ಸ್ವಾತಂತ್ರ್ಯಾನಂತರ ಭಾರತದಲ್ಲಿ ದೇಶವನ್ನು ಪ್ರೀತಿಸುವ ನಾಯಕರ ಕೊರತೆ ಇದೆ - ಶ್ರೀ ಜಯಪ್ರಕಾಶ್ ರಾವ್ ಕೆ


NITHIN KUMAR S
Kemmannu News Network, 26-03-2019 11:43:45


Write Comment     |     E-Mail To a Friend     |     Facebook     |     Twitter     |     Print


ಸ್ವಾತಂತ್ರ್ಯಾನಂತರ ಭಾರತದಲ್ಲಿ ದೇಶವನ್ನು ಪ್ರೀತಿಸುವ ನಾಯಕರ ಕೊರತೆ ಇದೆ - ಶ್ರೀ ಜಯಪ್ರಕಾಶ್ ರಾವ್ ಕೆ

ಪ್ರಪಂಚದಲ್ಲಿಯೇ ಅತೀ ಹೆಚ್ಚು ಯುವ ಸಮೂಹವನ್ನು ಹೊಂದಿರುವಂತಹ ಭಾರತ ದೇಶದಲ್ಲಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಬೇರೆ ಬೇರೆ ರೀತಿಯ ನಾಯಕರುಗಳಿದ್ದರೂ ಕೂಡ ಯುವ ಸಮುದಾಯಕ್ಕೆ ಮಾದರಿಯಾಗಿ ನಿಲ್ಲಬಲ್ಲ ದೇಶವನ್ನು ಪ್ರೀಸತಿಸುವ ನಾಯಕನ ಕೊರತೆ ಇದೆ. ಹಾಗೆಂದ ಮಾತ್ರಕ್ಕೆ ನಾವು ನಾಯಕರಿಕಾಗಿ ಕಾಯಬೇಕಾಗಿಲ್ಲ, ದೇಶದ ಒಳಿತಿಗಾಗಿ, ದೇಶವನ್ನು ಕಟ್ಟಿ ಬೆಳೆಸಲು ನಮ್ಮ ಸಾಮಥ್ರ್ಯದ ಮೇಲೆ ನಾವು ನಂಬಿಕೆ ಇರಿಸಿಕೊಂಡು ನಮ್ಮ ಕರ್ತವ್ಯವನ್ನು ಸರಿಯಾದ ರೀತಿಯಲ್ಲಿ ನಾವು ಮಾಡಿದಾಗ ದೇಶದ ಏಳಿಗೆ ಸಾಧ್ಯವಾಗುತ್ತದೆ ಎಂದು ದೆಹಲಿಯ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯ ನಿವೃತ್ತ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀ ಜಯಪ್ರಕಾಶ್ ರಾವ್ ಕೆ ಅವರು ಅಭಿಪ್ರಾಯಪಟ್ಟರು.

