Brief Udupi News with pictures


Richard Dsouza
Kemmannu News Network, 05-12-2018 11:06:02


Write Comment     |     E-Mail To a Friend     |     Facebook     |     Twitter     |     Print


ದಿನಾಂಕ: 03-12-2018
ವಿಕಲಚೇತನರಿಗೆ ಅವಕಾಶ ನೀಡಿ- ನ್ಯಾ.ಲತಾ
     ಉಡುಪಿ, ಡಿಸೆಂಬರ್ 3 (ಕರ್ನಾಟಕ ವಾರ್ತೆ) : ವಿಕಲಚೇತನರಿಗೆ ಸಹಾನುಭೂತಿ ತೋರಿಸದೇ ಅವರಲ್ಲಿನ ಕೌಶಲ್ಯ, ಪ್ರತಿಭೆಯನ್ನು ಸಾಬೀತು ಮಾಡಲು ಸೂಕ್ತ ವೇದಿಕೆ ನಿರ್ಮಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ ತಿಳಿಸಿದ್ದಾರೆ.
     ಅವರು ಸೋಮವಾರ, ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನ(ಮಿನಿ ಹಾಲ್)ದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ, ವಕೀಲರ ಸಂಘ (ರಿ) ಉಡುಪಿ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ವಿಶೇಷ ಶಿಕ್ಷಕರು ಮತ್ತು ಶಿಕ್ಷಕೇತರರ ಸಂಘ ಉಡುಪಿ ಮತ್ತು ವಿಕಲಚೇತನರ ಸಂಘಟನೆಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಭಾರತ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕುಗಳನ್ನು ನೀಡಿದೆ, ವಿಕಲಚೇತನರು ಇತರರಂತೆ ಸಮಾನವಾಗಿ ಜೀವನ ನಡೆಸಲು ವಿಶೇಷ ಸೌಲಭ್ಯಗಳನ್ನು ನೀಡುವಂತೆ ನಿರ್ದೇಶನ ನೀಡಿದೆ, ಅದರಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ವಿಶೇಷ ಸೌಲಭ್ಯಗಳ ಪ್ರಯೋಜನವನ್ನು ವಿಕಲಚೇತನರು ಪಡೆಯುವಂತೆ ತಿಳಿಸಿದ ನ್ಯಾ. ಲತಾ ಅವರು, ವಿಕಲಚೇತನರಿಗೆ ಎಲ್ಲಾ ಕ್ಷೇತ್ರದಲ್ಲಿ ಅವಕಾಶ ನೀಡುವಂತೆ ಮತ್ತು ಅವರನ್ನು ಸಬಲರನ್ನಾಗಿ ಮಾಡುವಲ್ಲಿ ಎಲ್ಲಾ ಸಂಘ ಸಂಸ್ಥೆಗಳು ಸೇರಿದಂತೆ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು, ವಿಕಲಚೇತನ ಮಕ್ಕಳ ಪೋಷಕರು ತಮ್ಮ ಮಕ್ಕಳಿಗೆ ಸೂಕ್ತ ಪ್ರೋತ್ಸಾಹ ನೀಡಿ, ಅವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಪ್ರೇರೇಪಿಸಬೇಕು ಎಂದು ಹೇಳಿದರು.
    ವಿಶೇಷ ಸಾಧನೆ ಮಾಡಿದ ವಿಕಲಚೇತನರಾದ, ಮಣಿಪಾಲ ಅರುಣ ಕುಮಾರಿ (ಕಲಾಕ್ಷೇತ್ರ), ಕುಮಾರಿ ಸೌಜನ್ಯ (ಶಿಕ್ಷಣ, ಸಾಂಸ್ಕøತಿಕ ಮತ್ತು ಕ್ರೀಡೆ), ಕುಮಾರಿ ಭುವನಾ (ಕ್ರೀಡೆ), ಮಟ್ಟಿ ಲಕ್ಷ್ಮಿ ನಾರಾಯಣ ರಾವ್(ಸಮಾಜ ಸೇವೆ), ನೀಲಾಧರ ಶೆಟ್ಟಿಗಾರ್ (ಕ್ರಿಯಾಶೀಲ ಚಟುವಟಿಕೆ), ಅರುಣೋದಯ ವಿಶೇಷ ಶಾಲೆ( ಉತ್ತಮ ಸಂಸ್ಥೆ) ಇವರನ್ನು ಸನ್ಮಾನಿಸಲಾಯಿತು.
    ವಿಕಲಚೇತನರಿಗೆ 1000 ಡ್ರೈವಿಂಗ್ ಲೈಸೆನ್ಸ್ ಕೊಡಿಸುವಲ್ಲಿ ಸಹಕರಿಸಿದ ಜಗದೀಶ್ ಭಟ್ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ಹಾಗೂ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳನ್ನು ಅಭಿನಂದಿಸಲಾಯಿತು.
    ವಿಕಲಚೇತನರಿಗೆ ವೀಲ್ ಚೇರ್ ವಿತರಣೆ ಮತ್ತು ವಿವಾಹ ಪ್ರೋತ್ಸಾಹಧನ  ವಿತರಿಸಲಾಯಿತು, ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು. ವಿಕಲಚೇತನರು ತಯಾರಿಸಿದ ಕರಕುಶಲ ವಸ್ತುಗಳ ಪ್ರದರ್ಶನ ಆಯೋಜಿಸಲಾಗಿದ್ದಿತು.
    ಕಾರ್ಯಕ್ರಮದಲ್ಲಿ ಉಡುಪಿ ತಾ.ಪಂ.ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಉಡುಪಿ ರೆಡ್‍ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ವಿಕಲಚೇತನರ ಪೋಷಕರ ಒಕ್ಕೂಟದ ಅಧ್ಯಕ್ಷ ಜೈ ವಿಠಲ್, ವಿಕಲಚೇತನರ ಒಕ್ಕೂಟದ ಅಧ್ಯಕ್ಷ ವಿಲ್ಫೆಡ್ ಗೋಮ್ಸ್, ತಾಲೂಕು ವಿಕಲಚೇತನರ ಒಕ್ಕೂಟದ ಮಂಜುನಾಥ ಹೆಬ್ಬಾರ್ ಉಪಸ್ಥಿತರಿದ್ದರು.
     ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ಪ್ರಾಸ್ತಾವಿಕವಾಗಿ ಮಾತನಾಡಿದರು, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಅಧಿಕಾರಿ ನಿರಂಜನಭಟ್ ಸ್ವಾಗತಿಸಿ, ನಿರೂಪಿಸಿದರು, ವಿಜೇತ ವಿಶೇಷ ಮಕ್ಕಳ ಶಾಲೆಯ ಕಾಂತಿ ಹರೀಶ್ ವಂದಿಸಿದರು. 
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಡಿ.10 ರಂದು ಕೌನ್ಸಲಿಂಗ್
    ಉಡುಪಿ, ಡಿಸೆಂಬರ್ 3 (ಕರ್ನಾಟಕ ವಾರ್ತೆ) : ಸರ್ಕಾರಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ 2017-18 ನೇ ಸಾಲಿಗೆ ಸಂಬಂಧಿಸಿದಂತೆ, ಸ್ಪರ್ಧಾತ್ಮಕ ಪರೀಕ್ಷೆ ಬರೆದು ಅರ್ಹರಾದ ಅಭ್ಯರ್ಥಿಗಳ 1:1 ಅನುಪಾತದ ಅಂತಿಮ ಪಟ್ಟಿಯನ್ನು ಇಲಾಖಾ ವೆಬ್‍ಸೈಟ್‍ನಲ್ಲಿ ವಿಶೇಷಾಧಿಕಾರಿ, ಕೇಂದ್ರೀಕೃತ ದಾಖಲಾತಿ ಘಟಕ, ಬೆಂಗಳೂರು ಇವರು ಪ್ರಕಟಿಸಿರುತ್ತಾರೆ.
    ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ಡಿಸೆಂಬರ್ 10 ರ ಬೆಳಗ್ಗೆ 10.30 ರಿಂದ 1 ಗಂಟೆಯವರೆಗೆ ಸಮಾಜ ಪಾಠಗಳು, ವಿಜ್ಞಾನ ಮತ್ತು ಗಣಿತ ವಿಷಯದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹಾಗೂ ಮಧ್ಯಾಹ್ನ 2.30 ರಿಂದ 5 ಗಂಟೆಯವರೆಗೆ ಆಂಗ್ಲ ವಿಷಯದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಉಪ ನಿರ್ದೇಶಕರ ಕಚೇರಿ, ಸಾ.ಶಿ.ಇಲಾಖೆ, ರಜತಾದ್ರಿ, ಮಣಿಪಾಲ , ಉಡುಪಿ ಜಿಲ್ಲೆ ಇಲ್ಲಿ 1:1 ಪಟ್ಟಿಯಂತೆ ಅಭ್ಯರ್ಥಿಗಳ ಸ್ಥಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
    ಸಂಬಂಧಿಸಿದ ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ದ್ವಿ ಪ್ರತಿಯಲ್ಲಿ ಗಜೆಟಡ್ ಅಧಿಕಾರಿಯವರ ಧೃಡೀಕೃತ ಪ್ರತಿ, ತಮ್ಮ ಇತ್ತೀಚಿನ 2 ಭಾವಚಿತ್ರಗಳು, ಸ್ವವಿಳಾಸ ಮಾಹಿತಿ, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಯ ಮಾಹಿತಿಯೊಂದಿಗೆ ನಿಗಧಿಪಡಿಸಿದ ದಿನದಂದು ಕೌನ್ಸಲಿಂಗ್‍ಗೆ ಹಾಜರಾಗಬೇಕು.
    ಹೆಚ್ಚಿನ ಮಾಹಿತಿಗೆ ಕಚೇರಿಯ ದೂರವಾಣಿ ಸಂಖ್ಯೆ: 0820-2574878 ಅನ್ನು ಸಂಪರ್ಕಿಸುವಂತೆ ಉಪ ನಿರ್ದೇಶಕರು(ಆಡಳಿತ), ಸಾರ್ವಜನಿಕ ಶಿಕ್ಷಣ ಇಲಾಖೆ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.

