Brief Udupi news with pictures
Kemmannu News Network, 12-12-2018 22:06:36
ದಿನಾಂಕ: 11-12-2018 - ಉಡುಪಿಯಲ್ಲಿ ಸ್ಟಾರ್ಟ್ ಅಪ್ ಕೇಂದ್ರ ಪ್ರಾರಂಭ- ಜಿಲ್ಲಾಧಿಕಾರಿ
ಉಡುಪಿ, ಡಿಸೆಂಬರ್ 11 (ಕರ್ನಾಟಕ ವಾರ್ತೆ) :ಜಿಲ್ಲೆಯಲ್ಲಿ ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಅನುಕೂಲವಾಗುವಂತೆ ಎಲ್ಲಾ ರೀತಿಯ ಮಾಹಿತಿ ಹಾಗೂ ಅಗತ್ಯ ಮಾರ್ಗದರ್ಶನ, ನೆರವು ನೀಡುವಂತಹ ಸ್ಟಾರ್ಟ್ ಅಪ್ ಕೇಂದ್ರವನ್ನು ಕೈಗಾರಿಕಾ ಇಲಾಖೆ ಸಹಯೋಗದಲ್ಲಿ ಒಂದು ತಿಂಗಳ ಒಳಗೆ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
ಅವರು ಮಂಗಳವಾರ, ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಉಡುಪಿ ಇವರ ಜಂಟಿ ಆಶ್ರಯದಲ್ಲಿ, ಕೈಗಾರಿಕಾ ಹಾಗೂ ಸೇವಾ ವಲಯಗಳ ಅಭಿವೃದ್ದಿಗಾಗಿ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಿಂದ ದೊರೆಯುವ ಸಾಲ ಸೌಲಭ್ಯಗಳ ಕುರಿತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಅನೇಕ ಪ್ರತಿಭಾವಂತ, ಯುವ ಉತ್ಸಾಹಿ, ಕೌಶಲ್ಯ ಹೊಂದಿದ ಯುವಕರಿದ್ದು, ಅವರು ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ, ಕಸವನ್ನು ಸಂಪನ್ಮೂಲವಾಗಿ ಪರಿವರ್ತಿಸುವುದು ಸೇರಿದಂತೆ ಹಲವು ಅತ್ಯುತ್ತಮ ಯೋಜನೆಗಳೊಂದಿಗೆ ಉದ್ಯಮ ಪ್ರಾರಂಭಿಸುವ ಆಸಕ್ತಿ ಹೊಂದಿದ್ದು, ಅವರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಹಣಕಾಸು ಸಂಸ್ಥೆಗಳಿಂದ ಕಡಿಮೆ ಬಡ್ಡಿ ದರದಲ್ಲಿ ಅಗತ್ಯ ಆರ್ಥಿಕ ನೆರವು ಪಡೆಯುವ, ವಿವಿಧ ಇಲಾಖೆಗಳಿಂದ ಅನುಮತಿ ಪಡೆಯುವ ಬಗ್ಗೆ ಮಾಹಿತಿ ಅಗತ್ಯ ಇಲ್ಲ, ಇಂತಹ ಯುವಕರಿಗೆ ನೆರವು ನೀಡುವ ಉದ್ದೇಶದಿಂದ ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಮಣಿಪಾಲ ಕೈಗಾರಿಕಾ ಕೇಂದ್ರದಲ್ಲಿ ಸ್ಟಾರ್ಟ್ ಅಫ್ ಕೇಂದ್ರ ಒಂದು ತಿಂಗಳ ಒಳಗಾಗಿ ತೆರೆಯಲು ಯೋಜನೆ ರೂಪಿಸಲಾಗಿದೆ. ಈ ಕೇಂದ್ರದಲ್ಲಿ ಹೊದ ಉದ್ದಿಮೆ ಪ್ರಾರಂಬಿಸಲು ಎಲ್ಲಾ ಅಗತ್ಯ ಮಾರ್ಗದರ್ಶನ ಮತ್ತು ನೆರವು ಪಡೆಯುವ ಕುರಿತಂತೆ ಸಮಗ್ರ ಮಾಹಿತಿ ಒದಗಿಸಲಾಗುವುದು, ಯುವ ಉದ್ದಿಮೆದಾರರು ಇದರ ಪ್ರಯೋಜನ ಪಡೆಯುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಉಡುಪಿಯಲ್ಲಿ ಉದ್ಯೋಗಾಧಾರಿತ ತರಬೇತಿ ನೀಡುವ ಸಂಸ್ಥೆಗಳಿದ್ದು, ಅವುಗಳಲ್ಲಿ ಪಾರಂಪರಿಕವಾದ ಹಿಂದಿನ ತರಬೇತಿಗಳನ್ನೇ ಯುವ ಜನರು ಪಡೆಯುತ್ತಿದ್ದಾರೆ ಇಂತಹ ತರಬೇತಿಯಿಂದ ಈಗಾಗಲೇ ಹಲವು ಮಂದಿ ಉದ್ಯೋಗ ಪ್ರಾರಂಭಿಸಿದ್ದು, ಈ ಉದ್ದಿಮೆಗಳಲ್ಲಿ ಲಾಭದ ಪ್ರಮಾಣ ಕಡಿಮೆ ಇದೆ ಆದ್ದರಿಂದ ಯುವ ಜನತೆ ಹೊಸ ಯೋಜನೆಗಳೊಂದಿಗೆ ಉದ್ಯಮಗಳನ್ನು ಪ್ರಾರಂಭಿಸುವ ಕುರಿತು ತರಬೇತಿ ಪಡೆಯಬೇಕು, ಉಡುಪಿಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಪ್ರವಾಸೋದ್ಯಮದಲ್ಲಿ ಹೋಂ ಸ್ಟೇ, ಟೂರಿಸ್ಟ್ ಗೈಡ್ ಮುಂತಾದ ಉದ್ಯೋಗಗಳಿಂದ ಹೆಚ್ಚಿನ ಆರ್ಥಿಕ ಸಂಪಾದನೆ ಸಾಧ್ಯ, ಜಿಲ್ಲೆಯಲ್ಲಿ ಎಸ್.ಎಲ್.ಆರ್.ಎಂ ಘಟಕಗಳನ್ನು ಗ್ರಾಮ ಪಂಚಾಯತ್ಗಳು ಮಾತ್ರ ಮಾಡುತ್ತಿವೆ, ಇದುವರೆಗೆ ಜಿಲ್ಲೆಯ 45 ಗ್ರಾಮ ಪಂಚಾಯತ್ಗಳು ಎಸ್.ಎಲ್.ಆರ್.ಎಂ ಘಟಕಗಳಿಂದ 11 ಲಕ್ಷಕ್ಕೂ ಹೆಚ್ಚಿನ ಆದಾಯ ಗಳಿಸಿವೆ, ಖಾಸಗಿ ವ್ಯಕ್ತಿಗಳು ಮುಂದೆ ಬಂದರೆ ಅವರಿಗೂ ಸಹ ಘಟಕ ಪ್ರಾರಂಭಿಸಲು ಸೂಕ್ತ ತರಬೇತಿ ಮತ್ತು ಅನುಮತಿ ನೀಡಲಾಗುವುದು, ಒಣ ಕಸ ಸಂಗ್ರಹಣೆಯ ಸಮರ್ಪಕ ವಿಲೇವಾರಿಯಿಂದ ಹೆಚ್ಚಿನ ಲಾಭ ಗಳಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ರಮಾನಂದ ನಾಯಕ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಉಡುಪಿ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಶ್ರೀಕೃಷ್ಣ ರಾವ್ ಕೊಡಂಚ, ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಐ.ಆರ್ ಫರ್ನಾಂಡಿಸ್ ಉಪಸ್ಥಿತರಿದ್ದರು.
