Brief Udupi News with pictures
Kemmannu News Network, 11-04-2019 21:53:36
ಮೈಕ್ರೋ ವೀಕ್ಷಕರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ- ವೀಕ್ಷಕ ಕೃಷ್ಣ ಕುನಾಲ್
ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿರುವ ಮೈಕ್ರೋ ವೀಕ್ಷಕರು ನೇರವಾಗಿ ಚುನಾವಣಾ ಆಯೋಗಕ್ಕೆ ವರದಿ ಮಾಡಬೇಕಾಗಿರುವುದರಿಂದ ತಮ್ಮ ಜವಾಬ್ದಾರಿಯನ್ನು ಅರಿತು ಕರ್ತವ್ಯ ನಿರ್ವಹಿಸುವಂತೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಸಾಮಾನ್ಯ ವೀಕ್ಷಕ ಕೃಷ್ಣ ಕುನಾಲ್ ತಿಳಿಸಿದ್ದಾರೆ.
ಅವರು ಬುಧವಾರ, ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಮೈಕ್ರೋ ವೀಕ್ಷಕರಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮೈಕ್ರೋ ವೀಕ್ಷಕರು ಚುನಾವಣೆಯ ಸಂಪೂರ್ಣ ಕಾರ್ಯ ವಿಧಾನವನ್ನು ಅರಿತುಕೊಳ್ಳಬೇಕು , ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಸಿಬ್ಬಂದಿಗಳ ಕಾರ್ಯ ವಿಧಾನ, ಎವಿಎಂ, ವಿವಿ ಪ್ಯಾಟ್ ಸೇರಿದಂತೆ ಎಲ್ಲಾ ವಿಷಯಗಳ ಸಂಪೂರ್ಣ ಮಾಹಿತಿ ಹೊಂದಿರಬೇಕು ಎಂದು ವೀಕ್ಷಕರು ಹೇಳಿದರು.
ಮತಗಟ್ಟೆಯ ಬಳಿ ಯಾವುದೇ ಅಹಿತಕರ ಘಟನೆಗಳು ನಡೆದರೆ, ಮತಯಂತ್ರದಲ್ಲಿ ದೋಷ ಕಂಡು ಬಂದಲ್ಲಿ, ಚುನಾವಣಾ ಆಯೋಗ ರೂಪಿಸಿರುವ ನಿಯಮಗಳಿಗೆ ಅನುಗುಣವಾಗಿ ಚುನಾವಣೆ ನಡೆಯುತ್ತಿರುವ ಬಗ್ಗೆ ಪರಿಶೀಲನೆ ನಡೆಸಬೇಕು, ಮತದಾನ ನಡೆಯುವ ಹಿಂದಿನ ದಿನವೇ ಇತರೆ ಸಿಬ್ಬಂದಿಗಳೊಂದಿಗೆ ಮತಗಟ್ಟೆಯಲ್ಲಿರಬೇಕು, ಮತದಾನದ ದಿನ ಬೆಳಗ್ಗೆ 6 ಗಂಟೆಗೆ ನಡೆಸುವ ಮಾಕ್ ಪೋಲ್ ಪರಿಶೀಲಿಸಿ, ನಂತರ ಅದನ್ನು ಖಚಿತಪಡಿಸಿಕೊಂಡು ಡಿಲೀಟ್ ಮಾಡಬೇಕು, ಮತಗಟ್ಟೆಯೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶಕ್ಕೆ ಅನುಮತಿ ನೀಡಬಾರದು, ನಿಗಧಿತ ಸಂಖ್ಯೆಗಿಂತ ಹೆಚ್ಚಿನ ಸಂಖ್ಯೆಯ ಪೋಲಿಂಗ್ ಏಜೆಂಟರಿಗೆ ಅನುಮತಿ ನೀಡಬಾರದು ಎಂದು ಕೃಷ್ಣ ಕುನಾಲ್ ತಿಳಿಸಿದರು.
