ಉಡುಪಿ ಆನ್’ಲಾಕ್: ನೂತನ ಮಾರ್ಗಸೂಚಿಗಳನ್ನು ಹೊರಡಿಸಿದ ಜಿಲ್ಲಾಧಿಕಾರಿ


Richard D’Souza
Kemmannu News Network, 21-06-2021 16:18:45


Write Comment     |     E-Mail To a Friend     |     Facebook     |     Twitter     |     Print


ಉಡುಪಿ: ರಾಜ್ಯ ಸರಕಾರ ಇಂದು ಆರು ಜಿಲ್ಲೆಗಳಲ್ಲಿ ಆನ್ಲಾಕ್ ಘೋಷಿಸಿದೆ.ಕೊರೊನಾ ಪಾಸಿಟಿವಿಟಿ ದರ ಶೇ. 5ಕ್ಕಿಂತ ಕೆಳಗಿಳಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ (ಜೂ. 21) ಅನ್ ಲಾಕ್ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅನ್ ಲಾಕ್ ಮಾರ್ಗಸೂಚಿ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕೋವಿಡ್ – 19 (ಕೋರೊನಾ ವೈರಾಣು ಕಾಯಿಲೆ – 2019) ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಕಾಲ ಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಕಟ್ಟು ನಿಟ್ಟಿನ ನಿರ್ಬಂಧಗಳ ಪರಿಣಾಮಕಾರಿ ಅನುಷ್ಟಾನದಿಂದಾಗಿ ಕೋವಿಡ್ ಪ್ರಕರಣಗಳ ದರವು ಗಣನೀಯವಾಗಿ ಇಳಿಕೆಯಾಗಿದ್ದು , ಉಡುಪಿ ಜಿಲ್ಲೆಯಲ್ಲಿ ಪಾಸಿಟಿವಿಟಿ ಶೇಕಡಾ 5 ರಲ್ಲಿದೆ.

ಪ್ರಸ್ತುತ ಜಿಲ್ಲೆಯಲ್ಲಿ ಸರ್ಕಾರದ ಉಲ್ಲೇಖ(1) ಆದೇಶನ್ವಯ ಉಲ್ಲೇಖ(2) ಆದೇಶದಂತೆ ದಿನಾಂಕ – 21.06.2021 ವರೆಗೆ ಕೋವಿಡ್ ನಿಯಂತ್ರಣಕ್ಕಾಗಿ ಮಾರ್ಗಸೂಚಿಗಳು ಜಾರಿಯಲ್ಲಿದ್ದು, ಜಿಲ್ಲೆಗಳ ಕೋವಿಡ್ ಪಾಸಿಟಿವಿಟಿ ದರದ ಆಧಾರದ ಮೇಲೆ, ಕೋವಿಡ್ ನಿಯಂತ್ರಣಕ್ಕಾಗಿ ವರೆಗೆ ತೆಗೆದುಕೊಳ್ಳಲಾದ ಎಲ್ಲಾ ಕಟ್ಟು ನಿಟ್ಟಿನ ಕ್ರಮಗಳಿಂದ ಸಾಧಿಸಲಾದ ಗಣನೀಯ ಲಾಭವನ್ನು ಕಾಪಾಡಿಕೊಳ್ಳಲು ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಹಂತ ಹಂತವಾಗಿ ಕೆಲವೊಂದು ಪ್ರಮುಖ ಮತ್ತು ಆರ್ಥಿಕ ಮತ್ತು ಇತರ ಚಟುವಟಿಕೆಗಳಿಗೆ ಅನುಮತಿ ನೀಡಿ ಸರ್ಕಾರದ ಉಲ್ಲೇಖ(3) ಆದೇಶದಲ್ಲಿ ದಿನಾಂಕ: 05.07.2021 ವರೆಗಿನ ಮಾರ್ಗಸೂಚಿಗಳನ್ನು ಹೊರಡಿಸುತ್ತದೆ. ಸದ್ರಿ ಆದೇಶದಲ್ಲಿ ಉಡುಪಿ ಜಿಲ್ಲೆಯನ್ನು Category 2 ರಲ್ಲಿ ಪರಿಗಣಿಸಿ ಹಿಂದಿನ ಮಾರ್ಗಸೂಚಿಗಳನ್ನು ಮುಂದುವರೆಸಲು ಆದೇಶವಾಗಿದ್ದು , ಉಲ್ಲೇಖ(4) ಆದೇಶದಂತೆ ಉಡುಪಿ ಜಿಲ್ಲೆಯನ್ನು Category 1 ಜಿಲ್ಲೆಯೊಂದಿಗೆ ಸೇರ್ಪಡೆಗೊಳಿಸಿ ಆದೇಶಿಸಿದ್ದು , ಹೆಚ್ಚಿನ ಚಟುವಟಿಕೆಗಳಿಗೆ ಅವಕಾಶ ನೀಡಿರುತ್ತದೆ.

