Brief University College news with Pictures


Guru Prasad TN
Kemmannu News Network, 04-10-2021 19:10:32


Write Comment     |     E-Mail To a Friend     |     Facebook     |     Twitter     |     Print


ವಿವಿ ಕಾಲೇಜು: ರೆಡ್ಕ್ರಾಸ್ನಿಂದ ರಕ್ತದಾನ ಶಿಬಿರ

ಮಂಗಳೂರು: ವಿಶ್ವವಿದ್ಯಾಲಯ ಕಾಲೇಜು ಮಂಗಳೂರು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ದಕ್ಷಿಣ ಕನ್ನಡ, ಲೇಡಿಗೋಷನ್ ಆಸ್ಪತ್ರೆ ರಕ್ತನಿಧಿ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಇತ್ತೀಚೆಗೆ ʼರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನʼವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಪ್ರಾಂಶುಪಾಲೆ ಡಾ. ಅನಸೂಯಾ ರೈ, ಕೋವಿಡ್ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ರಕ್ತದ ಅವಶ್ಯಕತೆ ಹೆಚ್ಚಾಗಿದ್ದು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಕ್ಕೆ ಮುಂದಾಗಿರುವುದನ್ನು ಶ್ಲಾಘಿಸಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್ ಎ ಪ್ರಭಾಕರ ಶರ್ಮ, ಕೋವಿಡ್ ನಂತರ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಿದ್ದು ರಕ್ತಕ್ಕೆ ಬೇಡಿಕೆ ಹೆಚ್ಚಿದೆ ಎಂದರಲ್ಲದೆ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್ ಘಟಕದ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ ರಕ್ತದಾನ ಶಿಬಿರಾರ್ಥಿಗಳಿಗೆ ಉಚಿತವಾಗಿ ಓ 95 ಮಾಸ್ಕ್ ಒದಗಿಸಿದರು. ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಘಟಕ, ಮಾನವಿಕ ಸಂಘ, ಕ್ರೀಡಾ ಸಂಘದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ರಕ್ತದಾನ ಮಾಡಿದರು. ಯುವ ರೆಡ್ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಕುಮಾರಸ್ವಾಮಿ, ರಾಷ್ಟ್ರೀಯ ಸೇವಾ ಘಟಕದ ಅಧಿಕಾರಿ ಡಾ. ಗಾಯತ್ರಿ ಕಾರ್ಯಕ್ರಮ ನಿರ್ವಹಿಸಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಸಂಯೋಜಕ  ಪ್ರವೀಣ್ ಕುಮಾರ್, ಕ್ರೀಡಾ ಸಂಘದ ಡಾ. ಕೇಶವಮೂರ್ತಿ ಮತ್ತು ಎಂ.ಕಾಂ ಸಂಯೋಜಕ ಡಾ.ಯತೀಶ್ ಕುಮಾರ್ ಉಪಸ್ಥಿತರಿದ್ದರು.

ಸಾಹಿತ್ಯ ರಚನೆಯಾದರೆ ಭಾಷೆಯೂ ಬೆಳೆದಂತೆ: ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ ಮತ್ತು ನಂದಾದೀಪ ಪ್ರಕಾಶನ ಕನ್ಯಾನ ಜಂಟಿಯಾಗಿ ಇತ್ತೀಚೆಗೆ ವಿ.ವಿ ಕಾಲೇಜಿನ  ಡಾ.ಶಿವರಾಮ ಕಾರಂತ ಸಭಾ ಭವನದಲ್ಲಿ ʼಬೇಲಿʼ ಹಾಗೂ ʼಸಾಪೊದ ಕಣ್ಣ್ʼ ನಾಟಕ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಿದ್ದವು.

ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ, “ಸಾಹಿತ್ಯ ರಚನೆಯಾದರೆ ಭಾಷೆಯೂ ಬೆಳೆದಂತೆ. ಸಾಮಾಜಿಕ ಜಾಲತಾಣದಲ್ಲಿ ತುಳು ಬಾಷೆಯ ಬಳಕೆಯಾಗುತ್ತದೆ, ಆದರೆ ಬಾಷೆಯ ದಾಖಲಾತಿಗೆ ಕೃತಿಗಳ ರಚನೆಯಾಗಬೇಕು. ಲೇಖಕಿ ಮಾನವೀಯತೆಗೆ ಒತ್ತು ನೀಡಿರುವುದು ಇತರರಿಗೆ ಮಾದರಿ,” ಎಂದರು.

