Brief Udupi News with pictures
Kemmannu News Network, 21-12-2018 21:14:12
ಉಡುಪಿಯಲ್ಲಿ ಜೋಕ್ಲೆಗಾದ್ ತುಳು ನಡಕೆ ವಿದ್ಯಾರ್ಥಿ ಸಾಂಸ್ಕ್ಕøತಿಕ ಸ್ಪರ್ಧೆಗೆ ಚಾಲನೆ
ಸರ್ವ ಧರ್ಮೀಯರೂ ಕೂಡಾ ತುಳುಭಾಷೆಯಲ್ಲೇ ವ್ಯವಹರಿಸುತ್ತಿದ್ದಾರೆ- ಡಾ.ವೈ.ಎನ್.ಶೆಟ್ಟಿ
ಉಡುಪಿ: ತುಳುನಾಡಿನಲ್ಲಿ ನೆಲೆಸಿರುವ ಸರ್ವ ಧರ್ಮೀಯರೂ ಕೂಡಾ ತುಳುಭಾಷೆಯಲ್ಲೇ ವ್ಯವಹರಿಸುತ್ತಿರುವುದು ತುಳು ಭಾಷೆಯಲ್ಲಿನ ಆಕರ್ಷಣೆ ಮತ್ತು ನೈಜ ಸತ್ವ ವನ್ನು ಎತ್ತಿತೋರಿಸುತ್ತದೆ. ಮಾತ್ರವಲ್ಲದೆ ತುಳುವರಿಗೂ ಹೆಮ್ಮೆ ಎನಿಸಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ವೈ.ಎನ್.ಶೆಟ್ಟಿ ತಿಳಿಸಿದ್ದಾರೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳುಕೂಟ (ರಿ.) ಉಡುಪಿ ವತಿಯಿಂದ ನಡೆದ ಉಡುಪಿ ತಾಲೂಕು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಸಾಂಸ್ಕ್ಕøತಿಕ ಸ್ಪರ್ಧೆ ಜೋಕ್ಲೆಗಾದ್ ತುಳು ನಡಕೆ ಕಾರ್ಯಕ್ರಮವನ್ನು ಶುಕ್ರವಾರ ಉಡುಪಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ರಂಗಮಂದಿರದಲ್ಲಿ ಉದ್ಘಾಟಿಸಿ ಮಾತನಾಡಿದರು. ತುಳುಕೂಟ (ರಿ.) ಉಡುಪಿ ಗೌರವಾಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆವಹಿಸಿ ಮಾತನಾಡಿ, ಉಡುಪಿ ತುಳುಕೂಟ ವರ್ಷವಿಡೀ ತುಳು ಭಾಷೆ ಸಂಸ್ಕ್ಕøತಿಯನ್ನು ಬೆಳೆಸುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದ್ದು, ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೂ ಸೂಕ್ತ ವೇದಿಕೆಯನ್ನು ಕಲ್ಪಿಸುತ್ತಿದೆ ಎಂದರು.
ಭಾರತೀಯ ವಾಯಸೇನೆಯ ನಿವೃತ್ತ ಅಧಿಕಾರಿ ಜಾರ್ಜ್ ಫೆರ್ನಾಂಡಿಸ್ ,ದ.ಕ ಮತ್ತು ಉಡುಪಿ ಜಿಲ್ಲಾ ಮೀನುಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಎ.ಸುವರ್ಣ, ಮಲಬಾರ್ ಗೋಲ್ಡ್ ಉಡುಪಿ ಶಾಖಾ ಮುಖ್ಯಾಧಿಕಾರಿ ಹಫೀಕ್ ರೆಹಮಾನ್, ನೂತನ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಪ್ರಧಾನ ವ್ಯವಸ್ಥಾಪಕ ಗಣೇಶ್ ಶೇರಿಗಾರ್,ಸಾರ್ವಜನಿಕ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ, ಕಾಲೇಜು ಮುಖ್ಯಸ್ಥರಾದ ರುದ್ರೇಗೌಡ,ವಿಶ್ವನಾಥ ಬಾಯಿರಿ, ತುಳುಕೂಟದ ಕಾರ್ಯದರ್ಶಿ ಗಂಗಾಧರ್ ಕಿದಿಯೂರು, ತುಳು ಸಂಘದ ಮುಖ್ಯಸ್ಥೆ ಶ್ರಾವ್ಯ ಉಪಸ್ಥಿತರಿದ್ದರು. ಉಪನ್ಯಾಸಕರಾದ ವಿ.ಕೆ.ಉದ್ಯಾವರ ಸ್ವಾಗತಿಸಿದರು. ದಯಾನಂದ ಕೆ.ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಗರಾಜ್ ವಂದಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಉಡುಪಿ, ಡಿಸೆಂಬರ್ 21 (ಕರ್ನಾಟಕ ವಾರ್ತೆ) :ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಸಂಸ್ಕøತಿ ಇಲಾಖಾ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಡಿಸೆಂಬರ್ 23, 25, 26 ಮತ್ತು 27 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
23 ರಂದು ಬೆಳಗ್ಗೆ 10.30 ಕ್ಕೆ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ರಜತಾದ್ರಿ, ಮಣಿಪಾಲದಲ್ಲಿ ಅಂತರಾಷ್ಟ್ರೀಯ ರೈತರ ದಿನಾಚರಣೆ ಮತ್ತು ರೈತ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ನಂತರ ಮಂಗಳೂರಿಗೆ ತೆರಳುವರು.