ದಿನಾಂಕ ವಿಸ್ತರಣೆ
    ಉಡುಪಿ, ಡಿಸೆಂಬರ್ 3 (ಕರ್ನಾಟಕ ವಾರ್ತೆ) : 2018-19 ನೇ ಸಾಲಿಗೆ ಪೂರ್ಣಾವಧಿ ಪಿ.ಹೆಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3 ಬಿ ಹಾಗೂ ಔಣheಡಿ ಔಃಅ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ, ಮಾಸಿಕ 10000 ರೂ.ನಂತೆ ವ್ಯಾಸಾಂಗ ವೇತನ / ಫೆಲೋಶಿಪ್ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನವನ್ನು ಡಿಸೆಂಬರ್ 10 ರ ವರೆಗೆ ವಿಸ್ತರಿಸಲಾಗಿದೆ.
     ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಅನ್ನು ಹಾಗೂ ದೂರವಾಣಿ ಸಂಖ್ಯೆ: 0820-2574881 / 2573881 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.

ನಿರುದ್ಯೋಗಿಗಳಿಗೆ ಉದ್ಯೋಗ/ ಸ್ವಯಂ ಉದ್ಯೋಗ: ಅರ್ಜಿ ಆಹ್ವಾನ
    ಉಡುಪಿ, ಡಿಸೆಂಬರ್ 3 (ಕರ್ನಾಟಕ ವಾರ್ತೆ) :ಕ.ರಾ.ರ.ಸಾ.ಸಂಸ್ಥೆ, ಪ್ರಾದೇಶಿಕ ತರಬೇತಿ ಕೇಂದ್ರ, ಹಾಸನ ಇಲ್ಲಿ ಸರ್ಕಾರದ ಕೌಶಲ್ಯ ಕರ್ನಾಟಕ ಯೋಜನೆಯಡಿ ನಿರುದ್ಯೋಗಿ ಯುವಕ- ಯುವತಿಯರಿಗೆ ಉಚಿತವಾಗಿ ಭಾರಿ ವಾಹನ, ಲಘು ವಾಹನ ಹಾಗೂ ತಾಂತ್ರಿಕ ವೃತ್ತಿಗಳಲ್ಲಿ ( ಆಟೋ ವೆಲ್ಡರ್, ಆಟೋ ಮೆಕ್ಯಾನಿಕ್, ಆಟೋ ಎಲೆಕ್ಟ್ರೀಷಿಯನ್, ಟೈರ್ ಫಿಟ್ಟರ್) ತರಬೇತಿ ನೀಡಿ ನಿರುದ್ಯೋಗಿಗಳಲ್ಲಿ ಉದ್ಯಮಶೀಲತೆ ಹೆಚ್ಚಿಸುವ ಮೂಲಕ ಸರ್ಕಾರಿ/ ಅರೆ ಸರ್ಕಾರಿ/ ಖಾಸಗಿ ಸಂಸ್ಥೆಗಳಲ್ಲಿ, ಸ್ವಯಂ ಉದ್ಯೋಗವನ್ನು ಹೊಂದುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ.
     ಅಭ್ಯರ್ಥಿಗಳು ಅರ್ಜಿಗಳನ್ನು ಆನ್‍ಲೈನ್ ತಿತಿತಿ.ಞಚಿushಚಿಟಞಚಿಡಿ.ಛಿom ನಲ್ಲಿ ಅಥವಾ ಕಚೇರಿ ಅವಧಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
     ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು. ಕ.ರಾ.ರ.ಸಾ.ಸಂಸ್ಥೆ, ಪ್ರಾದೇಶಿಕ ತರಬೇತಿ ಕೇಂದ್ರ, ಹಾಸನ ದೂರವಾಣಿ ಸಂಖ್ಯೆ: 08172-240055/ 9972293886 / 9481593937 /8123237269 ಅನ್ನು ಸಂಪರ್ಕಿಸುವಂತೆ ಪ್ರಾದೇಶಿಕ ತರಬೇತಿ ಕೇಂದ್ರದ ಪ್ರಕಟಣೆ ತಿಳಿಸಿದೆ.


ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ
ವಾರ್ತಾಭವನ, ನಾಯರ್‍ಕೆರೆ, ಬ್ರಹ್ಮಗಿರಿ, ಉಡುಪಿ- 576101 ದೂ.ಸಂ. 2524807                                         
                                                         ದಿನಾಂಕ: 04-12-2018
ಉಡುಪಿ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆ: ಅರ್ಜಿ ಆಹ್ವಾನ
   ಉಡುಪಿ, ಡಿಸೆಂಬರ್ 4 (ಕರ್ನಾಟಕ ವಾರ್ತೆ) :  ಉಡುಪಿ ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ತುಂಬಲು ಸರಕಾರವು ಮಂಜೂರಾತಿ ನೀಡಿದ್ದು, ಜಿಲ್ಲಾ ಸರಕಾರಿ ವಕೀಲರಿಗಾಗಿ ಸೇವೆ ಸಲ್ಲಿಸಲು ಆಸಕ್ತಿ ಇರುವ ಹತ್ತು ವರ್ಷಗಳ ಕಾಲ ವಕೀಲರ ವೃತ್ತಿ ಪೂರೈಸಿದ ಅರ್ಹ ವಕೀಲರಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
    ವಕೀಲ ವೃತ್ತಿಯಲ್ಲಿ ಕನಿಷ್ಟ 10 ವರ್ಷಗಳ ಅನುಭವವಿರಬೇಕು. ಅರ್ಜಿಗಳು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಿಂದ ಶಿಫಾರಸುಗೊಂಡ ನಂತರವೇ ಸರ್ಕಾರಕ್ಕೆ ಸಲ್ಲಿಕೆಯಾಗಲು ಅರ್ಹತೆ ಪಡೆಯುತ್ತವೆ. ಅರ್ಜಿಯನ್ನು ದ್ವಿ ಪ್ರತಿಯಲ್ಲಿ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ವೀಕರಿಸಲು ಡಿಸೆಂಬರ್ 12 ಕೊನೆಯ ದಿನ. ಅರ್ಜಿ ನಮೂನೆಗಳನ್ನು ಜಿಲ್ಲಾಧಿಕಾರಿ ಕಚೇರಿಯ ಆಡಳಿತ ಶಾಖೆಯಲ್ಲಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾಸಭೆ.

    ಉಡುಪಿ, ಡಿಸೆಂಬರ್ 4 (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ, ಇದರ 2017 ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿಸೆಂಬರ್ 9 ರಂದು ಬೆಳಿಗ್ಗೆ 10.00 ಘಂಟೆಗೆ ಹೋಟೆಲ್ ಶಾರದಾ ಇಂಟರ್‍ನ್ಯಾಷನಲ್ ಉಡುಪಿ ಇಲ್ಲಿ ಜರಗಲಿರುವುದು. 

