Brief University College News with Pictures
Kemmannu News Network, 01-08-2021 19:27:40
ಸಹಕಾರಿ ಖಾತೆ ಸರಿಯಾದ ದಿಕ್ಕಿನಲ್ಲಿ ಸೂಕ್ತ ನಿರ್ಧಾರ: ಆರ್ಥಿಕ ತಜ್ಞ ಡಿ ಬಿ ಮೆಹ್ತಾ
ಮಂಗಳೂರು: ಕಳೆದ ಕೆಲವು ವರ್ಷಗಳಲ್ಲಿ ದೇಶದಲ್ಲಿ ಅದೆಷ್ಟೋ ಸಹಕಾರಿ ಬ್ಯಾಂಕ್ಗಳು ಅಸಮರ್ಪಕ ಆರ್ಥಿಕ ನಿರ್ವಹಣೆಯಿಂದ ನೆಲಕಚ್ಚಿವೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸದಾಗಿ ಸ್ಥಾಪಿಸಿರುವ ಸಹಕಾರಿ ಖಾತೆ ಸರಿಯಾದ ದಿಕ್ಕಿನಲ್ಲಿ ಸೂಕ್ತ ನಿರ್ಧಾರ, ಎಂದು ಕ್ರೆಡಾಯ್ ಉಪಾಧ್ಯಕ್ಷ, ಆರ್ಥಿಕ ತಜ್ಞ ಸಿಎ ಡಿ ಬಿ ಮೆಹ್ತಾ ಅಭಿಪ್ರಾಯಪಟ್ಟಿದ್ದಾರೆ.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗ ಮತ್ತು ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಗಳ ಸಂಸ್ಥೆ (ಮಂಗಳೂರು ವಿಭಾಗ) ಜಂಟಿಯಾಗಿ ಶುಕ್ರವಾರ ಆಯೋಜಿಸಿದ್ದ “ಜಾಗತಿಕ ಸನ್ನಿವೇಶದಲ್ಲಿ ಭಾರತೀಯ ಆರ್ಥಿಕತೆ” ಎಂಬ ರಾಷ್ಟ್ರಮಟ್ಟದ ವೆಬಿನಾರ್ನಲ್ಲಿ ಅತಿಥಿಯಾಗಿ ಮಾತನಾಡಿದ ಅವರು, ಬ್ಯಾಂಕ್ಗಳ ವಿಲೀನದಿಂದ ಯಾವುದೇ ಲಾಭವಿಲ್ಲ. ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ಗಳ ಖಾಸಗೀಕರಣವಷ್ಟೇ ಪರಿಹಾರ. ಸಬ್ಸಿಡಿಗಳು ಜಿಡಿಪಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತವೆ, ಪರೋಕ್ಷ ತೆರಿಗೆಗಳಷ್ಟೇ ದೇಶದ ಆರ್ಥಿಕತೆಗೆ ಬಲ ತುಂಬಬಲ್ಲವು.