ಬ್ರಹ್ಮಶ್ರೀ ನಾರಾಯಣಗುರು ಪೀಠದ ಸಂಯೋಜಕ ಡಾ.ಗಣೇಶ್ ಅಮೀನ್ ಸಂಕಮಾರ್ ಮಾತನಾಡಿ, “ಪುರಾಣದ ಪಾತ್ರಗಳನ್ನು ಈಗಿನ ಸಾಮಾಜಿಕ ಪರಿಸ್ಥಿತಿಗೆ ಅನ್ವಯಿಸುವುದು ಸುಲಭದ ಮಾತಲ್ಲ. ಅದರಲ್ಲೂ ಸಾಹಿತಿಗಳು ನಿರ್ಲಕ್ಷಿಸಿರುವ ಶಿಖಂಡಿ ಪಾತ್ರವನ್ನು ಲೇಖಕಿ ಆರಿಸಿಕೊಂಡು ಅದನ್ನು ಬೆಳೆಸಿರುವುದು ಅದ್ಭುತ,” ಎಂದರು. ಕೃತಿ ಪರಿಚಯ ಮಾಡಿದ ವಕೀಲ ಹಾಗೂ ರಂಗನಿರ್ದೇಶಕ ಶಶಿರಾಜ್ ಕಾವೂರು, ಬೇಲಿ ಹಾಗೂ ಸಾಪೊದ ಕಣ್ಣ್ ನಾಟಕಗಳಲ್ಲಿ ನಾಟಕಕಾರನಿಗೆ ಇರಲೇಬೇಕಾದ ವಿವೇಚನಾಶಕ್ತಿ ಮತ್ತು ತರ್ಕವಿದೆ. ಸಣ್ಣ, ಚುರುಕಾದ, ಪರಿಣಾಮಕಾರಿ ನಿರೂಪಣೆ, ಜೊತೆಗೆ ಸಂಭಾಷಣೆಯಲ್ಲಿ ನಿರಂತರತೆಯಿದೆ, ಎಂದರು.

ಎಂ.ಆರ್.ಪಿ.ಎಲ್ ಪ್ರಶಿಕ್ಷಣ ವಿಭಾಗದ ಉಪಮಹಾಪ್ರಬಂಧಕಿ ವೀಣಾ.ಟಿ.ಶೆಟ್ಟಿ, ಚಿಕ್ಕ ಚಿಕ್ಕ ವಿಷಯಗಳನ್ನು ಅನುಭವಿಸುವ ಮನಸ್ಸಿದ್ದರೆ ಮಾತ್ರ ಇಂತಹ ಕೃತಿ ರಚನೆ ಸಾಧ್ಯ ಎಂದರು. ರಾಮಕೃಷ್ಣ ಮಿಷನ್ ನ ʼಸ್ವಚ್ಛ ಮನಸ್ʼ ರೂವಾರಿ ರಂಜನ್ ಬೆಳ್ಳರ್ಪಾಡಿ ಪ್ರಾದೇಶಿಕ ಭಾಷೆಗಳ ಬೆಳವಣಿಗೆಯ ಅಗತ್ಯತೆಯನ್ನು ಒತ್ತಿಹೇಳಿದರಲ್ಲದೆ, ರಾಮಕೃಷ್ಣ ಮಿಷನ್ ತುಳು ಬಾಷೆಯಲ್ಲಿ ವಿವೇಕಾನಂದರ ಸಂದೇಶಗಳ ಆಡಿಯೋ ಬುಕ್ ಹೊರತರುತ್ತಿದೆ, ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಡಾ.ಅನುಸೂಯ ರೈ, ಲೇಖಕಿ ಅಕ್ಷತಾರಾಜ್ ಪೆರ್ಲ ಅವರಿಗೆ ಶುಭಹಾರೈಸಿದರು. ತಮ್ಮ ಎರಡೂ ಕೃತಿಗಳಿಗೆ ಪ್ರೇರಣೆಯಾದ ಘಟನೆಗಳನ್ನು ವಿವರಿಸಿದ ಅಕ್ಷತಾರಾಜ್ ಪೆರ್ಲ, ಪ್ರೋತ್ಸಾಹಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. ತುಳುಪೀಠದ ಸಂಯೋಜಕ ಡಾ. ಮಾಧವ ಎಂ ಕೆ ಅತಿಥಿಗಳನ್ನು ಸ್ವಾಗತಿಸಿದರು. ಗೀತಾ ಜೈನ್ ಕಾರ್ಯಕ್ರಮ ನಿರೂಪಿಸಿದರು.