ಮತದಾನದ ದಿನದಂದು, ಮತದಾನ ನಡೆದ ಪ್ರಮಾಣ, ಮತಯಂತ್ರದಲ್ಲಿ ದೋಷ ಕಂಡು ಬಂದ ಬಗ್ಗೆ, ಮತಗಟ್ಟೆಗೆ ಭೇಟಿ ನೀಡಿದ ಸೆಕ್ಟರ್ ಅಧಿಕಾರಿ ಮತ್ತು ಪೊಲೀಸ್ ಆಧಿಕಾರಿಗಳು ಬಗ್ಗೆ, ಅನಧಿಕೃತ ವ್ಯಕ್ತಿಗಳು ಮತಗಟ್ಟೆಗೆ ಪ್ರವೇಶಿಸಿದ ಬಗ್ಗೆ , ಮತದಾನಕ್ಕೆ ಯಾವುದೇ ಅಡಚಣೆ ಆಗಿರುವ ಕುರಿತಂತೆ ಮಧ್ಯಾಹ್ನ 12, 3 ಮತ್ತು ಮತದಾನ ಮುಗಿದ ಬಳಿಕ ವ್ಯಾಟ್ಸಾಪ್ ನಲ್ಲಿ ತಮಗೆ ಮಾಹಿತಿ ನೀಡುವಂತೆ ಸೂಚಿಸಿದರು.
ಮತದಾನ ಸಂದರ್ಭದಲ್ಲಿ ಪೋಟೋ ವೋಟರ್ ಸ್ಲಿಪ್ ನ್ನು ಮತದಾನಕ್ಕೆ ದಾಖಲೆಯನ್ನಾಗಿ ಪರಿಗಣಿಸಬೇಡಿ, ಚುನಾವಣಾ ಆಯೋಗ ನೀಡಿರುವ ಇತರೆ 11 ಗುರುತಿನ ದಾಖಲೆಗಳಲ್ಲಿ ಒಂದನ್ನು ಪರಿಗಣಿಸಿ ಎಂದ ವೀಕ್ಷಕರು, ಏಪ್ರಿಲ್ 18 ಮತದಾನ ಮುಕ್ತಾಯದ ಬಳಿಕ ಏಪ್ರಿಲ್ 19 ರಂದು ಅನಿವಾರ್ಯತೆ ಇದ್ದಲ್ಲಿ ಮೈಕ್ರೋ ವೀಕ್ಷಕರು ಅಗತ್ಯವಿರುವುದರಿಂದ ಉಡುಪಿ ಬಿಟ್ಟು ಬೇರೆಡೆಗೆ ತೆರಳದಂತೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಮೈಕ್ರೋ ವೀಕ್ಷಕರ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು,
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು.
ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಶ್ರೀರಾಮೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಮೈಸೂರಿನ ವಿ.ಸಂಜೀವ ಕುಮಾರ್ ಇವರಿಂದ ವಯೊಲಿನ್ ವಾದನ ಕಾರ್ಯಕ್ರಮ ನಡೆಯಿತು.
ವೋಟರ್ ಸ್ಲಿಪ್ ಪಡೆಯಿರಿ
ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಸಂಬಂದಿಸಿದಂತೆ, ಉಡುಪಿ ಜಿಲ್ಲೆಯ ಎಲ್ಲಾ ಮತದಾರರಿಗೆ , ಕಳೆದ ಒಂದು ವಾರದಿಂದ ಬಿ.ಎಲ್ ಓ ಗಳ ಮೂಲಕ ಮನೆ ಮನೆಗೆ ತೆರಳಿ ವೋಟರ್ ಸ್ಲಿಪ್ ವಿತರಿಸುವ ಕಾರ್ಯಕ್ರಮ ನಡೆಸಲಾಗುತ್ತಿದೆ.
ಒಂದು ವೇಳೆ ಬಿ.ಎಲ್ ಓ ಗಳು ಭೇಟಿ ನೀಡಿದ ಸಂದರ್ಭದಲ್ಲಿ ನಿವಾಸಿಗಳು ಮನೆಯಲ್ಲಿ ಇಲ್ಲದೇ ಇದ್ದ ಪಕ್ಷದಲ್ಲಿ , ವೋಟರ್ ಸ್ಲಿಪ್ ಸಿಗದೇ ಇರುವ ಮತದಾರರು ,ಹತ್ತಿರದ ಮತಗಟ್ಟೆಯ ಬಿ.ಎಲ್ ಓ ಗಳನ್ನು ಸಂಪರ್ಕಿಸಿ, ವೋಟರ್ ಸ್ಲಿಪ್ ಪಡೆಯುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Final Journey of Lionel John Lewis (74 years) | LIVE from Milagres Cathedral | Kallianpur | Udupi
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Vespers 2024 | St. Theresa’s Church, Kemmannu
Annual Church Feast 2024 | St. Theresa’s Church, Kemmannu
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
CHRISTMAS MASS-2023 | St. Theresa’s Church | Live from Kemmannu | Udupi
Annual Day 2023 | Carmel English School, Live From Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Easter 2023 - Milrachi Lara From Milagres Cathedral, Kallianpur, Udupi
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link