“ಈಗ ಚೀನಾದ ಅರ್ಥಿಕತೆ ನಮ್ಮ ಆರ್ಥಿಕತೆಯ 5 ಪಟ್ಟು ದೊಡ್ಡದಿದೆ. ಮೂಲಸೌಕರ್ಯ ವೃದ್ಧಿ, ಉದ್ಯೋಗ ಸೃಷ್ಟಿ, ಎಸ್ಇಝೆಡ್ಗಳ ಉತ್ಪಾದಕತೆ ಹೆಚ್ಚಳ, ಕೃಷಿ-ಕೈಗಾರಿಕೆಯಲ್ಲಿ ನೀರಿನ ಸದ್ಭಳಕೆ, ಕಾರ್ಮಿಕ ಕಾನೂನು ಸುಧಾರಣೆ, ಉದ್ಯಮ ಸುಧಾರಣೆ, ಉದ್ಯಮ ಸ್ನೇಹಿ ವಾತಾವರಣ ನಿರ್ಮಿಸಿದರೆ ಮಾತ್ರ ನಾವು ಚೀನಾದೆ ಪೈಪೋಟಿ ನೀಡಬಲ್ಲೆವು,” ಎಂದು ಮೆಹ್ತಾ ಅಂದಾಜಿಸಿದರು. ಐಸಿಎಐ ವಾಷಿಂಗ್ಟನ್ ಶಾಖೆಯ ಮುಖ್ಯಸ್ಥ ಸಿಎ ಗೋಕುಲ್ದಾಸ್ ಪೈ, ಭಾರತದ ತೈಲಬೆಲೆ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಮೇಲೆ ಅವಲಂಬಿತವಾಗಿರುವುದರಿಂದ ದೇಶದಲ್ಲಿ ತೈಲಬೆಲೆ ಸಧ್ಯಕ್ಕೆ ಇಳಿಯುವ ಸಾಧ್ಯತೆ ಕಡಿಮೆ. ಇದರಿಂದ ಇತರ ವಸ್ತುಗಳ ಬೆಲೆಯೂ ಏರಿಕೆಯಾಗುತ್ತಿದೆ. ಆದಾಯದಲ್ಲಿ ಯಾವುದೇ ಏರಿಕೆಯಾಗುತ್ತಿಲ್ಲ. ಇದು ಜನರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ, ಎಂದರು.
ಐಸಿಎಐ ಮಂಗಳೂರು ಶಾಖೆಯ ಪೂರ್ವತನ ಮುಖ್ಯಸ್ಥ ಸಿಎ ಎಸ್ ಎಸ್ ನಾಯಕ್ ಕಾರ್ಯಕ್ರಮ ಮುನ್ನಡೆಸಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಅಧ್ಯಕ್ಷತೆ ವಹಿಸಿದ್ದರು. ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ. ಜಯವಂತ ನಾಯಕ್, ಪದವಿ ವಿಭಾಗದ ಮುಖ್ಯಸ್ಥ ಡಾ. ಬಿ ಎಂ ರಾಮಕೃಷ್ಣ, ಐಕ್ಯೂಎಸಿ ಸಂಯೋಜಕ ಡಾ. ಸುರೇಶ್, ಸ್ನಾತಕೋತ್ತರ ವಿಭಾಗದ ಉಪನ್ಯಾಸಕರಾದ ಶಮಾ ಐಎನ್ಎಂ, ಆದರ್ಶ್ ಕಾರ್ಯಕ್ರಮ ನಿರ್ವಹಿಸಿದರು. ಐಸಿಎಐ ಮಂಗಳೂರು ಶಾಖೆ ಮುಖ್ಯಸ್ಥ ಸಿಎ ಕೆ ಸುಬ್ರಹ್ಮಣ್ಯ ಕಾಮತ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸಬಿಹಾ ಭೂಮಿಗೌಡ ಅವರಿಗೆ ಬೀಳ್ಕೊಡುಗೆ
ಮಂಗಳೂರು: ತಮ್ಮ 38 ವರ್ಷಗಳ ಅಧ್ಯಾಪನ ವೃತ್ತಿಯಿಂದ ನಿವೃತ್ತರಾದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನಿಕಟಪೂರ್ವ ಕುಲಪತಿ ಪ್ರೊ. ಸಬಿಹಾ ಭೂಮಿಗೌಡ ಅವರಿಗೆ ಮಾತೃ ಸಂಸ್ಥೆಯಾದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯಿಂದ ಶನಿವಾರ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಕಳೆದ ವರ್ಷ ಕುಲಪತಿ ಹುದ್ದೆಯಿಂದ ನಿವೃತ್ತ ಪ್ರೊ. ಸಬಿಹಾ ತಮ್ಮ ಮಾತೃ ಸಂಸ್ಥೆ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಬೋಧನೆ ಮುಂದುವರಿಸಿದ್ದರು. ಕಾರ್ಯಕ್ರಮಕ್ಕೂ ಮೊದಲು ಅಧ್ಯಯನ ಸಂಸ್ಥೆಯ ಪ್ರಸ್ತುತಿಯಲ್ಲಿ ಚಂದ್ರಶೇಖರ್ ಎಂ. ಬಿ ಮತ್ತು ಮುಸ್ತಾಫ ಕೆ ಎಚ್ ತಯಾರಿಸಿದ ‘ಹೋರಾಟದ ಹಾದಿಗೆ ಹಣತೆ ಹಿಡಿದ ಪ್ರೊ. ಸಬಿಹಾ ಭೂಮಿಗೌಡ’ ಎಂಬ ವ್ಯಕ್ತಿಚಿತ್ರ ದೃಶ್ಯಕಗಳನ್ನು ಪ್ರದರ್ಶಿಸಲಾಯಿತು.
ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಕನ್ನಡ ವಿಭಾಗದ ಪ್ರಾಧ್ಯಾಪಕ ಪ್ರೊ. ಅಭಯಕುಮಾರ್. ಕೆ ಅವರು ಮಾತನಾಡಿ, ಪ್ರೊ. ಸಬಿಹಾ ಅವರ ಸಾಮಾಜಿಕ ಮತ್ತು ಶೈಕ್ಷಣಿಕ ಬದ್ಧತೆ ನಮಗೆ ಮಾರ್ಗದರ್ಶಕ. ಅದನ್ನು ನಾವುಗಳು ಮುಂದುವರೆಸಿಕೊAಡು ಹೋಗಬೇಕು, ಎಂದರು. ಮುಖ್ಯ ಅತಿಥಿ, ಕಲಾ ನಿಖಾಯದ ಮುಖ್ಯಸ್ಥೆ ಪ್ರೊ. ಕಿಶೋರಿ ನಾಯಕ್ ಅವರು ತಮ್ಮ ಮತ್ತು ಸಬಿಹಾ ಅವರ ಒಡನಾಟದ ನೆನಪುಗಳನ್ನು ಹಂಚಿಕೊಂಡರು.
ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಡಾ. ಧನಂಜಯ ಕುಂಬ್ಳೆ, ಸಬಿಹಾ ಭೂಮಿಗೌಡ ಅವರ ಸಾಧನೆಯ ಹಾದಿಯ ಕುರಿತ ವಿವರಗಳನ್ನು ವಿಶ್ಲೇಷಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಪ್ರೊ. ಸೋಮಣ್ಣ ಹೊಂಗಳ್ಳಿ ಅವರು ಸಬಿಹಾ ಅವರ ಸಾಹಿತ್ಯ ಸೇವೆಯನ್ನು ಕೊಂಡಾಡಿದರು. ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದ ಪ್ರೊ. ಸಬಿಹಾ ಅವರು ತಮ್ಮ ವೃತ್ತಿ ಬದುಕಿನ ಆರಂಭದ ದಿನಗಳಲ್ಲಿ ಅಧ್ಯಾಪಕರ ನಡುವಿನ ಬಾಂಧವ್ಯ, ಸ್ನೇಹಮಯ ಸನ್ನಿವೇಶ, ವಿಭಾಗದ ಬೆಳವಣಿಗೆ ಇತ್ಯಾದಿಗಳನ್ನು ವಿವರಿಸುತ್ತಾ, ವಿದ್ಯಾರ್ಥಿಗಳನ್ನು ಓದುವ ಹಾದಿಗೆ ಮರಳಬೇಕು, ಎಂಬ ಕರೆಯನ್ನಿತ್ತರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಕಿಶೋರ್ ಕುಮಾರ್ ಸಿ ಕೆ ನಿವೃತ್ತರಿಗೆ ಶುಭ ಹಾರೈಸಿದರು.