25 ರಂದು ಬೆಳಗ್ಗೆ 10 ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ, ನಂತರ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು.
26 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಚೈಲ್ಡ್ ಪ್ರೋಟೋಕಾಲ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸುವರು. 11.30 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆ, 12.30 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಾರ್ಕೂರು ಅಳುಪೋತ್ಸವ ಮತ್ತು ಜಾನಪದ ಜಾತ್ರೆ ಸಭೆಯಲ್ಲಿ ಭಾಗವಹಿಸುವರು.
27 ರಂದು ಮಧ್ಯಾಹ್ನ 12 ಕ್ಕೆ ಉಡುಪಿ ಕೃಷ್ಣ ಮಠದಲ್ಲಿ ರಾಷ್ಟ್ರಪತಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಂಗಳೂರಿಗೆ ತೆರಳುವರು.
ವಿಕಲಚೇತನರ ಬಸ್ಸು ಪಾಸುಗಳನ್ನು ನವೀಕರಿಸುವ ಬಗ್ಗೆ
ಉಡುಪಿ, ಡಿಸೆಂಬರ್ 21 (ಕರ್ನಾಟಕ ವಾರ್ತೆ) :ಕ.ರಾ.ರ.ಸಾ.ಸಂಸ್ಥೆಯು ವಿಕಲಚೇತನರ ಪ್ರಯಾಣಿಕರಿಗೆ ತಮ್ಮ ವಾಸಸ್ಥಳದಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಪ್ರಯಾಣಿಸಲು ರಿಯಾಯಿತಿ ದರದಲ್ಲಿ ಬಸ್ಸು ಪಾಸುಗಳನ್ನು ವಿತರಿಸಿರುತ್ತದೆ. 2018ನೇ ಸಾಲಿನಲ್ಲಿ ವಿತರಿಸಿರುವ ಸದ್ರಿ ರಿಯಾಯಿತಿ ಬಸ್ಸು ಪಾಸುಗಳ ಅವಧಿಯು ಡಿಸೆಂಬರ್ 31 ಕ್ಕೆ ಮುಕ್ತಾಯಗೊಳ್ಳಲಿದ್ದು, 2019ನೇ ಸಾಲಿಗಾಗಿ ಈ ಬಸ್ಸು ಪಾಸುಗಳನ್ನು ಜನವರಿ 1, 2019 ರಿಂದ ನವೀಕರಿಸಲು ಕ್ರಮಕೈಗೊಳ್ಳಲಾಗುವುದು ಹಾಗೂ ಹೊಸ ಪಾಸುಗಳನ್ನು ನೀಡಲಾಗುವುದು. ವಿಕಲಚೇತನರ ರಿಯಾಯಿತಿ ಬಸ್ಸು ಪಾಸುಗಳನ್ನು ಫಲಾನುಭವಿಗಳು ಬಂದು ನವೀಕರಿಸಿಕೊಳ್ಳಲು ಅನುಕೂಲವಾಗುವಂತೆ ಸಾಕಷ್ಟು ಕಾಲಮಿತಿ ನೀಡುವ ಉದ್ದೇಶದಿಂದ 2018 ನೇ ಸಾಲಿನಲ್ಲಿ ವಿತರಿಸಿದ ಪಾಸುಗಳನ್ನು ಫೆಬ್ರವರಿ 28, 2019 ರ ವರೆಗೆ ಮಾನ್ಯ ಮಾಡಲಾಗುವುದು.
2018 ನೇ ಸಾಲಿನಲ್ಲಿ ವಿತರಿಸಿರುವ ವಿಕಲಚೇತನರ ಬಸ್ಸು ಪಾಸುಗಳನ್ನು ನವೀಕರಿಸಲು ಆಯಾ ತಾಲೂಕುಗಳಿಗೆ ಬಂದು ನವೀಕರಿಸಿಕೊಡಲಾಗುವುದು. ಸ್ಥಳ ಹಾಗೂ ದಿನಾಂಕಗಳನ್ನು ಮುಂದೆ ತಿಳಿಸಲಾಗುವುದು.
