ಕೋವಿಡ್-19 ಸುರಕ್ಷಾ ಕ್ರಮಗಳೊಂದಿಗೆ ನವೆಂಬರ್ 17 ರಿಂದ ಪದವಿ ತರಗತಿಗಳು ಆರಂಭ : ಜಿಲ್ಲಾಧಿಕಾರಿ ಜಿ.ಜಗದೀಶ್
Kemmannu News Network, 12-11-2020 17:51:03
ಉಡುಪಿ : ಉಡುಪಿ ಜಿಲ್ಲೆಯಲ್ಲಿ ನವೆಂಬರ್ 17 ರಿಂದ ಅಂತಿಮ ವರ್ಷದ ಪದವಿ ತರಗತಿಗಳನ್ನು, ಸರ್ಕಾರದ ಮಾರ್ಗಸೂಚಿಯಂತೆ ಎಲ್ಲಾ ಅಗತ್ಯ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡು ತೆರೆಯಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಸರ್ಕಾರಿ/ಖಾಸಗಿ/ ಅನುದಾನಿತ/ಅನುದಾನ ರಹಿತ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗಳನ್ನು, ಪ್ರಮಾಣಿತ ಕಾರ್ಯಾಚರಣ ವಿಧಾನ ಮಾರ್ಗಸೂಚಿಯನ್ವಯ ಪ್ರಾರಂಭಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗಲು ತಮ್ಮ ಪೋಷಕರಿಂದ ನಿಗಧಿತ ನಮೂನೆಯಲ್ಲಿ ಸಹಿ ಮಾಡಿದ ಒಪ್ಪಿಗೆ ಪತ್ರದೊಂದಿಗೆ ಕಾಲೇಜಿಗೆ ಹಾಜರಾಗಬಹುದು. ತರಗತಿಗೆ ಹಾಜರಾಗದ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಕಾಲೇಜು ಆರಂಭದ ಕನಿಷ್ಠ 3 ದಿನಗಳ ಮುಂಚೆ ಎಲ್ಲಾ ಅಧ್ಯಾಪಕರು, ಕಾಲೇಜು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ 19 ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್ ವರದಿ ಪಡೆದಿರಬೆಕು, ಕಾಲೇಜಿನ ಎಲ್ಲಾ ಕೊಠಡಿಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಬೇಕು, ಕಾಲೇಜುಗಳಲ್ಲಿ ಅಧ್ಯಾಪಕರು ಕಡ್ಡಾಯವಾಗಿ ಮಾಸ್ಕ್ ಮತ್ತು ಫೇಸ್ ಶೀಲ್ಡ್ ಧರಿಸಬೇಕು, ಕಾಲೇಜುಗಳಲ್ಲಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ, ಎನ್.ಸಿ.ಸಿ ಮತ್ತು ಎನ್.ಎಸ್.ಎಸ್ ಚಟುವಟಿಕೆಗಳನ್ನು ಆರಂಭಿಸುವAತಿಲ್ಲ, ಕೊಠಡಿಯಲ್ಲಿ ಸಾಮಾಜಿಕ ಅಂತರದಲ್ಲಿ ನಿಗಧಿತ ಸಂಖ್ಯೆಯ ವಿದ್ಯಾರ್ಥಿಗಳಿಗೆ ಭೋದನೆ ಮಾಡಬೇಕು, ಅವಶ್ಯವಿದ್ದಲ್ಲಿ ಹೆಚ್ಚುವರಿ ಕೊಠಡಿ ಬಳಕೆ ಮಾಡಿಕೊಳ್ಳಬೇಕು, ಕಾಲೇಜಿನ ಪ್ರವೇಶ ಮತ್ತು ನಿರ್ಗಮನ ಸ್ಥಳದಲ್ಲಿ ಥರ್ಮಲ್ ಸ್ಕಾö್ಯನರ್ ಮತ್ತು ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು, ಕಾಲೇಜಿನ ಶೌಚಾಲಯಗಳಲ್ಲಿ ಸ್ವಚ್ಛತೆಗೆ ಗರಿಷ್ಠ ಪ್ರಮಾಣದಲ್ಲಿ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.