ಕೆ.ಎಸ್.ಎಫ್.ಸಿ ಮೈಸೂರು ವೃತ್ತದ ಪ್ರಧಾನ ವ್ಯವಸ್ಥಾಪಕ ಬಿ.ಸಿ.ಶಿವಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕೆ.ಎಸ್.ಎಫ್.ಸಿ ಉಡುಪಿಯ ಸಹಾಯಕ ಪ್ರಧಾನ ವ್ಯವಸ್ಥಾಪಕ ಬಿ.ಎಸ್. ಮೊಯಿದಿನ್ ಸ್ವಾಗತಿಸಿದರು, ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಸೀತಾರಾಮ ಶೆಟ್ಟಿ ನಿರೂಪಿಸಿದರು
ಗ್ರಾಮ ಪಂಚಾಯತ್ ಚುನಾವಣೆ: ವೇಳಾಪಟ್ಟಿ ಪ್ರಕಟ
ಉಡುಪಿ, ಡಿಸೆಂಬರ್ 11 (ಕರ್ನಾಟಕ ವಾರ್ತೆ) : 2019 ರ ಜನವರಿ-ಫೆಬ್ರವರಿ ಮಾಹೆಯಲ್ಲಿ ಅವಧಿ ಮುಕ್ತಾಯವಾಗುವ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಬೈಂದೂರು, ಯಡ್ತೆರೆ ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯಿತಿ ಹಾಗೂ ವಿವಿಧ ಕಾರಣಗಳಿಂದ ಆಕಸ್ಮಿಕ ವಾಗಿ ತೆರವಾಗಿರುವ ಉಡುಪಿ ತಾಲೂಕಿನ ಹಂದಾಡಿ, ಬಾರಕೂರು , ಯಡ್ತಾಡಿ , ಕಡೆಕಾರು, ಕಾರ್ಕಳ ತಾಲೂಕಿನ ಬೈಲೂರು , ನಿಟ್ಟೆ, ಕುಂದಾಪುರ ತಾಲೂಕಿನ ಗಂಗೊಳ್ಳಿ , ಉಳ್ಳೂರು ಮತ್ತು ಬೈಂದೂರು ತಾಲೂಕಿನ ಕೆರ್ಗಾಲು ಸದಸ್ಯ ಸ್ಥಾನಗಳನ್ನು ಚುನಾವಣೆಯ ಮೂಲಕ ಭರ್ತಿ ಮಾಡಲು ರಾಜ್ಯ ಚುನಾವಣಾ ಆಯೋಗವು, ಚುನಾವಣಾ ವೇಳಾ ಪಟ್ಟಿಯನ್ನು ಘೋಷಿಸಿದೆ.
ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನ ಡಿಸೆಂಬರ್ 17, ನಾಮಪತ್ರ ಸಲ್ಲಿಸಲು ಕೊನೆಯ ದಿನ ಡಿಸೆಂಬರ್ 20, ನಾಮಪತ್ರಗಳನ್ನು ಪರಿಶೀಲಿಸುವ ದಿನ ಡಿಸೆಂಬರ್ 21, ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ ಡಿಸೆಂಬರ್ 24, ಮತದಾನ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ದಿನ ಜನವರಿ 2, ಮತ ಎಣಿಕೆ ದಿನ ಜನವರಿ 4.