ಮಂಗಳೂರಿನ ವಿಶ್ವ ವಿದ್ಯಾನಿಲಯ ಸಂಧ್ಯಾ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ದಿನಾಂಕ 23-03-2019 ರಂದು ಜರುಗಿದ ಕಾಲೇಜಿನ ಮೂರನೇ ವಾರ್ಷಿಕೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ ಅವರು ಭಾರತದ ಮಾಜಿ ರಾಷ್ಟ್ರಪತಿಯಾಗಿದ್ದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ರವರನ್ನು ಉದಾಹರಿಸುತ್ತಾ, ಅಬ್ದುಲ್ ಕಲಾಂರು ಬಹಳ ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು. ಸಣ್ಣ ವಯಸ್ಸಿನಲ್ಲಿಯೇ ಪತ್ರಿಕೆಗಳನ್ನು ಹಂಚುತ್ತಾ ವಿದ್ಯಾಭ್ಯಸವನ್ನು ಪಡೆದುಕೊಂಡು ಬೆಳೆದು ಉನ್ನತ ಸ್ಥಾನಕ್ಕೆ ಏರಿದ ವ್ಯಕ್ತಿ. ಅದೇ ರೀತಿಯಲ್ಲಿ ಸಂಧ್ಯಾ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಕೂಡ ಹಗಲು ದುಡಿದು ಸಂಜೆ ಜ್ಞಾನಾರ್ಜನೆಯಲ್ಲಿ ತೊಡಗಿಕೊಂಡು ಮುಂದಕ್ಕೆ ಉನ್ನತ ಹಂತಕ್ಕೆ ಏರುವಂತಾಗಲಿ ಎಂದು ಹಾರೈಸಿದರು. ಅದೇ ರೀತಿಯಾಗಿ ಅವರು ನಾವು ಯಾವುದೇ ವೃತ್ತಿ ಮಾಡಿದರೂ ಎಂದಿಗೂ ಅದನ್ನು ಕೀಳಾಗಿ ಕಾಣಬಾರದು, ನಾವು ಮಾಡುವ ವೃತ್ತಿಯನ್ನು ನಾವು ಪ್ರೀತಿಸಬೇಕು, ನಾವು ನಮ್ಮ ಮೇಲೆ ನಂಬಿಕೆ ಇರಿಸಿಕೊಂಡು ನಮ್ಮ ಕರ್ತವ್ಯವನ್ನು ಸರಿಯಾದ ರೀತಿಯಲ್ಲಿ ಪಾಲನೆ ಮಾಡಿದರೆ ಭಾರತ ಮತ್ತೆ ಗತವೈಭವವನ್ನು ಪಡೆದುಕೊಳ್ಳುತ್ತದೆ ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಬಿ.ಎಂ ರವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಹಗಲು ದುಡಿದು ಅನಿವಾರ್ಯ ಕಾರಣಗಳಿಂದ, ಅಥವಾ ಕುಟುಂಬದ ಜವಾಬ್ಧಾರಿಗಳ ಹೊರೆಯಿಂದಲೋ ತಮ್ಮ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿದ ವಿದ್ಯಾರ್ಥಿಗಳಿಗೆ ವಿಶ್ವ ವಿದ್ಯಾನಿಲಯ ಕಾಲೇಜು ಆಶಾಕಿರಣವಾಗಿದ್ದು, ಈ ವರ್ಷ ಯಶಸ್ವೀಯಾಗಿ ಮೂರು ಶೈಕ್ಷಣಿಕ ವರ್ಷಗಳನ್ನು ಪೂರೈಸುತ್ತದೆ. ಗುಣ ಮಟ್ಟದ ಶಿಕ್ಷಣವನ್ನು ನೀಡುತ್ತಾ ಉತ್ತಮ ಫಲಿತಾಂಶವನ್ನು ಪಡೆಯುತ್ತಿರುವ ಕಾಲೇಜು ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಂಪೂರ್ಣ ಸಹಕಾರ ನೀಡಿ ಅವರನ್ನು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪಿಸುವುದು ಕಾಲೇಜಿನ ಆಶಯ ಎಂದು ತಿಳಿಸಿದರು.