A) ಜಿಲ್ಲೆಯಾದ್ಯಂತ ಸಂಜೆ 7.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯ ವರೆಗೆ ಅನುಬಂಧ- A ರಲ್ಲಿನ ಮಾರ್ಗಸೂಚಿಗಳಂತೆ ಕಟ್ಟುನಿಟ್ಟಿನ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ.

B) ಜಿಲ್ಲೆಯಾದ್ಯಾಂತ ಶುಕ್ರವಾರ ಸಂಜೆ 7.00 ಗಂಟೆಯಿಂದ ಸೋಮವಾರ ಬೆಳಿಗ್ಗೆ 5.00 ಗಂಟೆಯ ವರೆಗೆ ಅನುಬಂಧ – B ರಲ್ಲಿನ ಮಾರ್ಗಸೂಚಿಗಳನ್ವಯ ಕಟ್ಟುನಿಟ್ಟಿನ ವಾರಂತ್ಯದ ಕರ್ಪ್ಯೂ ಜಾರಿಯಲ್ಲಿರುತ್ತದೆ.

C) ಜಿಲ್ಲೆಯಲ್ಲಿ ಬಸ್ಸುಗಳ ಸಂಚಾರವನ್ನು ಆಸನ ಸಾಮರ್ಥ್ಯದ 50% ರೊಂದಿಗೆ ಕೋವಿಡ್‌ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ, ಬಸ್‌ ಗಳಲ್ಲಿ ನಿಂತುಕೊಂಡು ಪ್ರಯಾಣ ಮಾಡಲು ನಿರ್ಭಂಧಿಸಲಾಗಿದೆ.

ಕೋವಿಡ್ – 19 ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಉಲ್ಲೇಖ(1) ಸರ್ಕಾರದ ಆದೇಶ ಮತ್ತು ಸೇರ್ಪಡೆ ಆದೇಶಗಳನ್ನು ಯಥಾವತ್ತಾಗಿ ಹಾಗೂ ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಉಲ್ಲೇಖ (2), ಆದೇಶವನ್ನು ದಿನಾಂಕ: 05.07.2021 ಪೂರ್ವಹ್ನ 5.00 ಗಂಟೆಯವರೆಗೆ ಮುಂದುವರಿಸಲಾಗಿದೆ. ಹಾಗೂ ಕೆಳಕಂಡ ಹೆಚ್ಚುವರಿ ಚಟುವಟಿಕೆಗಳನ್ನು ಅನುಮತಿಸಲಾಗಿದೆ.

1. ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು, ಎಲ್ಲಾ ಉತ್ಪಾದನಾ ಘಟಕಗಳು/ ಕೈಗಾರಿಕಾ ಸಂಸ್ಥೆಗಳು /ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮರ್ಥ್ಯದ 50% ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯಾಚರಿಸಲು ಅನುಮತಿಸಲಾಗಿದೆ.ಆದಾಗ್ಯೂ ಉಡುಪು(Garment) ತಯಾರಿಕೆಯಲ್ಲಿ ತೊಡಗಿರುವ ಘಟಕಗಳು/ ಕೈಗಾರಿಕಾ ಸಂಸ್ಥೆಗಳು / ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮರ್ಥ್ಯದ 30% ರಷ್ಟು ಸಿಬ್ಬಂದಿಗಳೊಂದಿಗೆ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಕಾರ್ಯಚರಿಸಲು ಅನುಮತಿಸಲಾಗಿದೆ.

2. ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸದೇ ಎಲ್ಲ ಅಂಗಡಿಗಳಿಗೆ ( Essential /Non – Essential) ಪ್ರತಿ ದಿನ ಬೆಳಿಗ್ಗೆ 6 ರಿಂದ ಸಂಜೆ 5 ಗಂಟೆಯವರೆಗೆ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ತೆರೆಯಲು ಅನುಮತಿಸಲಾಗಿದೆ. ಆದರೆ ಹವಾನಿಯಂತ್ರಿತ ಅಂಗಡಿಗಳು , ವಾಣಿಜ್ಯ ಸಂಕೀರ್ಣ, ಮಾಲ್ ಗಳು ಕಾರ್ಯನಿರ್ವಹಿಸಲು ಅವಕಾಶವಿರುವುದಿಲ್ಲ.ಮನೆಯಿಂದ ಸಾರ್ವಜನಿಕರು ಹೊರ ಬರುವುದನ್ನು ಕಡಿಮೆ ಮಾಡಲು ಕೋವಿಡ್ ನಿರ್ವಹಣೆಗಾಗಿರುವ ರಾಷ್ಟೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಎಲ್ಲಾ ವಸ್ತುಗಳ 24*7 ಹೋಂ ಡೆಲಿವರಿ ಸೇವೆಗಳನ್ನು ಪ್ರೋತ್ಸಾಹಿಸಲಾಗುವುದು.(ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸಿದ್ದಲ್ಲಿ ಸದ್ರಿ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ವಹಿಸಲಾಗುವುದು ಮತ್ತು ಎಲ್ಲಾ ಅಂಗಡಿಗಳಲ್ಲಿ ಮಾಲಿಕರು /ಸಿಬ್ಬಂದಿ ಮತ್ತು ಗ್ರಾಹಕರು ಮಾಸ್ಕ್‌ ಧರಿಸುವದು ಕಡ್ಡಾಯ, ಸಾಮಾಜಿಕ ಅಂತರ ಕಾಪಾಡಲು ಮಾರ್ಕುಗಳನ್ನು ಹಾಕುವುದು ಕಡ್ಡಾಯವಾಗಿದೆ.ಯಾವುದೇ ಅಂಗಡಿಯಲ್ಲಿ ಜನ ಜಂಗುಳಿ ಇರತಕ್ಕದ್ದಲ್ಲ.ತಲ್ಲಪಿದಲ್ಲಿ ಅಂತಹ ಅಂಗಡಿಗಳ ಪರವಾನಿಗೆಯನ್ನು ಕೋವಿಡ್‌ ಮುಗಿಯುವ ತನಕ ಅಮಾನತ್ತಿನಲ್ಲಿಡಲಾಗುವುದು)

3. ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸದೇ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಹೋಟೆಲ್‌, ರೆಸ್ಟೋರೆಂಟ್‌, ಬಾರ್ ಮತ್ತು ಕ್ಲಬ್ ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತುಕೊಂಡು ಆಹಾರ ಸೇವಿಸಲು ಬೆಳಿಗ್ಗೆ 6-00 ಗಂಟೆಯಿಂದ ಸಂಜೆ 5.00 ಗಂಟೆವರೆಗೆ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಆದರೆ ಪಬ್ ಗಳಿಗೆ ಅನುಮತಿ ಇರುವುದಿಲ್ಲ. ಶೇ 50 ಸಾಮರ್ಥ್ಯದೊಂದಿಗೆ ಲಾಡ್ಜ್‌ ಗಳು ಮತ್ತು ರೆಸಾರ್ಟ್‌ ಗಳಿಗೆ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಕಡ್ಡಾಯವಾಗಿ ಅನುಸರಿಸುವ ಷರತ್ತುಗಳೊಂದಿಗೆ ಅವಕಾಶ ನೀಡಲಾಗಿದೆ.(ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸಿದ್ದಲ್ಲಿ ಸದ್ರಿ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ವಹಿಸಲಾಗುವುದು)

4. ಚಲನಚಿತ್ರ/ ಟಿ. ವಿ ಧಾರವಾಹಿಗಳಿಗೆ ಸಂಬಂಧಿಸಿದಂತೆ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.

5. ಕಟ್ಟಡ ನಿರ್ಮಾಣ ಮತ್ತು ದುರಸ್ಥಿಗೆ ( Construction activities/ Civil repair ) ಅನುಮತಿಸಿದೆ.ಅದಕ್ಕೆ ಸಂಬಂಧಿಸಿದ ಸಾಮಗ್ರಿಗಳೊಂದಿಗೆ ವ್ಯವಹರಿಸುವ ಅಂಗಡಿಗಳು / ಸಂಸ್ಥೆಗಳಿಗೆ ಬೆಳಿಗ್ಗೆ 6-00 ಗಂಟೆಯಿಂದ ಸಂಜೆ 5-00 ಗಂಟೆಯವರೆಗೆ ಕೋವಿಡ್ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಅನುಮತಿಸಿದೆ.

6. ವಾಕಿಂಗ್ ಮತ್ತು ಜಾಗಿಂಗ್‌ ಗಾಗಿ ಬೆಳಿಗ್ಗೆ 5 ರಿಂದ ಸಂಜೆ 6 ಗಂಟೆಯವರೆಗೆ ಉದ್ಯಾನವನಗಳನ್ನು ಕೋವಿಡ್‌ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ತೆರೆಯಲು ಅನುಮತಿಸಿದೆ. ಆದರೆ ಯಾವುದೇ ಗುಂಪು ಚಟುವಟಿಕೆಗಳನ್ನು ಅನುಮತಿಸಲಾಗುವುದಿಲ್ಲ.

7. ಶೇ. 50 ಸಾಮರ್ಥ್ಯದೊಂದಿಗೆ ಕೋವಿಡ್‌ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಮತ್ತು ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ಜಿಮ್‌ ಗಳಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.

8. ಗರಿಷ್ಠ 2 ಪ್ರಯಾಣಿಕರೊಂದಿಗೆ ಟ್ಯಾಕ್ಸಿಗಳು ಮತ್ತು ಆಟೋ ರಿಕ್ಷಾಗಳಿಗೆ ಸಂಚರಿಸಲು ಅನುಮತಿಸಿದೆ.

9. ಕೋವಿಡ್‌ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಮತ್ತು ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆಗಳಿಗೆ ಅನುಮತಿ ನೀಡಲಾಗಿದೆ.( ಒಳಾಂಗಣ ಕ್ರೀಡೆಗಳಿಗೆ ಅವಕಾಶ ಇರುವುದಿಲ್ಲ )

10. ಕೋವಿಡ್‌ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಅನುಸರಿಸುವ ಷರತ್ತುಗಳೊಂದಿಗೆ ಎಲ್ಲ ಸರ್ಕಾರಿ/ ಖಾಸಗಿ ಕಛೇರಿಗಳಿಗೆ ಸಿಬ್ಬಂದಿಯ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ. ಆದಾಗ್ಯೂ, ಅಗತ್ಯ ಮತ್ತು ತುರ್ತು ಸೇವೆಗಳೊಂದಿಗೆ ವ್ಯವಹರಿಸುವ ಕಚೇರಿಗಳಿಗೆ ಅವುಗಳ ಅಗತ್ಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಲು ಅನುಮತಿಸಿದೆ. ಸಾಧ್ಯವಾದಷ್ಟು ಮನೆಯಿಂದ ಕೆಲಸವನ್ನು ನಿರ್ವಹಿಸಲು ಪ್ರೋತ್ಸಾಹಿಸುವುದು.

11. ಘನ ತ್ಯಾಜ್ಯ ವಿಲೇವಾರಿ ಸೇರಿದಂತೆ ಆರೋಗ್ಯ ವಲಯಕ್ಕೆ ಸಂಬಂಧಿಸಿದ ಕೌಶಲ್ಯ ತರಬೇತಿಗಳಿಗೆ ಅನುಮತಿಸಲಾಗಿದೆ.

12. ಮದುವೆಗಳು: “ಈಗಾಗಲೇ ನಿಗದಿಯಾಗಿರುವ ಮದುವೆಯನ್ನು ಸರಳವಾಗಿ ಆಯಾ ಮನೆಗಳಲ್ಲಿ ಕುಟುಂಬದ ಸದಸ್ಯರು /ಸಂಬಂಧಿಕರು ಸೇರಿದಂತೆ 40 ಜನರನ್ನು ಒಳಗೊಂಡು ಕೆಳಗೆ ನಿಗದಿಪಡಿಸಿದ ಷರತ್ತಿಗೊಳಪಟ್ಟು ನಡೆಸಲು ಅನುಮತಿಸಲಾಗಿದೆ.