ಗೃಹ ರಕ್ಷಕ ದಳ ದಿನಾಚರಣೆ
ಉಡುಪಿ, ಡಿಸೆಂಬರ್ 11 (ಕರ್ನಾಟಕ ವಾರ್ತೆ) :ಜಿಲ್ಲಾ ಗೃಹ ರಕ್ಷಕ ದಳ ಕಚೇರಿಯ ಆವರಣದಲ್ಲಿ ಮಂಗಳವಾರದಂದು ಗೃಹ ರಕ್ಷಕ ದಳ ದಿನಾಚರಣೆಯನ್ನು ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತ ಕುಮಾರ್ ಭಾಗವಹಿಸಿ, ಮಾತನಾಡಿ ಗೃಹರಕ್ಷಕರು ಅಗ್ನಿಶಮನ ಮತ್ತು ಕಾನೂನು ಸುವ್ಯವಸ್ಥೆ ಕರ್ತವ್ಯ ಅಲ್ಲದೇ ಇತರ ಯಾವುದೇ ಇಲಾಖೆಗೆ ನಿಯೋಜಿಸಿದರೂ ಆ ಇಲಾಖೆಯ ಸಂಬಂಧಪಟ್ಟ ಕೆಲಸವನ್ನು ಮಾಡುವಲ್ಲಿ ಸಮರ್ಥರಾಗಿರುತ್ತಾರೆ. ಸಮಾಜದಲ್ಲಿ ಇವರ ಸೇವೆಯು ಶ್ಲಾಘನೀಯ ಎಂಬುದಾಗಿ ಪ್ರಶಂಸೆ ವ್ಯಕ್ತಪಡಿಸಿದರು.
ಜಿಲ್ಲಾ ಗೃಹ ರಕ್ಷಕ ದಳ ಕಮಾಂಡೆಂಟ್ ಡಾ:ಕೆ. ಪ್ರಶಾಂತ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಗೃಹರಕ್ಷಕದಳದ ವಾóರ್ಷಿಕ ವರದಿ ಮಂಡಿಸಿದರು.
ಕಾರ್ಯಕ್ರಮದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಡೆಪ್ಯೂಟಿ ಕಮಾಂಡೆಂಟ್ ರಮೇಶ್, ಪಡುಬಿದ್ರಿ ಘಟಕಾಧಿಕಾರಿ ನವೀನ್ ಕುಮಾರ್, ಕಾಪು ಘಟಕಾಧಿಕಾರಿ ಲಕ್ಷ್ಮೀನಾರಾಯಣ ರಾವ್, ಬ್ರಹ್ಮಾವರ ಘಟಕದ ಪ್ಲಟೂನ್ ಕಮಾಂಡರ್ ಸ್ಟೀವನ್ ಪ್ರಕಾಶ್ ಇವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಗೃಹರಕ್ಷಕದಳ ಕಚೇರಿಯ ಅಧೀಕ್ಷಕಿ ಕವಿತಾ ಕೆ.ಸಿ ಉಪಸ್ಥಿತರಿದ್ದರು. ಕಾರ್ಕಳ ಘಟಕಾಧಿಕಾರಿ ಪ್ರಭಾಕರ್ ಸುವರ್ಣ ಪ್ರತಿಜ್ಞಾ ವಿದಿ ಬೋಧಿಸಿದರು. ಸಾಯಿನಾಥ್ ಉದ್ಯಾವರ್ ಕಾರ್ಯಕ್ರಮವನ್ನು ನಿರೂಪಿಸಿದರು.
ರೆಡ್ ಕ್ರಾಸ್ ಸಂಸ್ಥೆ: ವಿಶ್ವ ಮಾನವ ಹಕ್ಕುಗಳ ದಿನಾಚರಣೆ
ಉಡುಪಿ, ಡಿಸೆಂಬರ್ 11 (ಕರ್ನಾಟಕ ವಾರ್ತೆ) : ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ನವೆಂಬರ್ 10 ರಂದು ರೆಡ್ ಕ್ರಾಸ್ ಭವನದ ಹೆನ್ರಿ ಡ್ಯುನಾಂಟ್ ಹಾಲ್, ಅಜ್ಜರಕಾಡು, ಉಡುಪಿಯಲ್ಲಿ ಆಚರಿಸಲಾಯಿತು. ಉಡುಪಿ ಜಿಲ್ಲಾ ಶಾಖೆಯ ಉಪಸಭಾಪತಿ ಡಾ.ಅಶೋಕ್ ಕುಮಾರ್ ವೈ.ಜಿ. ಅತಿಥಿ ಗಣ್ಯರನ್ನು ಸ್ವಾಗತಿಸಿದರು.