ಕಾಲೇಜಿನಲ್ಲಿ ಕೋವಿಡ್ ನಿಯಂತ್ರಣ ವಿಧಾನಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದರ ಜೊತೆಗೆ, ಹೆಚ್ಚಿನ ಸಂಖ್ಯೆಯಲ್ಲಿ ಜಾಗೃತಿ ಮೂಡಿಸುವ ಬ್ಯಾನರ್ ಮತ್ತು ಫಲಕಗಳನ್ನು ಅಳವಡಿಸಬೇಕು. ಕೋವಿಡ್ ನಿಯಂತ್ರಣ ಕುರಿತಂತೆ ಪಾಲಿಸಬೇಕಾದ ಕ್ರಮಗಳ ಕುರಿತು ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಚನ ಪಡೆಯಬೇಕು. ಪ್ರತೀ ಕಾಲೇಜಿನಲ್ಲಿ ಕೋವಿಡ್ ನಿಯಂತ್ರಣ ಕಾರ್ಯಪಡೆ ರಚಿಸಿ, ನಿಗಧಿತವಾಗಿ ಸಭೆಗಳನ್ನು ನಡೆಸಿ, ಸುರಕ್ಷತಾ ಕ್ರಮಗಳಲ್ಲಿ ಲೋಪವಾಗದಂತೆ ಪರಿಶೀಲಿಸಬೇಕು. ಜಿಲ್ಲಾ ಕಾರ್ಯಪಡೆಯ ಮೂಲಕ ಕಾಲೇಜುಗಳಿಗೆ ಭೇಟಿ ನೀಡಿ, ಕೈಗೊಂಡಿರುವ ಸುರಕ್ಷಾ ಕ್ರಮಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಲೋಪಗಳು ಕಂಡುಬAದಲ್ಲಿ ಸಂಬAದಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗಲು ಬಸ್ಸಿನ ಕೊರತೆಯಿದ್ದಲ್ಲಿ, ಯಾವ ರೂಟ್ಗಳಲ್ಲಿ ಬಸ್ನ ಕೊರತೆ ಇದೆ ಎನ್ನುವ ಬಗ್ಗೆ ಮಾಹಿತಿ ನೀಡಿದ್ದಲ್ಲಿ, ಆ ರೂಟಿನಲ್ಲಿ ಹೆಚ್ಚುವರಿಯಾಗಿ ಖಾಸಗಿ ಮತ್ತು ಸರ್ಕಾರಿ ಬಸ್ಗಳ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುವುದು, ಎಲ್ಲಾ ಕಾಲೇಜುಗಳಿಗೆ ಕೋವಿಡ್ ಸುರಕ್ಷತಾ ದೃಷ್ಠಿಯಿಂದ ಅಗತ್ಯ ಉಪಕರಣಗಳನ್ನು ಒಳಗೊಂಡ ಪ್ರಥಮ ಚಿಕಿತ್ಶಾ ಕಿಟ್ಗಳನ್ನು ಒದಗಿಸುವಂತೆ ಡಿ.ಹೆಚ್.ಓ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಕಾಲೇಜಿಗೆ ಬರಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲಾ ಪಠ್ಯಗಳನ್ನು ಆನ್ಲೈನ್ ಮೂಲಕ ದೊರೆಯುವಂತೆ ವ್ಯವಸ್ಥೆ ಮಾಡಬೇಕು, ವಿದ್ಯಾರ್ಥಿಗಳು ಮನೆಯಿಂದಲೇ ಊಟ ಮತ್ತು ಕುಡಿಯುವ ನೀರು ತಂದು ಬಳಸಬೇಕು, ತಮ್ಮ ವಸ್ತುಗಳನ್ನು ಇತರೆ ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳದಿರುವAತೆ ತಿಳಿಸಿದ ಜಿಲ್ಲಾಧಿಕಾರಿಗಳು, ಯಾವುದೇ ವಿದ್ಯಾರ್ಥಿಯಲ್ಲಿ ರೋಗ ಲಕ್ಷಣಗಳು ಕಂಡುಬAದಲ್ಲಿ ಕಾಲೇಜು ವತಿಯಿಂದ ಕೂಡಲೇ ಸಮೀಪದ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಿ, ಪರೀಕ್ಷೆ ಮಾಡಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ ಭಟ್, ಡಿಹೆಚ್ಓ ಡಾ.ಸುದೀರ್ ಚಂದ್ರ ಸೂಡಾ ಹಾಗೂ ಜಿಲ್ಲೆಯ ವಿವಿಧ ಸರ್ಕಾರಿ/ಖಾಸಗಿ/ ಅನುದಾನಿತ/ಅನುದಾನ ರಹಿತ ಕಾಲೇಜುಗಳ ಪ್ರಾಂಶುಪಾಲರು ಸಭೆಯಲ್ಲಿ ಉಪಸ್ಥಿತರಿದ್ದರು.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Final Journey of Lionel John Lewis (74 years) | LIVE from Milagres Cathedral | Kallianpur | Udupi
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Vespers 2024 | St. Theresa’s Church, Kemmannu
Annual Church Feast 2024 | St. Theresa’s Church, Kemmannu
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
CHRISTMAS MASS-2023 | St. Theresa’s Church | Live from Kemmannu | Udupi
Annual Day 2023 | Carmel English School, Live From Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Easter 2023 - Milrachi Lara From Milagres Cathedral, Kallianpur, Udupi
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link