ವಿವಾಹಗಳನ್ನು ಆಯೋಜಿಸುವವರು ವಿವಾಹ ಆಮಂತ್ರಣ ಪತ್ರ ಅಥವಾ ಇತರ ಯಾವುದೇ ಸಂಬಂಧಿತ ದಾಖಲೆಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಸಲ್ಲಿಸಬೇಕು.

ಅರ್ಜಿಯ ಸ್ವೀಕೃತಿಯ ಮೇರೆಗೆ, ತಹಶೀಲ್ದಾರರು ಪ್ರತಿ ಮದುವೆ ಕಾರ್ಯಕ್ರಮಕ್ಕೆ 40 ಪಾಸ್‌ಗಳನ್ನು ನೀಡಬೇಕು

ಪಾಸ್ ಹೊಂದಿರುವ ಜನರಿಗೆ ಮಾತ್ರ ಮದುವೆ ಕಾರ್ಯಕ್ಕೆ ಹಾಜರಾಗಲು ಅವಕಾಶವಿರುತ್ತದೆ ಮತ್ತು ಪಾಸ್ ಅನ್ನು ವರ್ಗಾಯಿಸಲು ಅವಕಾಶವಿರುವುದಿಲ್ಲ.

ಮದುವೆ ಕಾರ್ಯಕ್ಕೆ ಹಾಜರಾಗುವ ಜನರು ಕೋವಿಡ್‌ ಸಮುಚಿತ ವರ್ತನೆಯನ್ನು (COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಅವರ ಪಾಸ್‌ಗಳನ್ನು ಅಧಿಕೃತ ಪರಿಶೀಲನಾ ಅಧಿಕಾರಿಗಳಿಗೆ ತೋರಿಸುವುದು.

13. ಶವಸಂಸ್ಕಾರ /ಅಂತ್ಯಕ್ರಿಯೆಗಳನ್ನು ಗರಿಷ್ಠ 5 ಜನರೊಂದಿಗೆ ಕೋವಿಡ್‌ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ನಿರ್ವಹಿಸಲು ಅನುಮತಿಸಿದೆ.

ಮೇಲಿನ ಆದೇಶಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, Disaster Management Act 2005 , Karnataka Epidemic Diseases act 2020 ಮತ್ತು IPC ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮಕೈಗೊಳ್ಳಲಾಗುವುದು. ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆಗಳಿಗೆ ಅನ್ವಯಿಸುವುದಿಲ್ಲ.

 

 


Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




52nd UAE National Day 2023 - Abu Dhabi Fireworks.
View More

Rozaricho Gaanch April, 2024 - Ester issueRozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!

Creating a World of Peaceful Stay!

For the Future Perfect Life that you Deserve! Contact : Rohan Corporation, Mangalore.Invest Smart and Earn Big! <P>Creating a World of Peaceful Stay! <P>For the Future Perfect Life that you Deserve! Contact : Rohan Corporation, Mangalore.


Final Journey Of Joe Victor Lewis (46 years) | LIVE From Kemmannu | Organ Donor | Udupi |Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 IssueMilagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVEEaster Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVEWay Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | UdupiWay Of Cross on Good Friday 2024 | Live From | St. Theresa’s Church, Kemmannu, Udupi | LIVE
2 BHK Flat for sale on the 6th floor of Eden Heritage, Santhekatte, Kallianpur, Udupi2 BHK Flat for sale on the 6th floor of Eden Heritage,  Santhekatte, Kallianpur, Udupi.
Maundy Thursday 2024 | LIVE From St. Theresa’s Church, Kemmannu | Udupi |Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flatKemmennu for sale 1 BHK 628 sqft, Air Conditioned  flat
Symphony98 Releases Soul-Stirring Rendition of Lenten Hymn "Khursa Thain"Symphony98 Releases Soul-Stirring Rendition of Lenten Hymn
Palm Sunday 2024 at St. Theresa’s Church, Kemmannu | LIVEPalm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From KemmannuFinal Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu ChannelCarmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu ChannelFinal Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From KemmannuValentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, UdupiRozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of UdupiAn Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special IssueDiocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | UdupiFinal Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | UdupiEarth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, KemmannuConfraternity Sunday | St. Theresa’s Church, Kemmannu
Kemmannu Cricket Match 2024 | LIVE from KemmannuKemmannu Cricket Match 2024 | LIVE from Kemmannu
Naturya - Taste of Namma Udupi - Order NOWNaturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, UdupiFocus Studio, Near Hotel Kidiyoor, Udupi