ಕಾರ್ಯಕ್ರಮವನ್ನು ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯದ ಪ್ರಾಂಶುಪಾಲ ಪ್ರೋ. ಪ್ರಕಾಶ್ ಕಣವಿಯವರು ಉದ್ಘಾಟಿಸಿ, ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಗೂ ಹುಟ್ಟಿನಿಂದಲೇ ಮಾನವ ಹಕ್ಕುಗಳು ದೊರೆಯುತ್ತವೆ. ಮಾನವ ಹಕ್ಕು ರಕ್ಷಣೆ ಸರಕಾರದ ಮತ್ತು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. 1 ಮತ್ತು 2 ನೇ ಮಹಾಯುದ್ದದಲ್ಲಿ ವ್ಯಾಪಕ ಮಾನವ ಹಕ್ಕುಗಳ ಉಲ್ಲಂಘನೆ ನಡೆದಿದ್ದು, 1948 ರ ಡಿಸೆಂಬರ್ 10 ರಂದು ವಿಶ್ವ ಸಂಸ್ಥೆ ಮಾನವ ಹಕ್ಕುಗಳ ಕರೆ ನೀಡಿದೆ. ಆದರೆ ಭಾರತದಲ್ಲಿ ತುರ್ತು ಪರಿಸ್ಥಿತಿಯ ವೇಳೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಾನವ ಹಕ್ಕು ಉಲ್ಲಂಘನೆ ನಡೆಯಿತು. ಮಾನವ ಹಕ್ಕುಗಳನ್ನು ಗೌರವಿಸುವ ಉದ್ದೇಶದಿಂದಲೇ ಯಾವುದೇ ಅಪರಾಧಿಯನ್ನು ಸಹ ಸೂಕ್ತ ಕಾಲಾವಕಾಶ ನೀಡಿ ವಿಚಾರಣೆ ಮಾಡಿದ ನಂತರವೇ ಶಿಕ್ಷೆಗೆ ಒಳಪಡಿಸಲಾಗುತ್ತದೆ. ಅಲ್ಲದೇ ಪರಿಸರ ನಾಶವು ಸಹ ಮಾನವ ಹಕ್ಕಿನ ಉಲ್ಲಂಘನೆಗಳಲ್ಲಿ ಒಂದಾಗಿದೆ. ಅವುಗಳಲ್ಲಿ ಪ್ರಾಕೃತಿಕ ಸಂಪನ್ಮೂಲಗಳನ್ನು ನಾಶಪಡಿಸುವಿಕೆ, ವಾತಾವರಣವನ್ನು ಕಲುಷಿತಗೊಳಿಸುವುದು, ಭೂ ಸಂತ್ರಸ್ಥರಿಗೆ ಸೂಕ್ತ ಪುನರ್ವಸತಿ ಸೌಲಭ್ಯ ಒದಗಿಸದೇ ಇರುವುದು ಎಂದು ಹೇಳಿದರು.