ನವೀಕರಣ ಬಗ್ಗೆ: ಹಳೆಯ ಪಾಸು ಕಾರ್ಡನ್ನು ಕಡ್ಡಾಯವಾಗಿ ಹಿಂತಿರುಗಿಸುವುದು, 660 ರೂ. ನಗದು ರೂಪದಲ್ಲಿ ನೀಡುವುದು, 3 ಪಾಸ್ ಪೋರ್ಟ್ ಸೈಜಿನ ಫೋಟೋಗಳು, ಗುರುತಿನ ಚೀಟಿನ ಮಾನ್ಯತಾ ಅವಧಿಯನ್ನು ಪರಿಶೀಲನೆ ಮಾಡುವ ಸಲುವಾಗಿ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿತರಿಸುವ ಗುರುತಿನ ಚೀಟಿಯ ಮೂಲ ಪ್ರತಿಯನ್ನು ತರುವುದು, ವಿಳಾಸದ ದೃಢೀಕರಣ ದಾಖಲಾತಿ(ಆಧಾರ್ಕಾರ್ಡ್).
ಪಾಸುಗಳನ್ನು ನವೀಕರಿಸಲು ಫೆಬ್ರವರಿ 28 ಕೊನೆಯ ದಿನವಾಗಿದ್ದು, ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಂಗಳೂರು ಕರಾರಸಾಸಂ ನ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸ ವರ್ಷದ ಡೈರಿ ಬಿಡುಗಡೆ, ನಿವೃತ್ತರಿಗೆ ಸನ್ಮಾನ, ಅಭಿನಂದನಾ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಉಡುಪಿ, ಡಿಸೆಂಬರ್ 21 (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಅರಣ್ಯ ರಕ್ಷಕರ ಮತ್ತು ವೀಕ್ಷಕರ ಸಂಘ(ರಿ) ಬೆಂಗಳೂರು, ಕುಂದಾಪುರ ಪ್ರಾದೇಶಿಕ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗ ಕಾರ್ಕಳ, ಉಡುಪಿ ಜಿಲ್ಲೆಯ ಸಂಘದ ವತಿಯಿಂದ ಹೊಸ ವರ್ಷದ ಡೈರಿ ಬಿಡುಗಡೆ, ನಿವೃತ್ತರಿಗೆ ಸನ್ಮಾನ, ಅಭಿನಂದನಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಡಿಸೆಂಬರ್ 23 ರಂದು ಬೆಳಗ್ಗೆ 10.30 ಕ್ಕೆ ಉಡುಪಿ ಕಿದಿಯೂರು ಹೋಟೆಲ್ನ ಪವನ್ ರೂಫ್ ಟಾಪ್ನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಜಿಲ್ಲೆಯ ಕರ್ನಾಟಕ ರಾಜ್ಯ ಅರಣ್ಯ ರಕ್ಷಕ-ವೀಕ್ಷಕ ಸಂಘದ ಅಧ್ಯಕ್ಷ ಮಂಜುನಾಥ ಗಣಪತಿ ನಾಯ್ಕ್ ಅಧ್ಯಕ್ಷತೆ ವಹಿಸಲಿದ್ದಾರೆ.
ಎನ್.ಎಸ್.ಎಸ್.ಘಟಕದ ವಿದ್ಯಾರ್ಥಿಗಳಿಗೆ ವಿಶೇಷ ಶಿಬಿರ
ಉಡುಪಿ, ಡಿಸೆಂಬರ್ 21 (ಕರ್ನಾಟಕ ವಾರ್ತೆ) :ಸರ್ಕಾರಿ ಪಾಲಿಟೆಕ್ನಿಕ್ ಉಡುಪಿ ಇದರ ರಾಷ್ಟ್ರೀಯ ಸೇವಾ ಯೋಜನೆಯಡಿಯಲ್ಲಿ 2018-19 ನೇ ಸಾಲಿನಲ್ಲಿ ಸಂಸ್ಥೆಯ ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳಿಗೆ ವಿಶೇಷ ಶಿಬಿರವನ್ನು ಡಿಸೆಂಬರ್ 22 ರಿಂದ 28 ರ ವರೆಗೆ ಜಿಲ್ಲೆಯ ಪರೀಕಾ ದೇವಸ್ಥಾನದ ವಠಾರದಲ್ಲಿ ಆಯೋಜಿಸಲಾಗಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್ನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೃತ್ತಿರಂಗಭೂಮಿಯಲ್ಲಿ ತರಬೇತಿ ಪಡೆದವರಿಗೆ ಶಿಷ್ಯವೇತನ: ಅರ್ಜಿಅಹ್ವಾನ
ಉಡುಪಿ, ಡಿಸೆಂಬರ್ 21 (ಕರ್ನಾಟಕ ವಾರ್ತೆ) :ವೃತ್ತಿ ರಂಗಭೂಮಿಯಲ್ಲಿ ತರಬೇತಿ ಪಡೆದು, ಅದೇ ಮಾಧ್ಯಮದಲ್ಲಿ ತೊಡಗಿಸಿಕೊಳ್ಳಲು ಆಸಕ್ತರಾಗಿರುವ ಯುವಕ /ಯುವತಿಯರಿಂದ ಶಿಷ್ಯವೇತನಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ. ಶಿಷ್ಯವೇತನವನ್ನು 6 ತಿಂಗಳಿಗೆ ನೀಡಲಾಗುತ್ತದೆ.
