬೇಕು- ದಿನಕರ ಬಾಬು
ಉಡುಪಿ, ನವೆಂಬರ್ 24 (ಕರ್ನಾಟಕ ವಾರ್ತೆ) : ಮಕ್ಕಳಲ್ಲಿರುವ ಪ್ರತಿಭೆಯನ್ನು ಶಾಲೆಯಲ್ಲಿ ಶಿಕ್ಷಕರು ಗುರುತಿಸುತ್ತಾರೆ ಆದರೆ ಆ ಪ್ರತಿಭೆಯನ್ನು ಪ್ರೋತ್ಸಾಹಿಸುವ ಜವಾಬ್ದಾರಿ ಪೋಷಕರದ್ದಾಗಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.
ಅವರು ಶನಿವಾರ ಉಡುಪಿಯ ಬಾಲ ಭವನದಲ್ಲಿ, ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ (ರಿ.) ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸೊಸೈಟಿ ಉಡುಪಿ ವತಿಯಿಂದ, ಕನ್ನಡ ರಾಜ್ಯೋತ್ಸವ ಅಂಗವಾಗಿ ಮಕ್ಕಳಿಗೆ ಆಯೋಜಿಸಿದ್ದ ವಿವಿಧ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳಲ್ಲಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಿ ಅವರಿಗೆ ಅವಕಾಶ ನೀಡಿದಲ್ಲಿ ಉತ್ತಮ ಪ್ರತಿಭಾವಂತರು ಬೆಳಕಿಗೆ ಬರುತ್ತಾರೆ, ಮಕ್ಕಳಿಗೆ ಪೋಷಕರು ನೀಡುವ ಬೆಂಬಲ ಹೆಚ್ಚಿನ ಸಾಧನೆ ಮಾಡಲು ಪ್ರೇರೇಪಣೆ ನೀಡುತ್ತದೆ, ಉತ್ತಮ ಪ್ರತಿಭೆ ಹೊಂದಿರುವ ಮಕ್ಕಳು ಸಮಾಜದ ಆಸ್ತಿ, ಈ ಮಕ್ಕಳು ಸತ್ಪ್ರಜೆಗಳಾಗಿ ರೂಪುಗೊಂಡು, ಉತ್ತಮ ಸಮಾಜ ನಿರ್ಮಾಣಕ್ಕೆ ಕಾರಣರಾಗುತ್ತಾರೆ ಎಂದು ದಿನಕರ ಬಾಬು ಹೇಳಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಮಾತನಾಡಿ, ಮಕ್ಕಳನ್ನು ಪಠ್ಯ ಚಟುವಟಿಕೆಗಳಿಗೆ ಮಾತ್ರ ಸೀಮಿತಗೊಳಿಸಿದೆ, ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸುವುದು ಅಗತ್ಯ ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ವಿಕಸನ ಸಾಧ್ಯವಾಗಲಿದೆ, ಮಕ್ಕಳಲ್ಲಿನ ತಪ್ಪುಗಳನ್ನು ತಿದ್ದಿ ಹೇಳಿ ಅವರನ್ನು ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ಮಕ್ಕಳಿಗಾಗಿ ಚಿತ್ರಕಲೆ, ರಂಗೋಲಿ, ಛದ್ಮವೇಷ ಹಾಗೂ ಕನ್ನಡಗೀತೆಗಳ ಗಾಯನ ಸ್ಪರ್ದೇ ನಡೆಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಧುಕರ್ ಉಪಸ್ಥಿತರಿದ್ದರು.
ಉಡುಪಿ ತಾಲೂಕು ಶಿಶು ಅಭಿವೃಧ್ದಿ ಯೋಜನಾಧಿಕಾರಿ ವೀಣಾ ಸ್ವಾಗತಿಸಿದರು, ಸರ್ವೇಶ್ವರ್ ವಂದಿಸಿದರು.
