Brief Udupi News with pictures
Kemmannu News Network, 09-03-2019 22:08:37
ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಮಹಿಳಾ ದಿನಾಚರಣೆ
ಉಡುಪಿ, ಮಾರ್ಚ್ 8 (ಕರ್ನಾಟಕ ವಾರ್ತೆ): ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಮಾರ್ಚ್ 8 ರಂದು ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ಜಿಲ್ಲಾ ಗೃಹರಕ್ಷಕದಳದ ಕಮಾಂಡೆಂಟ್ ಡಾ: ಕೆ. ಪ್ರಶಾಂತ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಮಾತನಾಡಿ ಸಮಾಜದಲ್ಲಿ ಮಹಿಳೆಯರು ಮೊದಲು ಮನೆಗೇ ಸೀಮಿತವಾಗಿದ್ದರು. ಆದರೆ ಈಗ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಪುರುಷರಿಗೆ ಸಮಾನವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಗೃಹರಕ್ಷಕದಳದ ಮಹಿಳಾ ಗೃಹರಕ್ಷಕಿಯರಲ್ಲಿ ಉತ್ತಮ ಸೇವೆ ಸಲ್ಲಿಸಿದ ಮಹಿಳಾ ಗೃಹರಕ್ಷಕಿ ಸುಶೀಲಾ ಸಾಲ್ಯಾನ್ ಅವರನ್ನು ಸನ್ಮಾನಿಸಲಾಯಿತು.
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಡೆಪ್ಯೂಟಿ ಕಮಾಂಡೆಂಟ್ ರಮೇಶ್, ಮಾತನಾಡಿ, ಮಹಿಳಾ ಗೃಹರಕ್ಷಕಿಯರು ಇನ್ನೂ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿ ಅವರೂ ಕೂಡಾ ಸನ್ಮಾನಕ್ಕೆ ಭಾಜನರಾಗಬೇಕೆಂದು ಕರೆ ನೀಡಿದರು ಹಾಗೂ ಮಹಿಳಾ ದಿನಾಚರಣೆಯ ಶುಭಾಶಯವನ್ನು ತಿಳಿಸಿದರು.
ಕಾಪು ಘಟಕಾಧಿಕಾರಿ ಲಕ್ಷ್ಮೀನಾರಾಯಣ ರಾವ್, ಮಣಿಪಾಲ ಘಟಕದ ಸರಸ್ವತಿ, ಉಡುಪಿ ಘಟಕದ ಘಟಕಾಧಿಕಾರಿ ಕುಮಾರ್, ಜಿಲ್ಲಾ ಗೃಹರಕ್ಷಕದಳ ಕಚೇರಿಯ ಅಧೀಕ್ಷಕರಾದ ಕವಿತಾ ಕೆ.ಸಿ. ಹಾಗೂ ಪ್ರಥಮ ದರ್ಜೆ ಸಹಾಯಕಿ ಶ್ಯಾಮಲಾ ಉಪಸ್ಥಿತರಿದ್ದರು. ಲಕ್ಷ್ಮೀನಾರಾಯಣ ರಾವ್ ಕಾರ್ಯಕ್ರಮವನ್ನು ನಿರೂಪಿಸಿದರು. ಕುಮಾರ್ ವಂದಿಸಿದರು.
ರಾಜ್ಯ ಮಟ್ಟದ ಅಗ್ನಿಶಮನ ತರಬೇತಿಯಲ್ಲಿ ಚಿನ್ನದ ಪದಕ
ಉಡುಪಿ, ಮಾರ್ಚ್ 8 (ಕರ್ನಾಟಕ ವಾರ್ತೆ): ಉಡುಪಿ ಜಿಲ್ಲಾ ಗೃಹರಕ್ಷಕದಳ ಕಾರ್ಕಳ ಘಟಕದ ಗೃಹರಕ್ಷಕ ಶಿವಪ್ರಸಾದ, ಮೆಟಲ್ ಸಂ. 174 ಇವರು ಬೆಂಗಳೂರಿನ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಅಕಾಡೆಮಿಯಲ್ಲಿ ನಡೆದ ರಾಜ್ಯ ಮಟ್ಟದ ಮೂಲ ಅಗ್ನಿಶಮನ ತರಬೇತಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವವನ್ನು ಗಳಿಸಿದ್ದು ಚಿನ್ನದ ಪದಕವನ್ನು ಪಡೆದಿರುತ್ತಾರೆ. ಇವರನ್ನು ಜಿಲ್ಲಾ ಗೃಹರಕ್ಷಕದಳದ ಕಮಾಂಡೆಂಟ್ ಡಾ: ಕೆ. ಪ್ರಶಾಂತ್ ಶೆಟ್ಟಿ ಇವರು ಸಂಸ್ಥೆಯ ಪರವಾಗಿ ಅಭಿನಂದಿಸಿರುತ್ತಾರೆ ಎಂದು ಉಡುಪಿ ಗೃಹ ರಕ್ಷಕ ದಳದ ಕಮಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಉಡುಪಿ ನಗರಸಭೆ- ರಾಷ್ಟ್ರೀಯ ಮಹಿಳಾ ದಿನಚರಣೆ
