ಜಿ.ಪಂ., ತಾ.ಪಂ. ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳನ್ನೂ ಗೆಲ್ಲುವ ಗುರಿ: ಕುಯಿಲಾಡಿ


Richard D’Souza
Kemmannu News Network, 14-04-2021 15:43:07


Write Comment     |     E-Mail To a Friend     |     Facebook     |     Twitter     |     Print


ಉಡುಪಿ : ಈಗಾಗಲೇ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಚುನಾವಣೆಗಳಲ್ಲೂ ಜಯಭೇರಿ ಗಳಿಸಿರುವ ಬಿಜೆಪಿ ಮುಂಬರಲಿರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ವಿಕ್ರಮ ಸಾಧನೆಗೈಯಲಿದೆ. ಜಿಲ್ಲೆಯ ಎಲ್ಲಾ 30 ಜಿಲ್ಲಾ ಪಂಚಾಯತ್ ಮತ್ತು 7 ತಾಲೂಕು ಪಂಚಾಯತ್ ಕ್ಷೇತ್ರಗಳನ್ನು ಗೆಲ್ಲುವ ಗುರಿಯೊಂದಿಗೆ ಬಿಜೆಪಿ ಜಿ.ಪಂ. ಮತ್ತು ತಾ.ಪಂ. ಚುನಾವಣೆಯನ್ನು ಸಮರ್ಥವಾಗಿ ಎದುರಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

 

ಅವರು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 

ಪಕ್ಷದ ಸಂಘಟನಾತ್ಮಕ ಚÀಟುವಟಿಕೆಗಳು ಭರದಿಂದ ಸಾಗುತ್ತಿವೆ. ಎಪ್ರಿಲ್ 6 ರಂದು ಬಿಜೆಪಿ ಸಂಸ್ಥಾಪನಾ ದಿನವನ್ನು ಜಿಲ್ಲೆಯ 905 ಬೂತ್‍ಗಳಲ್ಲಿ ಪಕ್ಷದ ಧ್ವಜಾರೋಹಣದೊಂದಿಗೆ ಆಚರಿಸಲಾಗಿದೆ.ಜಿಲ್ಲೆಯ ಪ್ರತೀ ಮಹಾ ಶಕ್ತಿ ಕೇಂದ್ರಗಳಿಗೆ ಜಿಲ್ಲಾ ತಂಡ ನಿವಾಸಿ ಪ್ರವಾಸ ಕೈಗೊಂಡುಮಹಾ ಶಕ್ತಿಕೇಂದ್ರ ಸಹಿತ ಶಕ್ತಿ ಕೇಂದ್ರ ಮತ್ತು ಬೂತ್‍ಗಳ ಸಶಕ್ತೀಕರಣ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದೆ. ರೈತ ಸ್ನೇಹಿ ಕೇಂದ್ರ ಕೃಷಿ ಕಾಯ್ದೆಯನ್ನು ಬೆಂಬಲಿಸಿ ಪಕ್ಷದವತಿಯಿಂದ ಮೇ ತಿಂಗಳಲ್ಲಿಬೈಂದೂರಿನಿಂದ ಹೆಜಮಾಡಿವರೆಗೆ ಬೃಹತ್ ಪಾದಯಾತ್ರೆ ಆಯೋಜಿಸಲಾಗುವುದು. ಮೇ 1 ಮತ್ತು 2ರಂದು ಬಿಜೆಪಿ ಜಿಲ್ಲಾ ಮಟ್ಟದ ಕ್ರೀಡಾ ಕೂಟ ನಡೆಯಲಿದೆ. ಕಾಪು ಪುರಸಭೆ ಚುನಾವಣೆಯಲ್ಲೂ ಬಿಜೆಪಿ ಬಹುಮತ ಸಾಧಿಸುವ ಗುರಿಯೊಂದಿಗೆ ತೊಡಗಿಸಿಕೊಳ್ಳಲಿದೆ. ನಿರಂತರ ಚಟುವಟಿಕೆಗಳ ಮೂಲಕ ಪಕ್ಷ ಸಂಘಟನೆಯ ವೇಗವನ್ನು ಹೆಚ್ಚಿಸುವಂತೆ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಅವರು ಕರೆ ನೀಡಿದರು.

 

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಸಂಘಟನಾತ್ಮಕವಾಗಿ ಉಡುಪಿ ಜಿಲ್ಲೆಗೆ ಉತ್ತಮ ಹೆಸರಿದೆ. ಅದನ್ನು ಉಳಿಸಿಕೊಂಡು ಬೆಳೆಸಿಕೊಂಡು ಹೋಗುವ ಜವಾಬ್ದಾರಿ ಪಕ್ಷದ ಪ್ರತಿಯೊಬ್ಬ ಪದಾಧಿಕಾರಿ, ಜನಪ್ರತಿನಿಧಿ ಮತ್ತು ಕಾರ್ಯಕರ್ತರ ಮೇಲಿದೆ. ವಿವಿಧ ಸ್ತರದ ಪದಾಧಿಕಾರಿಗಳು ತಮ್ಮ ನಿಗದಿತ ಜವಾಬ್ದಾರಿಯನ್ನು ನಿರ್ವಹಿಸಿದಾಗ ಸಂಘಟನಾ ಕಾರ್ಯ ಸುಲಭಸಾಧ್ಯವಾಗುವುದು. ಈ ನಿಟ್ಟಿನಲ್ಲಿ ಎಲ್ಲರ ಸಂಘಟಿತ ಪ್ರಯತ್ನ ಅತೀ ಅಗತ್ಯ ಎಂದರು.