ಪೊಲೀಸ್ ಕಾನ್ಸ್ಟೇಬಲ್ : ಲಿಖಿತ ಪರೀಕ್ಷೆ ಮುಂದೂಡಿಕೆ
ಉಡುಪಿ, ನವೆಂಬರ್ 24 (ಕರ್ನಾಟಕ ವಾರ್ತೆ) :ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ, ಅಭ್ಯರ್ಥಿಗಳಿಗೆ ನವೆಂಬರ್ 25 ರಂದು ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜು, ಉಡುಪಿ(ಎಮ್.ಜಿ.ಎಮ್) ಮತ್ತು ಪೂರ್ಣಪ್ರಜ್ಞ ಕಾಲೇಜು(ಪಿ.ಪಿ.ಸಿ) ಗಳಲ್ಲಿ ನಿಗಧಿಪಡಿಸಿದ್ದ ಲಿಖಿತ ಪರೀಕ್ಷೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಮುಂದಿನ ಲಿಖಿತ ಪರೀಕ್ಷೆಯ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮ ಪಂಚಾಯತ್: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ
ಉಡುಪಿ, ನವೆಂಬರ್ 24 (ಕರ್ನಾಟಕ ವಾರ್ತೆ) :ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯ ಕಾರ್ಕಳ ತಾಲೂಕು ಇನ್ನಾ ಗ್ರಾಮ ಪಂಚಾಯತ್ನಲ್ಲಿ ಇತ್ತೀಚೆಗೆ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು ಬಬಿತಾ ಇವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು.
ಜಿಲ್ಲಾ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ ಐ, ಮುಖ್ಯ ಅತಿಥಿಯಾಗಿ ಭಾಗವಹಿಸಿ ಗ್ರಂಥಾಲಯ ಮಹತ್ವವನ್ನು ವಿವರಿಸಿದರು. ವ್ಯಕ್ತಿಯ ಪ್ರತಿಭೆಗಳ ಅನಾವರಣ ಗ್ರಂಥಾಲಯ ಪುಸ್ತಕ ಓದುವಿಕೆಯಿಂದ ಮಾತ್ರ ಸಾಧ್ಯ ಎಂದು ಈ ಸಂದರ್ಭದಲ್ಲಿ ನುಡಿದರು.
ಪಂಚಾಯತ್ ವ್ಯಾಪ್ತಿಯ ಎಲ್ಲಾ ಅರ್ಹ ಮಕ್ಕಳಿಗೆ ಗಾಯನ, ಆಶು ಭಾಷಣ, ರಸ ಪ್ರಶ್ನೆ ಸ್ಪರ್ಧೆ, ಛದ್ಮವೇಷ ಸ್ಪರ್ಧೆ ಏರ್ಪಡಿಸಿ, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು ಹಾಗೂ ವಿಶ್ವಶೌಚಾಲಯ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕುಶ ಆರ್ ಮೂಲ್ಯ, ಸದಸ್ಯರುಗಳಾದ ಅಲೆನ್ ಡಿಸೋಜ, ದೀಪಕ್ ಕೋಟ್ಯಾನ್, ರೂಪಾ ಆರ್ ಕೋಟ್ಯಾನ್, ಶರ್ಮಿಳಾ, ಸರಿತಾ ಶೆಟ್ಟಿ, ನ್ಯಾನ್ಸಿ ಡಿಸಿಲ್ವಾ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಾನ್ ಮೆಂಡೋನ್ಸಾ, ಗ್ರಾಮಸ್ಥರು, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಪ್ರಕಾಶ್ ರಾವ್ ಪಿ.ಎನ್. ಶಿಕ್ಷಕರಾದ ಸುಧಾಕರ ಆಚಾರ್ಯ, ರಾಜೇಂದ್ರ ಭಟ್, ಸ.ಹಿ.ಮಾ.ಪ್ರಾ.ಶಾಲೆ ಎಸ್ ಡಿ ಎಮ್ ಸಿ ಅದ್ಯಕ್ಷರಾದ ಶೋಭಾ ರವಿ ಉಪಸ್ಥಿತರಿದ್ದರು. ಮಹೇಶ್ .ಎಸ್.ಎಚ್ ಪಂಚಾಯತ್ ಅಭಿವೃದ್ಧಿ ಕಾರ್ಯಕ್ರಮ ನಿರೂಪಿಸಿದರು.