ಒಟ್ಟು 15 ಜನ ಯುವಕರಿಗೆ ಈ ಶಿಷ್ಯವೇತನ ನೀಡಲಾಗುತ್ತದೆ. ಶಿಷ್ಯವೇತನದ ಮೊತ್ತ ಮಾಸಿಕ 10,000 ರೂ.ಗಳು(6 ತಿಂಗಳಿಗೆ ಮಾತ್ರ). ಆಯ್ಕೆಯಾದ ಅಭ್ಯರ್ಥಿಗಳು 6 ತಿಂಗಳುಗಳ ಕಾಲ ಅಕಾಡೆಮಿ ಸೂಚಿಸುವ ವೃತ್ತಿ ನಾಟಕ ಕಂಪೆನಿಯಲ್ಲಿ ಸ್ವಂತ ಜವಬ್ದಾರಿಯಿಂದ ಕೆಲಸ ಮಾಡಬೇಕು. ಊಟ, ವಸತಿಯನ್ನು ಅಯಾ ವೃತ್ತಿ ನಾಟಕ ಸಂಸ್ಥೆ ಒದಗಿಸುತ್ತದೆ. 18 ರಿಂದ 35 ವರ್ಷಗಳ ವಯೋಮಿತಿಯವರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಗ್ರಾಮೀಣ ಪ್ರದೇಶದ ಆಸಕ್ತರಿಗೆ ಆದ್ಯತೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೌಖಿಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಮೌಖಿಕ ಪರೀಕ್ಷೆಗೆ ಅಭ್ಯರ್ಥಿಗಳು ಸ್ವಂತ ಖರ್ಚಿನಲ್ಲಿ ಬಂದು ಹೋಗಬೇಕು. ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಸ್ವವಿವರ ಹಾಗೂ ರಂಗಭೂಮಿ ಅನುಭವದ ಕುರಿತು ಸ್ವಯಂ ಅರ್ಜಿಯನ್ನು ಸಲ್ಲಿಸಬೇಕು. ಅಭ್ಯರ್ಥಿಗಳು ಕನಿಷ್ಠ 7ನೇ ತರಗತಿ ಓದಿರಬೇಕು ಹಾಗೂ ಕನ್ನಡದಲ್ಲಿ ನಿರರ್ಗಳವಾಗಿ ಮಾತನಾಡುವ ಕೌಶಲ್ಯ ಹೊಂದಿರಬೇಕು. ರಂಗಭೂಮಿಯಲ್ಲಿ ಅನುಭವವಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಭರ್ತಿ ಮಾಡಿದ ಅರ್ಜಿಯನ್ನು ರಿಜಿಸ್ಟಾರ್, ಕರ್ನಾಟಕ ನಾಟಕ ಅಕಾಡೆಮಿ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು, (ದೂ: 080-22237484) ವಿಳಾಸಕ್ಕೆ ಜನವರಿ 10, 2019 ರ ಒಳಗೆ ಕಳುಹಿಸುವಂತೆ ಅಕಾಡೆಮಿಯ ರಿಜಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮಾಜಿ ಸೈನಿಕರಿಗೆ ಉದ್ಯೋಗ ಮೇಳ
ಉಡುಪಿ, ಡಿಸೆಂಬರ್ 21 (ಕರ್ನಾಟಕ ವಾರ್ತೆ) :ಕೇಂದ್ರೀಯ ವಿದ್ಯಾಲಯ, ಸಂಘಟನ್ ಕ್ರೀಡಾಂಗಣ, ಸೆಂಟ್ ಜಾನ್ಸು ರಸ್ತೆ, ಬೆಂಗಳೂರು ಇಲ್ಲಿ ಡಿಸೆಂಬರ್ 28 ರಂದು ಮಾಜಿ ಸೈನಿಕರಿಗಾಗಿ ಉದ್ಯೋಗ ಮೇಳವನ್ನು ಡೈರೆಕ್ಟರೇಟ್
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link