ಶ್ರೀಮತಿ ಹಾಲಾಡಿ ಲಕ್ಷ್ಮೀದೇವಿ ವಾಸುದೇವ ಕಾಮತ, ಕುಂದಾಪುರ ಸರಸ್ವತಿ ಪ್ರಭಾ ಪುರಸ್ಕಾರ -2024ಕ್ಕೆ ಆಯ್ಕೆ
Kemmannu News Network, 04-05-2024 14:08:05
ಕೊಂಕಣಿ ಭಾಷೆ, ಸಾಹಿತ್ಯ, ಕಲೆ, ಲೋಕವೇದ ಇತ್ಯಾದಿ ಕ್ಷೇತ್ರಕ್ಕೆ ಹಾಗೂ ತಮ್ಮ ಸುತ್ತಲ ಸಮಾಜಕ್ಕೆ ಅಪಾರ ದೇಣಿಗೆ, ಸೇವ ನೀಡಿಯೂ ಕೊಂಕಣಿ ಭಾಷಾ ಸಮೂಹದಿಂದ ಗುರುತಿಸಲ್ಪಡದ ಅಪಾರ ಸಾಧಕರು ನಮ್ಮ ನಡುವೆ ಇದ್ದಾರೆ. ಅವರು ಕೊಂಕಣಿ ಭಾಷೆಗೆ ೩೦ರಿಂದ ೫೦ ವರ್ಷಗಳ ಕಾಲ ಗಮನಾರ್ಹ ಸೇವೆಯನ್ನು ಸಲ್ಲಿಸಿದ್ದಾರೆ ಆದರೂ ನಾನಾ ಕಾರಣಗಳಿಂದ ಅವರು ಯಾವುದೇ ಪ್ರಶಸ್ತಿ, ಪುರಸ್ಕಾರಗಳಿಂದ ವಂಚಿತರಾಗಿದ್ದಾರೆ.
ಕರ್ನಾಟಕದಲ್ಲಿರುವ ಇಂಥಹ ಕೊಂಕಣಿ ಸಾಧಕರನ್ನು ಗುರುತಿಸಿ ಗೌರವಿಸ ಬೇಕೆನ್ನುವ ಉದ್ದೇಶದಿಂದ ಹುಬ್ಬಳ್ಳಿಯಿಂದ ನಿಯಮಿತವಾಗಿ ಪ್ರಕಟಗೊಳ್ಳುತ್ತಾ
ಇದೀಗ ಪ್ರಕಟಣೆಯ ೩೫ ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ನಿಯಮಿತ ಪ್ರಕಟಣೆಯ ೩೬ನೇ ವರ್ಷಕ್ಕೆ ಪಾದಾರ್ಪಣೆಗೊಂಡಿರುವ ``ಸರಸ್ವತಿ ಪ್ರಭಾ ಕೊಂಕಣಿ ಮಾಸಿಕ ಪತ್ರಿಕೆಯು ೨೦೨೨ರಿಂದ ವಯೋವೃದ್ಧ ಕೊಂಕಣಿ ಭಾಷಾ ಸಾಧಕರನ್ನು ಆಯ್ಕೆ ಮಾಡಿ ``ಸರಸ್ವತಿ ಪ್ರಭಾ ಪುರಸ್ಕಾರವನ್ನು ನೀಡುತ್ತಾ ಬಂದಿದೆ. ೨೦೨೪ನೇ ಸಾಲಿನಲ್ಲಿ ಈ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಕುಂದಾಪುರದ ೭೫ ವರ್ಷ ಪ್ರಾಯದ ಶ್ರೀಮತಿ ಹಾಲಾಡಿ ಲಕ್ಷ್ಮೀದೇವಿ ವಾಸುದೇವ ಕಾಮತ್ ಅವರನ್ನು ಆಯ್ಕೆ ಮಾಡಲಾಗಿದೆ.