ಕಾಲೇಜಿನ ವಿದ್ಯಾರ್ಥಿಗಳ ಪರವಾಗಿ ಮಾತನಾಡಿದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉಲ್ಲಾಸ್ ಕುಮಾರ್, ಕಾಲೇಜು ಮಿದುಳು ಮತ್ತು ಹೃದಯ ಎರಡಕ್ಕೂ ಶಿಕ್ಷಣವನ್ನು ನೀಡುತ್ತಿದೆ. ಇಂತಹ ಕಾಲೇಜಿನಲ್ಲಿ ಶಿಕ್ಷಣವನ್ನು ಪಡೆಯುತ್ತಿರುವುದು ನಮ್ಮೆಲ್ಲರ ಸೌಭಾಗ್ಯ ಹಾಗೂ ಅನಿವಾರ್ಯ ಕಾರಣಗಳಿಂದ ನಿಂತು ಹೋಗಿದ್ದ ವಿದ್ಯಾಭ್ಯಾಸಕ್ಕೆ ಮರುಜೀವ ನೀಡಿದ ಕಾಲೇಜಿಗೆ ನಾವೆಲ್ಲರೂ ಚಿರಋಣಿಗಳು ಎಂದರು. ಪ್ರಾಂಶುಪಾಲರ ಸಹಕಾರ, ಉಪನ್ಯಾಸಕರ ಪ್ರೋತ್ಸಾಹಭರಿತ ಭೋಧನೆಗಳು ಹಾಗೂ ಚಟುವಟಿಕೆಗಳು ಕಾಲೇಜಿನ ಯಶಸ್ಸಿನ ಬೆನ್ನೆಲುಬಾಗಿ ವಿದ್ಯಾರ್ಥಿಗಳ ವಿಕಸನಕ್ಕೆ ದಾರಿಯಾಗಿದೆ ಹಾಗೂ ಜವಾಬ್ಧಾರಿ ನಿಭಾಯಿಸುತ್ತಾ ಭವಿಷ್ಯದಲ್ಲಿ ಉತ್ತಮ ಸ್ಥಾನಮಾನ ಪಡೆದುಕೊಳ್ಳಲು ಕಾಲೇಜು ಉತ್ತಮ ವೇದಿಕೆಯಾಗಲಿದೆ. ಸಂಧ್ಯಾ ಕಾಲೇಜಿನಲ್ಲಿ ಸಂಜೆಯ ಹೊತ್ತಿನಲ್ಲಿ ಬೆಳಗುತ್ತಿರುವ ಜ್ಞಾನದ ಬೆಳಕು ಇನ್ನಷ್ಟು ಪ್ರಕಾಶಮಾನವಾಗಿ ಬೆಳಗಲು ನಾವೆಲ್ಲರೂ ಇನ್ನಷ್ಟು ಶ್ರಮಪಡಬೇಕು ಎಂದು ತಮ್ಮ ಅಭಿಪ್ಯಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿಶ್ವ ವಿದ್ಯಾನಿಲಯದ ವಿಜ್ಞಾನ ನಿಕಾಯದ ಡೀನ್ ಪ್ರೊ. ಕೆ.ಎಂ ಬಾಲಕೃಷ್ಣರವರು ಮಾತನಾಡುತ್ತಾ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳು ಯಾವುದೇ ಕಾಲೇಜಿನ ವಿದ್ಯಾರ್ಥಿಗಳಿಗಿಂತ ಕಡಿಮೆಯೇನಿಲ್ಲ, ಅವರು ಇತರೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಾನರು. ಸಂಧ್ಯಾ ಕಾಲೇಜಿನ À ವಿದ್ಯಾರ್ಥಿಗಳು ಹೊತ್ತು ಮುಳುಗಿದ ಮೇಲೆ ಓದಿ ದೇಶಕ್ಕಾಗಿ ದುಡಿಯುವವರು ಎಂದು ತಿಳಿಸಿದರು. ಕೇವಲ ಪದವಿ ಪಡೆದುಕೊಳ್ಳುವುದು ವಿದ್ಯೆ ಎಂದೆನಿಸಿಕೊಳ್ಳುವುದಿಲ್ಲ, ಯಾವುದನ್ನು ಕಲಿತರೂ ಅದು ವಿದ್ಯೇಯೇ ಹಾಗಾಗಿ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ವಿದ್ಯಾವಂತರು. ಈಗಿನ ಪರಿಸ್ಥಿತಿಯಲ್ಲಿ ವಿದ್ಯೆ ಗಳಿಸಿಕೊಳ್ಳುವುದು ಹನ ಸಂಪಾದನೆಗಾಗಿ, ಆದರೆ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಿಗೆ  ಕೇವಲ ಹಣ ಸಂಪಾದನೆಯೇ ಮುಖ್ಯವಾಗಿದ್ದಲ್ಲಿ ಅವರು ಸಂಧ್ಯಾ ಕಾಲೇಜಿನಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸುತ್ತಿರಲಿಲ್ಲ ಅವರಲ್ಲಿನ ಕಲಿಕೆಯ ಆಸಕ್ತಿ ಅವರನ್ನು ವಿದ್ಯಾಭ್ಯಾಸ ಮುಂದುವರೆಸುವಂತೆ ಪ್ರೇರೇಪಿಸಿದೆ ಎಂದು ಅಭಿಪ್ರಾಯ ಪಟ್ಟರು. ಹಾಗೂ ಜನರು ತಮ್ಮಲ್ಲಿ ವಿದ್ಯೆಯ ಜೊತೆಗೆ ತಮ್ಮ ಮೇಲೆ ತಾವು ನಂಬಿಕೆಯನ್ನು, ಆತ್ಮ ಗೌರವವನ್ನು ಹೊಂದಿರಬೇಕು. ಆತ್ಮ ಗೌರವವನ್ನು ಹೊಂದಿರದ ವ್ಯಕ್ತಿ ಏನು ಮಾಡಿದರೂ ಪ್ರಯೋಜನವಿಲ್ಲ. ಹಾಗಾಗಿ ನಾವು ಯಾವುದೇ ಕಾರ್ಯವನ್ನು ಮಾಡಿದರೂ ನಮ್ಮ ಮೇಲೆ ನಂಬಿಕೆ ಇರಿಸಿಕೊಂಡು, ಅತ್ಮಗೌರವದಿಂದ ಆ ಕೆಲಸವನ್ನು ಮಾಡಬೇಕು,  ಆಗ ಮಾತ್ರ ಅದು ನಮ್ಮ ದೇಶದ ಏಳಿಗೆಗೆ ತನ್ನ ಕೊಡುಗೆಯನ್ನು ನೀಡುತ್ತದೆ ಎಂದು ತಿಳಿಸಿದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಹಾಗೂ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರೂ ಆಗಿರುವ ಡಾ.ಎ.ಸಿದ್ಧಿಕ್ ರವರು ಕಾಲೇಜಿನ 2018-19 ನೇ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಿದರು. ಕಾಲೇಜು ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಹಾಗೂ 2018-19 ನೇ ಸಾಲಿನಲ್ಲಿ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಬಹುಮಾನ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ವಿದ್ಯಾರ್ಥಿ ನಾಯಕ ಅಂತಿಮ ಬಿ.ಎ ವಿದ್ಯಾರ್ಥಿ ಉಲ್ಲಾಸ್ ಕುಮಾರ್ ಹಾಗೂ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಕುಮಾರಿ ಎಂ ಸಹಾನಾ 2018-19 ನೇ ಸಾಲಿನ “ಬೆಸ್ಟ್ ಔಟ್‍ಗೋಯಿಂಗ್ ಸ್ಟುಡೆಂಟ್” ಪ್ರಶಸ್ತಿಯನ್ನು ಪಡೆದುಕೊಂಡರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ಉಪನಿರ್ದೇಶಕ ಡಾ.ಎ.ಸಿದ್ಧಿಕ್. ವಿದ್ಯಾರ್ಥಿ ಸಂಘದ ಅಧ್ಯಕ್ಷ ಉಲ್ಲಾಸ್ ಕುಮಾರ್, ಕಾರ್ಯದರ್ಶಿ ಕುಮಾರಿ ಎಂ ಸಹನಾ, ಲಲಿತಕಲಾ ಸಂಘದ ಕಾರ್ಯದರ್ಶಿ ಮಹಮ್ಮದ್ ನಝೀರ್ ಹುಸೈನ್, ಕಾಲೇಜಿನ ಬೋಧಕ ಬೋಧಕೇತರ ವರ್ಗ, ರಕ್ಷಕ -ಶಿಕ್ಷಕ ಸಂಘದ ಪದಾಧಿಕಾರಿಗಳು, ಸ್ನಾತಕೋತ್ತರ ವಿಭಾಗಗಳ ಸಂಯೋಜಕರು, ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಬಿ.ಎಂ ರವರು ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಉಪನ್ಯಾಸಕಿ ಪ್ರೀತಾ ಮಿನೇಜಸ್ ವಂದನಾರ್ಪಣೆಗೈದು, ಅಶ್ವಿನಿ ಕಾರ್ಯಕ್ರಮ ನಿರ್ವಹಣೆಗೈದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಚಟುವಟಿಕೆಗಳ ಪ್ರತಿಭಾ ಪ್ರದರ್ಶನ ನಡೆಯಿತು.

Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




Symphony98 Releases Soul-Stirring Rendition of Len
View More

Final Journey Of Theresa D’Souza (79 years) | LIVE From Kemmannu | Udupi |Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!

Creating a World of Peaceful Stay!

For the Future Perfect Life that you Deserve! Contact : Rohan Corporation, Mangalore.Invest Smart and Earn Big! <P>Creating a World of Peaceful Stay! <P>For the Future Perfect Life that you Deserve! Contact : Rohan Corporation, Mangalore.


Final Journey Of Joe Victor Lewis (46 years) | LIVE From Kemmannu | Organ Donor | Udupi |Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 IssueMilagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVEEaster Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVEWay Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | UdupiWay Of Cross on Good Friday 2024 | Live From | St. Theresa’s Church, Kemmannu, Udupi | LIVE
2 BHK Flat for sale on the 6th floor of Eden Heritage, Santhekatte, Kallianpur, Udupi2 BHK Flat for sale on the 6th floor of Eden Heritage,  Santhekatte, Kallianpur, Udupi.
Maundy Thursday 2024 | LIVE From St. Theresa’s Church, Kemmannu | Udupi |Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flatKemmennu for sale 1 BHK 628 sqft, Air Conditioned  flat
Symphony98 Releases Soul-Stirring Rendition of Lenten Hymn "Khursa Thain"Symphony98 Releases Soul-Stirring Rendition of Lenten Hymn
Palm Sunday 2024 at St. Theresa’s Church, Kemmannu | LIVEPalm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From KemmannuFinal Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu ChannelCarmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu ChannelFinal Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From KemmannuValentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, UdupiRozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of UdupiAn Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special IssueDiocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | UdupiFinal Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | UdupiEarth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, KemmannuConfraternity Sunday | St. Theresa’s Church, Kemmannu
Kemmannu Cricket Match 2024 | LIVE from KemmannuKemmannu Cricket Match 2024 | LIVE from Kemmannu
Naturya - Taste of Namma Udupi - Order NOWNaturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, UdupiFocus Studio, Near Hotel Kidiyoor, Udupi