ರೆಡ್ ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಶಾಖೆ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಮಾತನಾಡಿ, ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಗೌರವಾನ್ವಿತವಾಗಿ ಆತ್ಮ ವಿಶ್ವಾಸದಿಂದ ಜೀವನ ನಡೆಸಲು ಹಕ್ಕು ಉಳ್ಳವನಾಗಿದ್ದು, ಇದಕ್ಕೆ ಚ್ಯುತಿ ಬಂದಲ್ಲಿ ಮಾನವ ಹಕ್ಕಿನ ಉಲ್ಲಂಘನೆ ಆಗುತ್ತದೆ. ಆದ್ದರಿಂದ ಮಾನವ ಹಕ್ಕುಗಳ ಕುರಿತು ಪ್ರತಿಯೊಬ್ಬರೂ ಅರಿತು, ಅವುಗಳನ್ನು ಗೌರವಿಸಿ, ರಕ್ಷಿಸುವ ಕಾರ್ಯವನ್ನು ವಿದ್ಯಾರ್ಥಿ ದೆಸೆಯಿಂದಲೇ ಮಾಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಭಾಫತಿ ಡಾ.ಉಮೇಶ್ ಪ್ರಭು ವಹಿಸಿದ್ದರು. ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಮತ್ತು ಆಡಳಿತ ಮಂಡಳಿ ಸದಸ್ಯರುಗಳು ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಘಟಕದ ಗೌರವ ಖಜಾಂಜಿ ಚಂದ್ರಶೇಖರ್ ಧನ್ಯವಾದಗೈದರು. ಯುವ ರೆಡ್ ಕ್ರಾಸ್ ಘಟಕದ ಸಂಯೋಜಕ ಜಯರಾಮ್ ಆಚಾರ್ಯ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿದರು.
ಉಡುಪಿ ಧನ್ವಂತರಿ ಕಾಲೇಜು ಆಫ್ ನರ್ಸಿಂಗ್ ಮತ್ತು ವಿದ್ಯಾರತ್ನ ಕಾಲೇಜು ಆಫ್ ನರ್ಸಿಂಗ್ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಿಂದ ಅತ್ಯಂತ ಹಿರಿಯರಾದ 6 ವರ್ಷಗಳಿಂದ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಗೌರವ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಹಾಗೂ ಪ್ರಸ್ತುತ ಆಡಳಿತ ಮಂಡಳಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿರುವ ರಾಮಚಂದ್ರ ದೇವಾಡಿಗರನ್ನು ಸನ್ಮಾನಿಸಲಾಯಿತು.
ಕ್ರೀಡಾ ಪ್ರತಿಭೆ ಅನಾವರಣಕ್ಕೆ ಕ್ರೀಡೋತ್ಸವಗಳು ಪೂರಕ – ಅಬ್ದುಲ್ ಜಲೀಲ್ ಸಾಹೇಬ್