ಕೊಂಕಣಿ ಲೇಖನ, ಸಂಗೀತ, ನಾಟಕ ರಚನೆ ಮತ್ತು ನಿರ್ದೇಶನ, ಜಾನಪದ ಸಾಹಿತ್ಯಗಳ ಸಂಗ್ರಹದೊಂದಿಗೆ ಕೊಂಕಣಿಯಲ್ಲಿ ಉಪನ್ಯಾಸ, ಭಜನೆ, ಕುಂದಾಪುರ ಪರಿಸರದಲ್ಲಿ ಹಲವಾರು ಕೊಂಕಣಿ ಹಾಗೂ ಇತರ ಸಂಘಟನೆಗಳನ್ನು ಕಟಿ ಸಮಾಜ ಸೇವೆ ಇತ್ಯಾದಿ ಹಲವಾರು ಕ್ಷೇತ್ರಗಳಲ್ಲಿ ಕೈಯಾಡಿಸಿ ಗುರುತಿಸಿ ಕೊಂಡಿರುವ ಶ್ರೀಮತಿ ಹಾಲಾಡಿ ಲಕ್ಷ್ಮೀದೇವಿ ಕಾಮತ ಅವರು ಸತತ ಕಳೆದ ಐದು ದಶಕಗಳಿಗಿಂತ ಅಧಿಕ ಸಮಯದಿಂದ ಕೊಂಕಣಿ- ಕನ್ನಡ ಭಾಷೆಗಳೆರಡಕ್ಕೂ ಸೇವೆ ಸಲ್ಲಿಸುತ್ತಾ ಬಂದಿರುತ್ತಾರೆ.
ಅವರ ಹಲವಾರು ಕೊಂಕಣಿ ಕೃತಿಗಳು ಪ್ರಕಟಗೊಂಡಿವೆ. ಅವರು ಸಂಘ-ಸಂಸ್ಥೆಗಳನ್ನೂ ಕಟ್ಟಿ ಪ್ರತಿಭಾ ಪುರಸ್ಕಾರ, ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಪಾರಂಪರಿಕ ಕಲೆ, ಸಂಸ್ಕೃತಿ, ಆಹಾರ, ಸಂಸ್ಕಾg, ಸಂಸ್ಕೃತಿಗಳ ರಕ್ಷಣೆಗೆ ಸಹಕಾರಿಯಾಗುವಂತಹ ಹಲವಾರ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಆಕಾಶವಾಣಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ಹಲವಾರು ಸಮಾವೇಶ, ಗೋಷ್ಟಿಗಳಲ್ಲಿ ಭಾಗವಹಿಸಿ ವಿಚಾರ ಮಂಡಿಸಿದ್ದಾರೆ. ನಾಡಿನ ಹಲವಾರು ಕೊಂಕಣಿ, ಕನ್ನಡ ಪತ್ರಿಕೆಗಳಲ್ಲಿ ಇವರ ಲೇಖನ, ಕವನಗಳು ಪ್ರಕಟಗೊಂಡಿವೆ.
ಸರಸ್ವತಿ ಪ್ರಭಾ ಪುರಸ್ಕಾರ - ೨೦೨೩ ಕ್ಕೆ ಆಯ್ಕೆಯಾದ ಶ್ರೀಮತಿ ಹಾಲಾಡಿ ಲಕ್ಷ್ಮೀದೇವಿ ವಾಸುದೇವ ಕಾಮತ, ಕುಂದಾಪುರ ಇವರಿಗೆ ಸರಸ್ವತಿ ಪ್ರಭಾ ಪತ್ರಿಕೆಯ ವತಿಯಿಂದ ಶಾಲು, ಸ್ಮರಣಿಕೆ, ಹಾರ, ಸನ್ಮಾನ ಪತ್ರ, ಫಲತಾಂಬೂಲ ಹಾಗೂ ರೂ. ೫೦೦೧/-(ರೂ. ಐದು ಸಾವಿರದ ಒಂದು) ಗಳ ನಗದು ಹಣದೊಂದಿಗೆ ಸದ್ಯದಲ್ಲಿಯೇ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸರಸ್ವತಿ ಪ್ರಭಾ ಪತ್ರಿಕೆಯ ಸಂಪಾದಕರಾದ ಆರಗೋಡು ಸುರೇಶ ಶೆಣೈಯವರು ಪ್ರಕಟಣೆಯು ಮೂಲಕ ತಿಳಿಸಿದ್ದಾರೆ.