ಅಪರಿಚಿತ ವ್ಯಕ್ತಿಯ ಮಾಹಿತಿ ಪತ್ತೆ ಬಗ್ಗೆ
ಉಡುಪಿ, ನವೆಂಬರ್ 24 (ಕರ್ನಾಟಕ ವಾರ್ತೆ) :ಜಿಲ್ಲಾ ಆಸ್ಪತ್ರೆ ಉಡುಪಿಯಲ್ಲಿ ಒಳರೋಗಿಯಾದ ದಾಖಲಾದ ಬ್ರಹ್ಮಾವರದ ರಾಮೇಶ್ವರ (70 ವರ್ಷ) ಎಂಬುವವರ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾರರು ಯಾರಾದರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820-2520555 / 9449827833 ನ್ನು ಸಂಪರ್ಕಿಸುವಂತೆ ಜಿಲ್ಲಾ ಶಸ್ತ್ರಚಿಕಿತ್ಸರ ಪ್ರಕಟಣೆ ತಿಳಿಸಿದೆ.
ತಾಲೂಕು ಪಂಚಾಯತ್: ಸಾಮಾನ್ಯ ಸಭೆ
ಉಡುಪಿ, ನವೆಂಬರ್ 24 (ಕರ್ನಾಟಕ ವಾರ್ತೆ) : ಉಡುಪಿ ತಾಲೂಕು ಪಂಚಾಯತ್ನ 16 ನೇ ಸಾಮಾನ್ಯ ಸಭೆಯು ನವೆಂಬರ್ 29 ರಂದು ಬೆಳಗ್ಗೆ 10.30 ಕ್ಕೆ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನಕದಾಸ ಜಯಂತಿ
ಉಡುಪಿ, ನವೆಂಬರ್ 24 (ಕರ್ನಾಟಕ ವಾರ್ತೆ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕನಕದಾಸ ಜಯಂತಿ ಕಾರ್ಯಕ್ರಮವು ನವೆಂಬರ್ 26 ರಂದು ಬೆಳಗ್ಗೆ 9.30 ಕ್ಕೆ ಗೋವಿಂದ ಕಲ್ಯಾಣ ಮಂಟಪ, ಅಜ್ಜರಕಾಡು, ಉಡುಪಿಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕನ್ನಡ ಸಂಸ್ಕøತಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಬಗ್ಗೆ
ಉಡುಪಿ, ನವೆಂಬರ್ 24 (ಕರ್ನಾಟಕ ವಾರ್ತೆ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ನವೆಂಬರ್ 26 ರಂದು ಬೆಳಗ್ಗೆ 9.30 ಕ್ಕೆ ಗೋವಿಂದ ಕಲ್ಯಾಣ ಮಂಟಪ, ಅಜ್ಜಕಾಡು, ಉಡುಪಿ ಇಲ್ಲಿ ಕನಕದಾಸ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲಾ ಇಲಾಖಾ ಅಧಿಕಾರಿಗಳು/ ಸಿಬ್ಬಂದಿಗಳು ಪಾಲ್ಗೊಳ್ಳುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆ
ಉಡುಪಿ, ನವೆಂಬರ್ 24 (ಕರ್ನಾಟಕ ವಾರ್ತೆ) : ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು.
ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳನ್ನು ನವೆಂಬರ್ 27 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಕಾರ್ಕಳ ಪ್ರವಾಸಿ ಮಂದಿರ, ನವೆಂಬರ್ 28 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ ಹಾಗೂ ನವೆಂಬರ್ 28 ರ ಸಂಜೆ 3 ರಿಂದ 4.30 ರ ವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ದೂರು ಸ್ವೀಕರಿಸಲಾಗುವುದು.
ಉಡುಪಿ ತಾಲೂಕಿಗೆ ಸಂಬಂದಪಟ್ಟಂತೆ ದೂರು ಅರ್ಜಿಗಳನ್ನು ನೀಡುವವರು ನೇರವಾಗಿ ಕರ್ನಾಟಕ ಲೋಕಾಯಕ್ತ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಉಡುಪಿ, ದೂರವಾಣಿ ಸಂಖ್ಯೆ 0820-2527770, ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಉಡುಪಿ ದೂರವಾಣಿ ಸಂಖ್ಯೆ: 0820-2536661 ಸಂಪರ್ಕಿಸಬಹುದು ಎಂದು ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ವಿಭಾಗ, ಕರ್ನಾಟಕ ಲೋಕಾಯುಕ್ತ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.