 

ಮುಲ್ಕಿ ಮೂಡಬಿದ್ರೆ ಶಾಸಕ, ಬಿಜೆಪಿ ಜಿಲ್ಲಾ ಪ್ರಭಾರಿ ಉಮಾನಾಥ ಕೋಟ್ಯಾನ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಜನಪರ ಯೋಜನೆಗಳನ್ನು ಕಾರ್ಯಕರ್ತರು ಜನತೆಗೆ ತಲುಪಿಸುವುದು ಅತ್ಯಗತ್ಯ. ಕೇಂದ್ರ ಕೃಷಿ ಕಾಯ್ದೆ ವಿರೋಧಿ ಪ್ರತಿಭಟನೆ ಕಾಂಗ್ರೆಸ್ ಸೇರಿ ನಡೆಸುತ್ತಿರುವ ಷಡ್ಯಂತ್ರ. ರಾಜ್ಯದಿಂದ ಜಿಲ್ಲೆಗೆ ಹಾಗೂ ಜಿಲ್ಲೆಯ ಮೂಲಕ ಮಂಡಲ ಹಾಗೂ ವಿವಿಧ ಸ್ತರಗಳಿಗೆ ತಲುಪುವ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಿಗೆ ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಮಹತ್ವ ನೀಡಬೇಕು ಎಂದರು.

 

ರಾಜ್ಯ ವಿಧಾನ ಪರಿಷತ್ ಸದಸ್ಯ ಅಯನೂರು ಮಂಜುನಾಥ್ ಮಾತನಾಡಿ, ವಿವಿಧ ಚುನಾವಣೆಯಲ್ಲಿ ಪಕ್ಷದ ವತಿಯಿಂದ ಜಯಶಾಲಿಯಾದವರನ್ನು ಗೌರವಿಸುವ ಜೊತೆಗೆ ಪರಾಜಿತರಾದವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಾಗ ಪಕ್ಷ ಸಂಘಟನೆ ಸದೃಢವಾಗುವುದು. ಎಲ್ಲ ವರ್ಗಗಳ ಜನತೆಯ ಆಶೋತ್ತರಗಳಿಗೆ ಸ್ಪಂದಿಸಿ, ಸಮಾಜದ ಜೀವನಾಡಿಯಾಗಿ ಸೇವೆ ಸಲ್ಲಿಸುವುದು ಪಕ್ಷ ಸಂಘಟನೆಗೆ ಪೂರಕವಾಗುವುದು ಎಂದರು.

 

ಬಿಜೆಪಿ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಮಂಗಳೂರು ಮಾತನಾಡಿ ಪಕ್ಷದ ಮುಂದಿನ ಸಂಘಟನಾತ್ಮಕ ಚಟುವಟಿಕೆಗಳ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್ ಜಿಲ್ಲಾ ಕ್ರೀಡಾ ಕೂಟದ ಬಗ್ಗೆ ಮಾಹಿತಿ ನೀಡಿದರು.

 

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ ಹಾಗೂ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಕಾರ್ಯತಂಡದ ಅಪೇಕ್ಷಿತ ಪದಾಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

 

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಸ್ವಾಗತಿಸಿ, ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್ ವಂದಿಸಿದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಜಿ.ಪಂ. ಸದಸ್ಯೆ ರೇಶ್ಮಾ ಉದಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.


Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




Kemmannu Panchayat gets decaying ’Keppa Thodu Ca
View More

All Contacts Numbers for Any Help related to CoronaAll Contacts Numbers for Any Help related to Corona
Land/Houses for Sale in Kallianpur, Santhekatte, Uppor, Nejar, Kemmannu, Malpe, Ambalpady.Land/Houses  for Sale in Kallianpur, Santhekatte, Uppor, Nejar, Kemmannu, Malpe, Ambalpady.
Milarchi Lara from Milagres Cathedral, KallianpurMilarchi Lara from Milagres Cathedral, Kallianpur
HotteTumba Fish Court - UdupiHotteTumba Fish Court - Udupi
Rozaricho Gaanch - December 2020Rozaricho Gaanch - December 2020
Milarchi Lara December 2020Milarchi Lara December 2020
Contact on Going Residential ProjectAl Nayaab Residency, UdupiContact on Going Residential ProjectAl Nayaab Residency, Udupi
Focus Studio, Near Hotel Kidiyoor, UdupiFocus Studio, Near Hotel Kidiyoor, Udupi