ಇಂದು ರಾತ್ರಿಯಿಂದ ಸೋಮವಾರ ಮುಂಜಾನೆಯವರೆಗೆ ವೀಕೆಂಡ್ ಕರ್ಫ್ಯೂ: ಏನಿರುತ್ತೆ, ಇರಲ್ಲ ಉಡುಪಿ ಡಿಸಿ ಸ್ಪಷ್ಟನೆ
Kemmannu News Network, 18-06-2021 17:19:00
ಉಡುಪಿ: ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಇರಲಿದ್ದು ಈ ಅವಧಿಯಲ್ಲಿ ಯಾವೆಲ್ಲಾ ಸೇವೆಗಳಿಗೆ ಅವಕಾಶ ಇದೆ ಯಾವುದು ಇರಲ್ಲ ಎಂದು ಡಿಸಿ ಜಿ. ಜಗದೀಶ್ ಸ್ಪಷ್ಟಪಡಿಸಿದ್ದಾರೆ. ಸೋಮವಾರದಿಂದ ಹೊಸ ಮಾರ್ಗಸೂಚಿ ಬರಲಿದೆ ಎಂದು ಡಿಸಿ ಹೇಳಿದ್ದಾರೆ.
ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ಇತ್ಯಾದಿ, ತುರ್ತು, ಅಗತ್ಯ ಸೇವೆಗಳು ಮತ್ತು COVID-19 ಕಂಟೈನ್ಮೆಂಟ್ ಮತ್ತು ಮ್ಯಾನೇಜ್ಮೆಂಟ್ ಕರ್ತವ್ಯಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ಇಂತಹ ಸಂಸ್ಧೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು / ಸಿಬ್ಬಂದಿಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶವಿರುತ್ತದೆ.
24/7 ಸಮಯಾವಧಿಯಲ್ಲಿ ಕಾರ್ಯಚರಿಸುವ ತುರ್ತು ಮತ್ತು ಅಗತ್ಯ ಸೇವೆಗಳನ್ನು ಪೂರೈಸುವ ಎಲ್ಲಾ ಕೈಗಾರಿಕೆಗಳು / ಕಂಪನಿಗಳು / ಸಂಸ್ಥೆಗಳು ಕಾರ್ಯಾನಿರ್ವಹಿಸಲು ಅನುಮತಿ ನೀಡಲಾಗಿದೆ. ಅಂತಹ ಸಂಸ್ಥೆಗಳ ನೌಕರರು ಆಯಾ ಸಂಘ/ ಸಂಸ್ಥೆ ನೀಡುವ ಗುರುತಿನ ಚೀಟಿಯೊಂದಿಗೆ ಸಂಚಾರಿಸಬಹುದಾಗಿದೆ. ಸಾಧ್ಯವಾದಷ್ಟು ಮಟ್ಟಿಗೆ, ನೌಕರರನ್ನು ಮನೆಯಿಂದ ಕೆಲಸ ಮಾಡಲು ಪ್ರೋತ್ಸಾಹಿಸಬೇಕು.
ದೂರವಾಣಿ ಹಾಗೂ ಅಂತರ್ಜಾಲ ಸೇವೆಯನ್ನು ಪೂರೈಸುವ ನೌಕರರು ಹಾಗೂ ವಾಹನಗಳನ್ನು ಸಂಬಂಧಿಸಿದ ಸಂಸ್ಧೆಯಿಂದ ಪಡೆದಿರುವ ಸೂಕ್ತ ಗುರುತಿನ ಚೀಟಿಯೊಂದಿಗೆ ಸಂಚಾರಿಸಬಹುದಾಗಿದೆ. ಮಾಹಿತಿ ತಂತ್ರಜ್ಜಾನ ಮತ್ತು ಮಾಹಿತಿ ತಂತ್ರಜ್ಜಾನ ಆಧಾರಿತ ಕಂಪನಿ / ಸಂಸ್ದೆ ( IT and ITeS companies /organization) ಗಳಲ್ಲಿ ಕಾರ್ಯ ನಿರ್ವಹಿಸುವ ಅವಶ್ಯಕ ಸಿಬ್ಬಂದಿ ಹಾಗೂ ಕಾರ್ಮಿಕರನ್ನು ಮಾತ್ರ ಬಳಸಿಕೊಂಡು ಕಾರ್ಯನಿರ್ವಹಿಸುವುದು .ಅವರನ್ನು ಹೊರತು ಪಡಿಸಿ ಇತರೆ ಸಿಬ್ಬಂದಿ ಹಾಗೂ ಕೆಲಸಗಾರರು ಮನೆಗಳಲ್ಲಿಯೇ ಕೆಲಸ ನಿರ್ವಹಿಸುವುದು (ತಿoಡಿಞ ಜಿಡಿom home).
ರೋಗಿಗಳು ಮತ್ತು ಅವರ ಪರಿಚಾರಕರು / ತುರ್ತು ಅಗತ್ಯವಿರುವ ವ್ಯಕ್ತಿಗಳು, ವ್ಯಾಕ್ಸಿನೇಷನ್ ತೆಗೆದುಕೊಳ್ಳಲು ಉದ್ದೇಶಿಸಿರುವ ಅರ್ಹರು ಕನಿಷ್ಠ ದಾಖಲೆಗಳೊಂದಿಗೆ ಸಂಚರಿಸಲು ಅನುಮತಿಸಿದೆ.
ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಕೇಂದ್ರಗಳು, ಮತ್ತು ಪ್ರಾಣಿಗಳ ಮೇವನ್ನು ವ್ಯಾಪಾರ ಮಾಡುವ ಅಂಗಡಿಗಳಿಗೆ ಬೆಳಿಗ್ಗೆ 6.00 ರಿಂದ ಅಪರಾಹ್ನ 2.00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ. ಬೀದಿಬದಿ ವ್ಯಾಪಾರಸ್ಥರು ಬೆಳಿಗ್ಗೆ 6.00 ರಿಂದ ಅಪರಾಹ್ನ 2.00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ.ಆದರೆ ಯಾವುದೇ ತಯಾರಿಸಲಾದ ಆಹಾರ, ಪಾನಿಪುರಿ, ಚಾಟ್ಸ್ ಮುಂತಾದವುಗಳ ಮಾರಾಟಕ್ಕೆ ಅವಕಾಶವಿಲ್ಲ. ಸಾರ್ವಜನಿಕ ವಿತರಣಾ ವ್ಯವಸ್ಥೆ(PDS)ಯ ಅಂಗಡಿಗಳಿಗೆ ಅವಕಾಶವಿದೆ ಬೆಳಿಗ್ಗೆ 6.00 ರಿಂದ ಅಪರಾಹ್ನ 2.00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ.
ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳಲ್ಲಿ ಬೆಳಿಗ್ಗೆ 6.00 ರಿಂದ ಅಪರಾಹ್ನ 2.00 ರವರೆಗೆ ಪಾರ್ಸೆಲ್ ಕೊಂಡುಹೋಗಲು ಮಾತ್ರ ಅನುಮತಿಸಲಾಗಿದೆ.. ಜನರು ಮನೆಯಿಂದ ಹೊರಕ್ಕೆ ಸಂಚರಿಸುವುದನ್ನು ಕಡಿಮೆ ಮಾಡಲು (PDS) ನಿರ್ವಹಣೆಗಾಗಿರುವ ರಾಷ್ಟ್ರೀಯ ನಿರ್ದೇಶನಗಳಿಗೆ ಬದ್ಧರಾಗಿ 2್x7ಹೋಮ್ ಡೆಲಿವರಿ ಸೇವೆಗಳನ್ನು ನೀಡಲು ಪ್ರೋತ್ಸಾಹಿಸುವುದು.
ರೆಸ್ಟೋರೆಂಟ್ ಗಳಲ್ಲಿ ಮತ್ತು ತಿನಿಸುಕೇಂದ್ರಗಳಲ್ಲಿ, ಆಹಾರಗಳನ್ನು ತೆಗೆದುಕೊಂಡು ಹೋಗಲು ಮತ್ತು ಹೋಮ್ ಡೆಲಿವರಿಗಳನ್ನು ಮಾತ್ರ ಅನುಮತಿಸಲಾಗಿದೆ.
ದೂರದ ಪ್ರಯಾಣದ ರೈಲುಗಳು ಮತ್ತು ವಿಮಾನ ಪ್ರಯಾಣವನ್ನು ಅನುಮತಿಸಲಾಗಿದೆ. ವಿಮಾನ ನಿಲ್ದಾಣಕ್ಕೆ, ರೈಲ್ವೆ ನಿಲ್ದಾಣಕ್ಕ , ಬಸ್ ನಿಲ್ದಾಣಕ್ಕೆ ಹಾಗೂ ವಿಮಾನ ನಿಲ್ದಾಣಗಳಿಂದ, , ರೈಲ್ವೆ ನಿಲ್ದಾಣಗಳಿಂದ , ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಓಡಾಟವನ್ನು ಅನುಮತಿಸಿದೆ. ಪ್ರಯಾಣ ಮಾಡುವ ಸಂಧರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು / ಟಿಕೆಟುಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಮತ್ತು ಕೋವಿಡ್ 19 ಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪಾಲಿಸುವ ಷರತ್ತುಗಳೊಂದಿಗೆ ಸಂಚಾರಕ್ಕೆ ಅನುಮತಿಸಲಾಗಿದೆ.
ಈಗಾಗಲೇ ನಿಗದಿಯಾಗಿರುವ ಮದುವೆಯನ್ನು ಸರಳವಾಗಿ ಆಯಾ ಮನೆಗಳಲ್ಲಿ ಕುಟುಂಬದ ಸದಸ್ಯರು /ಸಂಬಂಧಿಕರು ಸೇರಿದಂತೆ 40 ಜನರನ್ನು ಒಳಗೊಂಡು ಕೋವಿಡ್ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ನಡೆಸಲು ಅನುಮತಿಸಲಾಗಿದೆ.
ಶವಸಂಸ್ಕಾರ /ಅಂತ್ಯಕ್ರಿಯೆಗಳನ್ನು ಗರಿಷ್ಠ 5 ಜನರೊಂದಿಗೆ ಕೋವಿಡ್ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ನಿರ್ವಹಿಸಲು ಅನುಮತಿಸಿದೆ.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link