ಕಾರ್ಯಕ್ರಮವನ್ನು ಚಂದನಾ ಕೆ ಎಸ್ ನಿರೂಪಿಸಿದರು. ವಿಭಾಗದ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.
“ವ್ಯವಸ್ಥಿತ ಸಂಶೋಧನಾ ವಿನ್ಯಾಸ ಸವಾಲಿನ ಕೆಲಸ”
ವಿವಿ ಕಾಲೇಜು: ಸಂಶೋಧನಾ ವಿಧಾನ ಕುರಿತ ಎಫ್ಡಿಪಿಯಲ್ಲಿ ಡಾ. ನಿಯಾಜ್ ಪಣಕಜೆ
ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ವಾಣಿಜ್ಯ ವಿಭಾಗ, ವಾಣಿಜ್ಯ ಸಂಘ ಮತ್ತು ಕನ್ಸ್ಯೂಮರ್ ಕ್ಲಬ್ ವತಿಯಿಂದ ಇತ್ತೀಚೆಗೆ ಸಂಶೋಧನಾ ವಿಧಾನದ (ರಿಸರ್ಚ್ ಡಿಸೈನ್ ಆಂಡ್ ಅಪ್ಲಿಕೇಶನ್ ಆಫ್ ರಿಸರ್ಚ್ ಟೂಲ್ಸ್) ಕುರಿತು ವೆಬಿನಾರ್ವೊಂದನ್ನು ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾನಿಲಯದ ನಿರ್ವಹಣೆ ಮತ್ತು ವಾಣಿಜ್ಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ನಿಯಾಜ್ ಪಣಕಜೆ, ವ್ಯವಸ್ಥಿತ ಸಂಶೋಧನಾ ವಿನ್ಯಾಸ ಸವಾಲಿನ ಕೆಲಸ. ಸೂಕ್ತ ಸಂಶೋಧನಾ ವಿಧಾನವಿಲ್ಲದಿದ್ದರೆ ನಮ್ಮ ಸಂಶೋಧನೆಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ವಿವರಣಾತ್ಮಕ ಸಂಶೋಧನೆಗಿಂತ ವಿಶ್ಲೇಷಣಾತ್ಮಕ ಸಂಶೋಧನೆಯ ಮೌಲ್ಯ ಹೆಚ್ಚು, ಎಂದರು.
ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಪ್ರಾಂಶುಪಾಲೆ ಡಾ. ಅನಸೂಯ ರೈ, ಯುವ ಸಂಶೋಧಕ ಡಾ. ನಿಯಾಜ್ ಪಣಕಜೆಯವರ ಸಾಧನೆ ಇತರರಿಗೆ ಸ್ಫೂರ್ತಿ ಎಂದರು.
ವಿಭಾಗದ ಉಪನ್ಯಾಸಕರಾದ ಡಾ. ಸೌಮ್ಯ ಪ್ರವೀಣ್ ಕಾರ್ಯಕ್ರಮ ನಿರೂಪಿಸಿ, ಕಾರ್ತಿಕ್ ಅತಿಥಿಗಳನ್ನು ಸ್ವಾಗತಿಸಿದರು. ಪ್ರಜ್ಞಾ ಅತಿಥಿಗಳನ್ನು ಪರಿಚಯಿಸಿದರೆ, ವಂದನಾ ಧನ್ಯವಾದ ಸಮರ್ಪಿಸಿದರು. ವಿಭಾಗದ ಮುಖ್ಯಸ್ಥ ಡಾ. ಉದಯ ಕುಮಾರ್ ಎಂ.ಎ, ವಾಣಿಜ್ಯ ಸಂಘ ಮತ್ತು ಕನ್ಸ್ಯೂಮರ್ ಕ್ಲಬ್ ಉಪಾಧ್ಯಕ್ಷ ಡಾ. ಎ. ಸಿದ್ಧಿಕ್, ವಿಭಾಗದ ಉಪನ್ಯಾಸಕರು, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳೂ ಸೇರಿದಂತೆ 200 ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link