ಉದ್ಯಾವರ: ಶಾಲೆಗಳಲ್ಲಿ ವಾರ್ಷಿಕ ಕ್ರೀಡಾಕೂಟಗಳು ಜರಗುವುದು ಆ ಶಾಲೆಯ ಕ್ರೀಡಾ ಪ್ರತಿಭೆಗಳು ಅನಾವರಣಕ್ಕೆ ಒಂದು ಸೂಕ್ತ ವೇದಿಕೆಯಾಗಿದೆ. ಈ ಕ್ರೀಡಾ ಕೂಟವನ್ನು ವಿದ್ಯಾರ್ಥಿಗಳು ಪರಿಣಾಮಕಾರಿಯಾಗಿ ಉಪಯೋಗಿಸಿಕೊಂಡರೆ ಮುಂದೊಂದು ದಿನ ಅವರು ಕ್ರೀಡಾ ಸಾಧಕರಾಗಬಹುದು. ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಕೂಡಾ ಈ ರೀತಿಯ ಅದ್ಧೂರಿ ಕ್ರೀಡಾ ಕೂಟಗಳು ಆಗ್ತಾ ಇರುವುದು ಅಪರೂಪ. ಈ ಶಾಲೆಯಲ್ಲಿ ಇಷ್ಟು ಶಿಸ್ತುಬದ್ದವಾಗಿ ಕ್ರೀಡಾ ಕೂಟ ಜರಗುತ್ತಿರುವುದು ಈ ಶಾಲೆಯ ಬೆಳವಣಿಗೆಯಲ್ಲಿ ಗಣನೀಯ ಪಾತ್ರವನ್ನು ವಹಿಸಿದೆ ಎಂದು ಹಲೀಮಾ ಸಾಬ್ಜೂ ಆಡಿಟೋರಿಯಂ ಟ್ರಸ್ಟಿನ ಆಡಳಿತ ವಿಶ್ವಸ್ಥರಾದ ಶ್ರೀ ಹಾಜಿ ಅಬ್ದುಲ್ ಜಲೀಲ್ ಸಾಹೇಬರು ಸರಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಜರಗಿದ ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆಯಿತ್ತು ನುಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಸಂಚಾಲಕರಾದ ಶ್ರೀ ಉದ್ಯಾವರ ನಾಗೇಶ್ ಕುಮಾರ್ರವರು ಮಾತನಾಡುತ್ತಾ ಪಾಠ ಪ್ರವಚನಗಳಷ್ಟೇ ಮಹತ್ವವನ್ನು ಪಾಠ್ಯೇತರ ಚಟುವಟಿಕೆಗಳು ಅದರಲ್ಲೂ ಕ್ರೀಡಾ ಚಟುವಟಿಕೆಗಳು ಪಡೆದಿರುತ್ತದೆ. ಈ ನಿಟ್ಟಿನಲ್ಲಿ ಶಾಲೆ ಈ ಕ್ರೀಡೋತ್ಸವವನ್ನು ಶಿಸ್ತು ಬದ್ಧವಾಗಿ ಆಯೋಜಿಸುತ್ತಿದೆ. ಇನ್ನು ಮುಂದಿನ ದಿವಸಗಳಲ್ಲಿಯೂ ಕೂಡಾ ಕ್ರೀಡೋತ್ಸವವನ್ನು ಜರಗಿಸುವರೇ ತಮ್ಮೆಲ್ಲರ ಸಹಕಾರವನ್ನು ಬಯಸುತ್ತೇನೆ ಎಂದರು. ಸಮಾರಂಭದ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಆಧ್ಯಕ್ಷರಾದ ಶ್ರೀಮತಿ ಸುಗಂಧಿ ಶೇಖರ್ ಉಪಾಧ್ಯಕ್ಷರಾದ ರಿಯಾಝ್ ಪಳ್ಳಿ, ಸರಕಾರಿ ಪದವಿ ಪೂರ್ವ ಕಾಲೇಜಿ ಹೈಸ್ಕೂಲ್ ವಿಭಾಗದ ಸಹ ಶಿಕ್ಷಕರಾದ ಸುಭಾಸ್ ಚೌಹಾಣ್, ದೈಹಿಕ ಶಿಕ್ಷಣಾಧಿಕಾರಿಗಳಾದ ರವೀಂದ್ರ ನಾಯ್ಕ್ ಆಗಮಿಸಿದ್ದರು. ವೇದಿಕೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಯು.ಆರ್. ಚಂದ್ರ ಶೇಖರ್,ಅಭಿವೃದ್ಧಿ ಸಮಿಯ ಅಧ್ಯಕ್ಷರಾದ ಗಣೇಶ್ ಕುಮಾರ್ ಉಪಸ್ಥಿತರಿದ್ದು. ಪ್ರಾರಂಭದಲ್ಲಿ ಮುಖ್ಯ ಶಿಕ್ಷಕ ಶ್ರೀ ಗಣಪತಿ ಕಾರಂತ್ ಸ್ವಾಗತಿಸಿದರು. ಗೌರವ ಶಿಕ್ಷಕ ಯು. ವಿಕ್ರಮ ಆಚಾರ್ಯ ವಂದಿಸಿದರು. ಆಡಳಿತ ಸಮಿತಿಯ ಸದಸ್ಯರಾದ ಶ್ರೀ ಕೃಷ್ಣಕುಮಾರ್ ರಾವ್ ಕಾರ್ಯಕ್ರಮ ನಿರ್ವಹಿಸಿದರು. ಈ ಕ್ರೀಡಾ ಕೂಟದಲ್ಲಿ ಹೆತ್ತವರ ಕ್ರೀಡಾಕೂಟವು ಜರಗಿತು.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link