ಕಳೆದ ೨೦೨೨ರ ಸಾಲಿನಲ್ಲಿ ೨೫ಕ್ಕಿಂತ ಅಧಿಕ ಸಾಹಿತ್ಯ ಕೃತಿಗಳನ್ನು ಬರೆದ (ಅವುಗಳಲ್ಲಿ ೬ ಕೊಂಕಣಿ ಕೃತಿಗಳು) ಬೆಂಗಳೂರಿನ ಕೊಂಕಣಿ ಸಹಿತ ಕನ್ನಡ, ಇಂಗ್ಲೀಷ್, ಹಾಗೂ ಹಿಂದಿ ಸೇರಿ ಚತುರ್ಭಾಷಾ ಸಾಹಿತಿ ೮೦ಕ್ಕಿಂತ ಅಧಿಕ ವಯಸ್ಸಾದ ವಯೋವೃದ್ಧ ಡಾ|| ಮೋಹನ ಜಿ. ಶೆಣೈ ಮತ್ತು ಕೊಂಕಣಿ ಸಾಹಿತ್ಯ ಹಾಗೂ ರಂಗಕಲೆಗೆ ಅಪಾರ ಸೇವೆ ಸಲ್ಲಿಸಿ, ಕೊಂಕಣಿ ಹಾಗೂ ಕನ್ನಡ ಭಾಷೆಯಲ್ಲಿ ೩೦ಕ್ಕಿಂತ ಅಧಿಕ ನಾಟಕಗಳನ್ನು ಬರೆದ ೭೫ ವರ್ಷ ವಯಸ್ಸಿನ ಶಿರಸಿಯ ಶ್ರೀ ಅನಿಲ ಪೈ ಇವರಿಗೆ, ೨೦೨೩ನೇ ಸಾಲಿನಲ್ಲಿ ಕೊಂಕಣಿಯ ಹೆಸರಾಂತ ಬರಹಗಾರ್ತಿ, ಕೊಂಕಣಿ ಜಾನಪದ ಸಾಹಿತ್ಯ ರಕ್ಷಕಿಯಾದ ೮ ಕೊಂಕಣಿ ಕೃತಿಗಳನ್ನು ಪ್ರಕಟಿಸಿರುವ ೭೭ ವರ್ಷ ವಯಸ್ಸಿನ ಶಿರಸಿಯ ಶ್ರೀಮತಿ ಜಯಶ್ರೀ ನಾಯಕ ಎಕ್ಕಂಬಿ
ಇವರಿಗೆ ಸರಸ್ವತಿ ಪ್ರಭಾ ಪುರಸ್ಕಾರವನ್ನು ಪ್ರಧಾನ ಮಾಡಿರುವುದನ್ನು ಇಲ್ಲಿ ನೆನಪಿಸಿಕೊಳ್ಳ ಬಹುದು.
- ಆರಗೋಡು ಸುರೇಶ ಶೆಣೈ,
ಸಂಪಾದಕರು
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Land/Houses for Sale in Kaup, Manipal, Kallianpur, Santhekatte, Uppor, Nejar, Kemmannu, Malpe, Ambalpady.
Final Journey of Emilian Bridget D’Souza (80 years) | LIVE from Kemmannu | Udupi |
2 BHK Flat for sale on the 6th floor of Eden Heritage, Santhekatte, Kallianpur, Udupi
Agricultural Land at Alevoor and Malpe (UDUPI) for Sale - Contact Direct to 9008199430.
Final Journey of Judith Lewis (91 years) | LIVE From Kallianpur
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link