ಉಡುಪಿ, ಮಾರ್ಚ್ 8 (ಕರ್ನಾಟಕ ವಾರ್ತೆ): ಉಡುಪಿ ನಗರಸಭೆಯ ಪೌರಾಯುಕ್ತರ ಅಧ್ಯಕ್ಷತೆಯಲ್ಲಿ ಮಹಿಳಾ ಅಧಿಕಾರಿ / ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ಉಡುಪಿ ನಗರಸಭೆ ಪೌರಾಯುಕ್ತರು ಆನಂದ ಕಲ್ಲೋಳಿಕರ್ ಕಾರ್ಯಕ್ರಮವನ್ನು ಉಧ್ಘಾಟಿಸಿ, ಮಹಿಳಾ ದಿನಾಚರಣೆಯ ಶುಭ ಸಂದೇಶ ನೀಡಿದ್ದು, ಕಛೇರಿಯ ಮಹಿಳಾ ಅಧಿಕಾರಿ/ಸಿಬ್ಬಂಧಿಗಳು ಅನಿಸಿಕೆಯನ್ನು ವ್ಯಕ್ತಪಡಿಸಿದರು. ನಗರಸಭೆಯ ಸಹಾಯಕ ಕಾರ್ಯಾಪಾಲಕ ಅಭಿಯಂತರರು, ಕಛೇರಿಯ ವ್ಯವಸ್ಥಾಪಕರು ಲೆಕ್ಕಾಧಿಕಾರಿಗಳು, ಕಂದಾಯಾಧಿಕಾರಿಗಳು, ಹಾಗೂ ಇತರ ಸಿಬ್ಬಂದಿಗಳು ಭಾಗವಹಿಸಿದ್ದರು ಎಂದು ಪೌರಾಯುಕ್ತರು, ನಗರಸಭೆ ಉಡುಪಿ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅಪರಿಚಿತ, ಮೃತ ವ್ಯಕ್ತಿಯ ಮಾಹಿತಿ ಪತ್ತೆ ಬಗ್ಗೆ
ಉಡುಪಿ, ಮಾರ್ಚ್ 8 (ಕರ್ನಾಟಕ ವಾರ್ತೆ): ಉಡುಪಿ ಪುತ್ತೂರು ಗ್ರಾಮದ ಹನುಮಂತನಗರ ಪ್ರಾಥಮಿಕ ಶಾಲೆಯ ಎದುರು ರಾಷ್ಟ್ರೀಯ ಹೆದ್ದಾರಿ 66 ರ ಸಾರ್ವಜನಿಕ ರಸ್ತೆಯಲ್ಲಿ ಮಾರ್ಚ್ 8 ರಂದು ಬೆಳಗ್ಗೆ 6.30 ಕ್ಕೆ ಸುಮಾರು ಸುಮಾರು 35 ವರ್ಷ, 5.4 ಅಡಿ ಎತ್ತರದ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿರುವ ಅಪರಿಚಿತ ವ್ಯಕ್ತಿಯೋರ್ವನಿಗೆ ಯಾವುದೋ ವಾಹನ ಕರಾವಳಿ ಕಡೆಯಿಂದ ಸಂತೆಕಟ್ಟೆ ಕಡೆಗೆ ದುಡುಕುತನದಿಂದ ಮತ್ತು ಅಜಾಗರೂಕತೆಯಿಂದ ಚಲಾಯಿಸಿ, ಅಪಘಾತವೆಸಗಿ ಪರಾರಿಯಾಗಿದ್ದು, ಅಪಘಾತದ ಪರಿಣಾಮ ಅಪರಿಚಿತ ವ್ಯಕ್ತಿಯ ತಲೆಗೆ ಮತ್ತು ಮುಖಕ್ಕೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅಂದು ಬೆಳಗ್ಗೆ 8.10 ಕ್ಕೆ ಮೃತಪಟ್ಟಿರುತ್ತಾರೆ.
ಸದ್ರಿ ಪ್ರಕರಣದಲ್ಲಿ ಅಪಘಾತ ವೆಸಗಿದ ವಾಹನದ ಮತ್ತು ಮೃತಪಟ್ಟ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಸಂಚಾರ ಠಾಣೆ ದೂರವಾಣಿ ಸಂಖ್ಯೆ: 0820-2521332, ಪೊಲೀಸ್ ವೃತ್ತ ನಿರೀಕ್ಷಕರು ಉಡುಪಿ ವೃತ್ತ ದೂರವಾಣಿ ಸಂಖ್ಯೆ: 0820-2520329 ಅಥವಾ ಜಿಲ್ಲಾ ನಿಯಂತ್ರಣ ಕೊಠಡಿ ಉಡುಪಿ ದೂರವಾಣಿ ಸಂಖ್ಯೆ: 0820-2526444 ಅನ್ನು ಸಂಪರ್ಕಿಸುವಂತೆ ಸಂಚಾರಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link