ಭೋವಿ ಅಭಿವೃದ್ಧಿ ನಿಗಮ-“ಸಮೃದ್ಧಿ ಯೋಜನೆ”: ಅರ್ಜಿ ಆಹ್ವಾನ
ಉಡುಪಿ, ನವೆಂಬರ್ 24 (ಕರ್ನಾಟಕ ವಾರ್ತೆ) : 2018-19ನೇ ಸಾಲಿನಲ್ಲಿ ಭೋವಿ ಅಭಿವೃದ್ಧಿ ನಿಗಮವು ಗ್ರಾಮೀಣ/ನಗರ ಪ್ರದೇಶಗಳಲ್ಲಿನ ಪರಿಶಿಷ್ಠ ಜಾತಿಯ ನಿರುದ್ಯೋಗಿ ಯುವಕ/ಯುವತಿಯರನ್ನು ಉದ್ಯಮ ಶೀಲರನ್ನಾಗಿಸಲು “ಸಮೃದ್ಧಿ ಯೋಜನೆ” ಅನುಷ್ಠಾನಗೊಳಿಸಲು ಉದ್ದೇಶಿಸಿದ್ದು, ಈ ಯೋಜನೆಯಡಿ ಪರಿಶಿಷ್ಠ ಜಾತಿಯ ನಿರುದ್ಯೋಗಿಗಳಿಗೆ ವಿವಿಧ ಸ್ವಯಂ ಉದ್ಯೋಗ ಘಟಕಗಳನ್ನು ಆರಂಭಿಸಲು ಹಾಗೂ ಲಾಭದಾಯಕವಾಗಿ ನಡೆಸಲು ಅಗತ್ಯವಾದ ಉದ್ಯಮಶೀಲತಾ ತರಬೇತಿ/ವೃತ್ತಿ ಕೌಶಲ್ಯ ತರಬೇತಿಯನ್ನು ನೀಡಿ ಮಾರುಕಟ್ಟೆ ವ್ಯವಸ್ಥೆಯೊಂದಿಗೆ ಘಟಕಗಳನ್ನು ಸೃಷ್ಟಿಸಲು ವ್ಯವಸ್ಥೆ ಮಾಡಲಾಗುವುದು.
ಈ ಯೋಜನೆಯಡಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನ. ಆನ್ಲೈನ್ hಣಣಠಿ://sಚಿmಡಿuಜhiಥಿoರಿಚಿಟಿe.ಛಿom/ ಮೂಲಕ ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಉಡುಪಿ ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು
ಉಡುಪಿ, ನವೆಂಬರ್ 24 (ಕರ್ನಾಟಕ ವಾರ್ತೆ) :2018-19 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರೋತ್ಸಾಹ ಧನ ಮಂಜೂರು ಮಾಡಲಾಗುತ್ತಿದೆ.
ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ 74.99 ರಷ್ಟು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 7000 ರೂ. ಗಳನ್ನು ಮತ್ತು ಶೇ.75 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 15000 ರೂ.ಗಳನ್ನು ಮಂಜೂರು ಮಾಡಲಾಗುತ್ತಿದೆ. ಈ ಪ್ರೋತ್ಸಾಹ ಧನವನ್ನು ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆ ಹಾಗೂ ಇತರೆ ವಿವರಗಳನ್ನು ಇಲಾಖೆಯ ವೆಬ್ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಆನ್ಲೈನ್ ಮೂಲಕ ನೋಂದಾಯಿಸಿಕೊಳ್ಳಬೇಕು. ಆನ್ಲೈನ್ ಮೂಲಕ ನೋಂದಾಯಿಸಲು ಕೊನೆಯ ದಿನ ಡಿಸೆಂಬರ್ 15.
ಅರ್ಹತಾ ಷರತ್ತುಗಳು: ವಿದ್ಯಾರ್ಥಿಯು ಕರ್ನಾಟಕ ರಾಜ್ಯದವರಾಗಿರಬೇಕು. ವಿದ್ಯಾರ್ಥಿಯು ಪರಿಶಿಷ್ಟ ಜಾತಿಗೆ ಸೇರಿರಬೇಕು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲಾಗುವುದು.
ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ, ಆಧಾರ್ ಕಾರ್ಡ್ನಲ್ಲಿರುವಂತೆ ಹೆಸರು ಮತ್ತು ಆಧಾರ್ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಖಆ ಸಂಖ್ಯೆ, ಅರ್ಜಿದಾರರ ಪಾಸ್ ಪೋರ್ಟ್ ಅಳತೆಯ ಫೋಟೋ, ಸ್ಕ್ಯಾನ್ ಮಾಡಲಾದ ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರ, ಆಧಾರ್ ಲಿಂಕ್ ಮಾಡಲಾದ ಬ್ಯಾಂಕ್ ಖಾತೆ ವಿವರ- ಈ ಎಲ್ಲಾ ದಾಖಲೆಗಳೊಂದಿಗೆ ಆನ್ಲೈನ್ನಲ್ಲಿ ನೋಂದಣಿ ಮಾಡಬೇಕು.
ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 0820-2574892 ಅನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸುವಂತೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ : ಅಂತರ್ ಜಾತಿ ವಿವಾಹಕ್ಕೆ ಸಹಾಯಧನ
ಉಡುಪಿ, ನವೆಂಬರ್ 24 (ಕರ್ನಾಟಕ ವಾರ್ತೆ) : ಪರಿಶಿಷ್ಟ ಜಾತಿಯ ಯುವಕ ಯುವತಿಯರು ಪರಿಶಿಷ್ಟ ಜಾತಿಯ ಸಮುದಾಯದ ಒಳಗೆ ಅಂತರ್ ಜಾತಿ ವಿವಾಹವಾದಲ್ಲಿ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಟಾನ ಮಾಡಲಾಗುತ್ತಿದ್ದು, ಈ ಯೋಜನೆಯ ಅರ್ಹ ಫಲಾನುಭವಿಗಳಿಗೆ ತಲಾ 2 ಲಕ್ಷ ರೂ. ಗಳನ್ನು ಸರ್ಕಾರದಿಂದ ನೀಡಲಾಗುವುದು. ಈ ಸಂಬಂಧ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕಚೇರಿ ಇಲಾಖಾ ವೆಬ್ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿಯನ್ನು ಸಲ್ಲಿಸಿ, ಸಂಬಂಧಿಸಿದ ಸೂಕ್ತ ದಾಖಲೆಗಳೊಂದಿಗೆ ಒಂದು ವಾರದೊಳಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ (ದೂ.ಸಂಖ್ಯೆ: 0820-2574892) ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿ ಇವರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.
ಅಂಚೆ ಅದಾಲತ್
ಉಡುಪಿ, ನವೆಂಬರ್ 24 (ಕರ್ನಾಟಕ ವಾರ್ತೆ) : ಉಡುಪಿ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಡಿಸೆಂಬರ್ 7 ರಂದು ಮಧ್ಯಾಹ್ನ 3 ಗಂಟೆಗೆ ತ್ರೈಮಾಸಿಕ ಅಂಚೆ ಅದಾಲತ್ ನಡೆಯಲಿದೆ.
ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳನ್ನು ಡಿಸೆಂಬರ್ 5 ರ ಮೊದಲು ಅಧೀಕ್ಷಕರ ಕಚೇರಿಗೆ ಕಳುಹಿಸಬಹುದಾಗಿದೆ ಮತ್ತು ಅಂಚೆ ಅದಾಲತ್ ನಡೆಯುವ ದಿನದಂದು ಹಾಜರಿದ್ದು, ಸಮಕ್ಷಮ ಚರ್ಚಿಸಿ, ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಂತೆ ಉಡುಪಿ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆವರ್ಸೆ ಗ್ರಾಮ ಪಂಚಾಯತ್: ಗ್ರಾಮಸಭೆ
ಉಡುಪಿ, ನವೆಂಬರ್ 24 (ಕರ್ನಾಟಕ ವಾರ್ತೆ) : 11 ನೇ ಆವರ್ಸೆ ಗ್ರಾಮ ಪಂಚಾಯತ್ನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2018-19 ನೇ ಸಾಲಿನ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆಯು ನವೆಂಬರ್ 29 ರಂದು ಬೆಳಗ್ಗೆ 10.30 ಕ್ಕೆ ಆವರ್ಸೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link