ವಿದ್ಯಾರ್ಥಿನಿಲಯದಲ್ಲಿ ಗಾಂಧೀ ಜಯಂತಿ ಆಚರಣೆ

ಮಂಗಳೂರು: ಯಾವುದೇ ವ್ಯಕ್ತಿಯ ಅಭಿವೃದ್ಧಿಗೆ ಸಮಯ ಪಾಲನೆಯ ಜೊತೆಗೆ ದೈಹಿಕ  ಹಾಗೂ  ಮಾನಸಿಕ ಸ್ವಚ್ಛತೆ ಅತ್ಯಂತ ಮಹತ್ವದ್ದು, ಎಂದು  ಮಹಾನಗರಪಾಲಿಕೆ ಸದಸ್ಯೆ ವಿಜಯಲಕ್ಷ್ಮಿ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ   ಸಂಯುಕ್ತಾಶ್ರಯದಲ್ಲಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ  ಅಶೋಕನಗರದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಹಾಗೂ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ಮಹಾತ್ಮ ಗಾಂಧೀಜಿಯವರ ಸ್ವರಾಜ್ಯ ಕಲ್ಪನೆ ಮಹತ್ತರವಾದದ್ದು ಎಂದು  ತಿಳಿಸಿದರು. ಮೇಲ್ವಿಚಾರಕರಾದ ಹೇಮಂತ್ ಕುಮಾರ್  ಅಧ್ಯಕ್ಷತೆ ವಹಿಸಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಲವು ಅಧಿಕಾರಿಗಳು, ವಸತಿ ನಿಲಯದ ಸಿಬ್ಬಂದಿ ಇದ್ದರು. ಶಂಕರ್ ಓಬಳಬಂಡಿ ಕಾರ್ಯಕ್ರಮ ನಿರೂಪಿಸಿದರೆ, ಮಾಲ್ತೇಶ್ ಧನ್ಯವಾದ ಸಮರ್ಪಿಸಿದರು.

ಅಕ್ಟೋ.8 ರಂದು ಏಳು ವಿಭಾಗಗಳಲ್ಲಿ ’ಕನಕ ಕೀರ್ತನ ಗಂಗೋತ್ರಿ’ ಗಾಯನ

ಮಂಗಳಗಂಗೋತ್ರಿ: ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ನಡೆಯಲಿರುವ ’ಕನಕ ಕೀರ್ತನ ಗಂಗೋತ್ರಿ’ ಕಾರ್ಯಕ್ರಮದ ಉದ್ಘಾಟನೆ ಅಕ್ಟೋಬರ್ 8 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

ಕರ್ನಾಟಕ ಸರಕಾರದ ರಾಷ್ಟ್ರೀಯ ಸಂತಕವಿ  ಕನಕದಾಸ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಸಮನ್ವಯಾಧಿಕಾರಿ, ಗಮಕಿ ಎಂ.ಆರ್. ಸತ್ಯನಾರಾಯಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿರುವರು. ಕುಲಸಚಿವ ಪ್ರೊ. ಕಿಶೋರ್ ಕುಮಾರ್ ಸಿ.ಕೆ, ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಪ್ರೊ.ಸೋಮಣ್ಣ ಹೊಂಗಳ್ಳಿ, ಮಂಗಳೂರು ವಿವಿಯ ಶಾಲಾ ದತ್ತು ಸ್ವೀಕಾರ ಯೋಜನೆಯ ಸಂಯೋಜಕ ಪ್ರೊ. ಪ್ರಶಾಂತ್ ನಾಯ್ಕ್, ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕ ಡಾ. ಧನಂಜಯ ಕುಂಬ್ಳೆ ಭಾಗವಹಿಸಲಿದ್ದಾರೆ.