  ಮಹಾಸಭೆಯಲ್ಲಿ ಮುಖ್ಯ ಅಥಿತಿಗಳಾಗಿ ಜಿಲ್ಲಾಧಿಕಾರಿಯವರು ಹಾಗೂ ಜಿಲ್ಲೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿರುವರು. ಮಹಾಸಭೆಯಲ್ಲಿ 2017 ನೇ ವರ್ಷದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆ ಗೈದ ಸರ್ಕಾರಿ ನೌಕರರು ಹಾಗೂ ನೌಕರರ ಮಕ್ಕಳನ್ನು, 2017 ನೇ ಸಾಲಿನ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆದ ನೌಕರರನ್ನು, 2017-18 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ  ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಯಲ್ಲಿ ಶೇಕಡಾ 85 ಹಾಗೂ ಅದಕ್ಕಿಂತ ಹೆಚ್ಚಿನ ಅಂಕ ಪಡೆದ ನೌಕರರ ಮಕ್ಕಳನ್ನು ಹಾಗೂ ನವಂಬರ್ 2017 ರಿಂದ ನವಂಬರ್ 2018 ರವರೆಗೆ ನಿವೃತ್ತರಾದ ಸರ್ಕಾರಿ ನೌಕರರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
   ಬೆಳಗ್ಗೆ 10 ಕ್ಕೆ ಜ್ಞಾನಯಜ್ಞ ಲೈಫ್ ರಿಸರ್ಚ್ ಫೌಂಡೇಶನ್ ಉಡುಪಿ ಇವರಿಂದ “ಜೀವನ-ಶಿಕ್ಷಣ ಪರಿಚಯ” ಈ ಬಗ್ಗೆ ಮಾಹಿತಿ ಕಾರ್ಯಗಾರ ಏರ್ಪಡಿಸಲಾಗಿದೆ. ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷರಾದ ಸುಬ್ರಮಣ್ಯ ಶೇರಿಗಾರ್ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Welcome to Thonse Naturecure Hospital
View More

Veez Konkani Illustrated Weekly e-Magazine # 74Veez Konkani Illustrated Weekly e-Magazine # 74
Charitable Foundation welcomes likeminded personnel for permanent directors post in MangaloreCharitable Foundation welcomes likeminded personnel for permanent directors post in Mangalore
Announcement from St Anne’s Church Thottam, UdupiAnnouncement from St Anne’s Church Thottam, Udupi
Kemmannu Church - Weekly Announcements.Kemmannu Church - Weekly Announcements.
Booking Open: Nayaab Residency, Court Back Road, UdupiBooking Open: Nayaab Residency, Court Back Road, Udupi
Manasa Vani - Manasa Pamboor News Letter - Vol 1 - Issue 1Manasa Vani - Manasa Pamboor News Letter - Vol 1 - Issue 1
PRIME LOCATION PROPERTY FOR SALE IN KEMMANNUPRIME LOCATION PROPERTY FOR SALE IN KEMMANNU
Admissions Open @ Milagres College, KallianpurAdmissions Open @ Milagres College, Kallianpur
Milarchi Lara - Easter Issue of Mlagres Parish Bulletin.Milarchi Lara - Easter Issue of Mlagres Parish Bulletin.
Appeal from Gudiam Shri Bhadrakali Temple, Kemmannu - Invitation Cards Released.Appeal from Gudiam Shri Bhadrakali Temple, Kemmannu - Invitation Cards Released.
Shops and Flats for sale at Hampankatte, Kemmannu.Shops and Flats for sale at Hampankatte, Kemmannu.
Focus Studio, Near Hotel Kidiyoor, UdupiFocus Studio, Near Hotel Kidiyoor, Udupi
Milagres Tours and Travels upcoming Tours.Milagres Tours and Travels upcoming Tours.
Canara Beach Restaurant, Hoode/Bengre, Udupi.Canara Beach Restaurant, Hoode/Bengre, Udupi.
Delite Catering, SanthekatteDelite Catering, Santhekatte
Milarchi Laram - Issue Jan 2019Milarchi Laram - Issue Jan 2019
Canara Beach Restaurant Inaugurated at Bengre, Kemmannu.Canara Beach Restaurant Inaugurated at Bengre, Kemmannu.
Udupi: Congratulations to Raising smiles who won the first place in RED DROP AD- shoot competition..Udupi: Congratulations to Raising smiles who won the first place in RED DROP AD- shoot competition..
Maria TravelsMaria Travels
Welcome to Thonse Naturecure HospitalWelcome to Thonse Naturecure Hospital
An appeal to Kemmannu Parishioners, Friends and Well Wishers:

[Comments]

An appeal to Kemmannu Parishioners, Friends and Well Wishers:<P> <Center>[Comments]</P> </Center>
Read online Uzvaad:<font color=red> Read online Uzvaad</font color=red>:
Read Online RaknnoRead Online Raknno
Kemmannu Platinum Jubilee Souvenir – Amruth KaanikKemmannu Platinum Jubilee Souvenir – Amruth Kaanik
Udupi TodayUdupi Today
St. Alphonsa of India