ಕನಕ ಕೀರ್ತನ ಗಂಗೋತ್ರಿ ಕಾರ್ಯಕ್ರಮದಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಯ ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ವಿಶ್ವವಿದ್ಯಾನಿಲಯ ವ್ಯಾಪ್ತಿಯ ಸಂಯೋಜಿತ ಹಾಗೂ ಸ್ವಾಯತ್ತ ಕಾಲೇಜುಗಳ ಪದವಿ, ಸ್ನಾತಕೋತ್ತರ ಪದವಿ, (ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲಾ ವ್ಯಾಪ್ತಿಯ ರಾಜೀವ್ ಗಾಂಧಿ ವೈದ್ಯಕೀಯ ಶಿಕ್ಷಣ, ವಿಶ್ವೇಶ್ವರಯ್ಯ ತಾಂತ್ರಿಕ ಶಿಕ್ಷಣ ವಿವಿಗಳ ವಿದ್ಯಾರ್ಥಿಗಳು ಸೇರಿ), ಬೋಧಕ, ಬೋಧಕೇತರ ಹಾಗೂ ಸಾರ್ವಜನಿಕ ಎಂಬ ಏಳು ವಿಭಾಗಗಳಲ್ಲಿ ಕನಕ ಕೀರ್ತನೆ ಗಾಯನ ಕಾರ್ಯಕ್ರಮ ನಡೆಯಲಿದೆ. ಪ್ರತಿ ವಿಭಾಗದಲ್ಲಿ ಮೂರು ಅತ್ಯುತ್ತಮ ಗಾಯಕರಿಗೆ ’ಕನಕ ಸ್ಮೃತಿ’ ಕಾರ್ಯಕ್ರಮದಲ್ಲಿ  ಕನಕ ಪುರಸ್ಕಾರ ಸ್ಮರಣಿಕೆ, ಪ್ರಮಾಣ ಪತ್ರ ಹಾಗೂ ರೂ.2000 ನಗದು ಬಹುಮಾನ ನೀಡಲಾಗುವುದು.

ಆಸಕ್ತರು 9591480138 ಸಂಖ್ಯೆಯನ್ನು ಸಂಪರ್ಕಿಸಬೇಕೆಂದು ಕೇಂದ್ರದ ಪ್ರಕಟಣೆ ತಿಳಿಸಿದೆ.

Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




52nd UAE National Day 2023 - Abu Dhabi Fireworks.
View More

Final Journey Of Theresa D’Souza (79 years) | LIVE From Kemmannu | Udupi |Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!

Creating a World of Peaceful Stay!

For the Future Perfect Life that you Deserve! Contact : Rohan Corporation, Mangalore.Invest Smart and Earn Big! <P>Creating a World of Peaceful Stay! <P>For the Future Perfect Life that you Deserve! Contact : Rohan Corporation, Mangalore.


Final Journey Of Joe Victor Lewis (46 years) | LIVE From Kemmannu | Organ Donor | Udupi |Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 IssueMilagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVEEaster Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVEWay Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | UdupiWay Of Cross on Good Friday 2024 | Live From | St. Theresa’s Church, Kemmannu, Udupi | LIVE
2 BHK Flat for sale on the 6th floor of Eden Heritage, Santhekatte, Kallianpur, Udupi2 BHK Flat for sale on the 6th floor of Eden Heritage,  Santhekatte, Kallianpur, Udupi.
Maundy Thursday 2024 | LIVE From St. Theresa’s Church, Kemmannu | Udupi |Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flatKemmennu for sale 1 BHK 628 sqft, Air Conditioned  flat
Symphony98 Releases Soul-Stirring Rendition of Lenten Hymn "Khursa Thain"Symphony98 Releases Soul-Stirring Rendition of Lenten Hymn
Palm Sunday 2024 at St. Theresa’s Church, Kemmannu | LIVEPalm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From KemmannuFinal Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu ChannelCarmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu ChannelFinal Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From KemmannuValentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, UdupiRozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of UdupiAn Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special IssueDiocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | UdupiFinal Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | UdupiEarth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, KemmannuConfraternity Sunday | St. Theresa’s Church, Kemmannu
Kemmannu Cricket Match 2024 | LIVE from KemmannuKemmannu Cricket Match 2024 | LIVE from Kemmannu
Naturya - Taste of Namma Udupi - Order NOWNaturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, UdupiFocus Studio, Near Hotel Kidiyoor, Udupi